ಕೋಟ ವಿವೇಕ ವಿದ್ಯಾ ಸಂಸ್ಥೆಗಳ ವಾರ್ಷಿಕೋತ್ಸವ

| Published : Dec 07 2024, 12:31 AM IST

ಕೋಟ ವಿವೇಕ ವಿದ್ಯಾ ಸಂಸ್ಥೆಗಳ ವಾರ್ಷಿಕೋತ್ಸವ
Share this Article
  • FB
  • TW
  • Linkdin
  • Email

ಸಾರಾಂಶ

ಕೋಟ ವಿವೇಕ ವಿದ್ಯಾಸಂಸ್ಥೆಯ ವಠಾರದಲ್ಲಿ ಕೋಟ ವಿವೇಕ ವಿದ್ಯಾ ಸಂಸ್ಥೆಗಳ ವಾರ್ಷಿಕೋತ್ಸವ ಸಂಭ್ರಮ ಸಾಫಲ್ಯ -೨೦೨೪ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ಕೋಟ

ವಿವೇಕ ವಿದ್ಯಾಕೇಂದ್ರವು ಶೈಕ್ಷಣಿಕ ದೇಗುಲದಂತೆ ಶ್ರೇಷ್ಠತೆಯನ್ನು ಹೊಂದಿದೆ ಎಂದು ಮಣಿಪಾಲ ಎಂಐಟಿಯ ಉಪನ್ಯಾಸಕ ಪ್ಗರೊ. ಡಾ.ವಾದಿರಾಜ್ ಭಟ್ ಜಿ.ಆರ್ ನುಡಿದರು. ಅವರು ಶುಕ್ರವಾರ ವಿದ್ಯಾಸಂಸ್ಥೆಯ ವಠಾರದಲ್ಲಿ ಕೋಟ ವಿವೇಕ ವಿದ್ಯಾ ಸಂಸ್ಥೆಗಳ ವಾರ್ಷಿಕೋತ್ಸವ ಸಂಭ್ರಮ ಸಾಫಲ್ಯ -೨೦೨೪ ಕಾರ್ಯಕ್ರಮದಲ್ಲಿ ಮಾತನಾಡಿದರು.ಈ ವಿದ್ಯಾಲಯದಲ್ಲಿ ಶಿಕ್ಷಣ ಪಡೆದ ಅದೆಷ್ಟೊ ಲಕ್ಷಾಂತರ ಮಂದಿ ದೇಶವಿದೇಶದಲ್ಲಿ ಉನ್ನತ ಸ್ಥಾನದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ವಿವೇಕ ಶಿಕ್ಷಣಕ್ಕೆ ಸೀಮಿತವಾಗದೆ ಪಠ್ಯೇತರ ಚಟುವಟಿಯಲ್ಲೂ ಹೆಗ್ಗಳಿಕೆ ಗಳಿಸಿದೆ, ಈ ವಿದ್ಯಾದೇಗುಲದಲ್ಲಿ ಶೈಕ್ಷಣಿತ ಕ್ರಾಂತಿಯೇ ಆಗಿದೆ ಎಂದರು. ಇದೇ ಸಂದರ್ಭದಲ್ಲಿ ಪ್ರೋ.ಡಾ.ವಾದಿರಾಜ್ ಭಟ್ ಜಿ.ಆರ್., ಮಣಿಪಾಲ ಕೆಎಂಸಿ ವೈದ್ಯ ಡಾ.ನವೀನ್ ಕುಮಾರ್ ಎ.ಎನ್., ವಿಜ್ಞಾನಿ ಡಾ. ದಿವ್ಯಾ ಅಡಿಗ ಸಾಲಿಗ್ರಾಮ ಅವರನ್ನು ಗೌರವಿಸಲಾಯಿತು.ಅಧ್ಯಕ್ಷತೆಯನ್ನು ವಿವೇಕ ವಿದ್ಯಾಸಂಘದ ಅಧ್ಯಕ್ಷ ಸಿಎ ಪಿ.ಪ್ರಭಾಕರ ಮಯ್ಯ ವಹಿಸಿದ್ದರು. ಅಭ್ಯಾಗತರಾಗಿ ವಿದ್ಯಾಸಂಘದ ಕಾರ್ಯದರ್ಶಿ ಎಂ.ರಾಮದೇವ ಐತಾಳ್ ಆಗಮಿಸಿದ್ದರು. ಫ್ರೌಢಶಾಲಾ ಮುಖ್ಯ ಶಿಕ್ಷಕ ಕೆ.ಜಗದೀಶ್ ಹೊಳ್ಳ, ಆಂಗ್ಲಮಾಧ್ಯಮ ವಿಭಾಗದ ಮುಖ್ಯ ಶಿಕ್ಷಕಿ ಪ್ರೀತಿರೇಖಾ, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಚೇಂಪಿ ರಮಾನಂದ ಭಟ್ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲ ಕೆ.ಜಗದೀಶ್ ನಾವಡ ಸ್ವಾಗತಿಸಿದರು. ಉಪನ್ಯಾಸಕಿ ಸುಜಾತ ಕಾರ್ಯಕ್ರಮ ನಿರೂಪಿಸಿದರು. ಬಾಲಕರ ಪ್ರೌಢಶಾಲಾ ಮುಖ್ಯ ಶಿಕ್ಷಕ ವೆಂಕಟೇಶ ಉಡುಪ ವಂದಿಸಿದರು. ಅಧ್ಯಕ್ಷತೆಯನ್ನು ವಿವೇಕ ವಿದ್ಯಾಸಂಘದ ಅಧ್ಯಕ್ಷ ಸಿಎ ಪಿ.ಪ್ರಭಾಕರ ಮಯ್ಯ ವಹಿಸಿದ್ದರು. ಅಭ್ಯಾಗತರಾಗಿ ವಿದ್ಯಾಸಂಘದ ಕಾರ್ಯದರ್ಶಿ ಎಂ.ರಾಮದೇವ ಐತಾಳ್ ಆಗಮಿಸಿದ್ದರು. ಫ್ರೌಢಶಾಲಾ ಮುಖ್ಯ ಶಿಕ್ಷಕ ಕೆ.ಜಗದೀಶ್ ಹೊಳ್ಳ, ಆಂಗ್ಲಮಾಧ್ಯಮ ವಿಭಾಗದ ಮುಖ್ಯ ಶಿಕ್ಷಕಿ ಪ್ರೀತಿರೇಖಾ, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಚೇಂಪಿ ರಮಾನಂದ ಭಟ್ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲ ಕೆ.ಜಗದೀಶ್ ನಾವಡ ಸ್ವಾಗತಿಸಿದರು. ಉಪನ್ಯಾಸಕಿ ಸುಜಾತ ಕಾರ್ಯಕ್ರಮ ನಿರೂಪಿಸಿದರು. ಬಾಲಕರ ಪ್ರೌಢಶಾಲಾ ಮುಖ್ಯ ಶಿಕ್ಷಕ ವೆಂಕಟೇಶ ಉಡುಪ ವಂದಿಸಿದರು.