ರೈತ ಸಂಘ ಮಂಡ್ಯ ತಾಲೂಕು ಘಟಕದ ಅಧ್ಯಕ್ಷರಾಗಿ ಅಣ್ಣಯ್ಯ ಆಯ್ಕೆ

| Published : Oct 26 2024, 12:59 AM IST

ಸಾರಾಂಶ

ಮಂಡ್ಯ ನಗರದ ಪ್ರವಾಸಿ ಮಂದಿರದಲ್ಲಿ ರಾಜ್ಯ ರೈತ ಸಂಘ ತಾಲೂಕು ಅಧ್ಯಕ್ಷರಾಗಿ ಎಂ.ಎಸ್.ಅಣ್ಣಯ್ಯ ಮತ್ತು ಪ್ರದಾನ ಕಾರ್ಯದರ್ಶಿಯಾಗಿ ಆನಂದ್ ಕುಮಾರ್ ಅವರನ್ನು ಆಯ್ಕೆ ಮಾಡಲಾಯಿತು.

ಕನ್ನಡಪ್ರಭ ವಾರ್ತೆ ಮಂಡ್ಯನಗರದ ಪ್ರವಾಸಿ ಮಂದಿರದಲ್ಲಿ ರಾಜ್ಯ ರೈತ ಸಂಘ ತಾಲೂಕು ಅಧ್ಯಕ್ಷರಾಗಿ ಎಂ.ಎಸ್.ಅಣ್ಣಯ್ಯ ಮತ್ತು ಪ್ರದಾನ ಕಾರ್ಯದರ್ಶಿಯಾಗಿ ಆನಂದ್ ಕುಮಾರ್ ಅವರನ್ನು ಆಯ್ಕೆ ಮಾಡಲಾಯಿತು.

ರೈತ ಸಂಘದ ಜಿಲ್ಲಾಧ್ಯಕ್ಷ ಕೆಂಪೇಗೌಡ ಮಾತನಾಡಿ, ನೂತನ ತಾಲೂಕು ಅಧ್ಯಕ್ಷ ಉಪಾಧ್ಯಕ್ಷ ಸೇರಿದಂತೆ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ರೈತ ಸಂಘದ ಚಟುವಟಿಕೆಯಲ್ಲಿ ಭಾಗವಹಿಸಿ ಸಂಘದ ಅಭಿವೃದ್ಧಿಗೆ ದುಡಿಯಬೇಕು ಎಂದರು.

ಯಾರ ಮೇಲೂ ದ್ವೇಷ ಕಟ್ಟಿಕೊಳ್ಳದೆ ರೈತರ ಸಂಘಕ್ಕೆ ದುಡಿದು ನ್ಯಾಯಯುತವಾಗಿ ಕೆಲಸ ಮಾಡಬೇಕು. ನಿಮಗೆ ನಾವು ಬೆಂಬಲವಾಗಿ ನಿಲ್ಲುತ್ತದೆ ಎಂದರು.

ಈ ವೇಳೆ ಬೂದನೂರು ಪುಟ್ಟಸ್ವಾಮಿ, ಭೂತನ ಹೊಸೂರು ಸಂತೋಷ್, ಮೊತ್ತಳ್ಳಿ ಮಾದೇಗೌಡ, ಮಾರಗೌಡನಹಳ್ಳಿ ನಿಂಗೇಗೌಡ, ಚಿಕ್ಕಬಳ್ಳಿ ನಿಂಗೇಗೌಡ, ಹಂಪಾಪುರ ನಾಗರಾಜ್ ಭಾಗವಹಿಸಿದ್ದರು.

28ರಂದು ಒಂದು ದಿನದ ಕಾರ್ಯಾಗಾರ

ಮಂಡ್ಯ:

ಲೈಂಗಿಕ ದೌರ್ಜನ್ಯ, ಕಿರುಕುಳದಿಂದ ಮಹಿಳೆಯರ ರಕ್ಷಣೆ ಕುರಿತು ಸರ್ಕಾರದ ಅಧಿಕಾರಿಗಳು, ಸಿಬ್ಬಂದಿ, ಆಂತರಿಕ ದೂರು ನಿವಾರಣಾ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರಿಗೆ ನಗರದ ಪಿಇಎಸ್ ಎಂಜಿನಿಯರಿಂಗ್ ಕಾಲೇಜು ಆವರಣದ ಪ್ಲೇಸ್ ಮೆಂಟ್ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ನವದೆಹಲಿಯ ರಾಷ್ಟ್ರೀಯ ಮಹಿಳಾ ಆಯೋಗ, ಬೆಂಗಳೂರಿನ ರಾಜ್ಯ ಮಹಿಳಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಶ್ರಯದಲ್ಲಿ ಅಂದು ಬೆಳಗ್ಗೆ ನಡೆಯುವ ಕಾರ್ಯಾಗಾರವನ್ನು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯ ಕಾರ್ಯದರ್ಶಿ ಮೀನಾಕ್ಷಿ ನೇಗಿ ಉದ್ಘಾಟಿಸಲಿದ್ದು, ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಅಧ್ಯಕ್ಷತೆ ವಹಿಸಲಿದ್ದಾರೆ. ರಾಜ್ಯ ಮಹಿಳಾ ಆಯೋಗದ ಕಾರ್ಯದರ್ಶಿ ಆರ್.ಲತಾ ಪ್ರಾಸ್ತಾವಿಕ ನುಡಿಯನ್ನು ನಡೆಸಲಿದ್ದಾರೆ.

ಕಾರ್ಯಾಗಾರದಲ್ಲಿ ಜಿಲ್ಲಾಧಿಕಾರಿ ಡಾ ಕುಮಾರ, ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಡಾ.ಹೆಚ್. ಎಲ್ ನಾಗರಾಜು ಅತಿಥಿಗಳಾಗಿ ಆಗಮಿಸಲಿದ್ದಾರೆ.ನವೆಂಬರ್ 14ರಿಂದ 17 ರವರೆಗೆ ಕೃಷಿ ಮೇಳ

ಮಂಡ್ಯ:

ಬೆಂಗಳೂರು ಕೃಷಿ ವಿಶ್ವ ವಿದ್ಯಾನಿಲಯವು ನವೆಂಬರ್ 14 ರಿಂದ 17 ರವೆರೆಗೆ ಬೆಂಗಳೂರು ಜಿಕೆವಿಕೆಯಲ್ಲಿ ಕೃಷಿ ಮೇಳವನ್ನು ಆಯೋಜಿಸುತ್ತಿದೆ. ಜಿಲ್ಲೆಯ ಆಸಕ್ತ ರೈತರು ಕೃಷಿ ಮೇಳದಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳಬಹುದು ಎಂದು ವಿ ಸಿ ಫಾರ್ಮ್ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರು ತಿಳಿಸಿದ್ದಾರೆ.