ಸಾರಾಂಶ
ಯಕ್ಷಸಿರಿ ತರಗತಿಯ ವಿದ್ಯಾರ್ಥಿ ದಿ. ಯಶ್ವಿತ್ ಅಗರಮೇಲು ಕುಟುಂಬಕ್ಕೆ ಮರಣೋತ್ತರ ಆರ್ಥಿಕ ಸಹಾಯ ನೀಡಲಾಗುವುದು.
ಕನ್ನಡಪ್ರಭವಾರ್ತೆ ಮೂಲ್ಕಿ
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ , ಸುರತ್ಕಲ್ ಘಟಕದ ಚತುರ್ಥ ವಾರ್ಷಿಕೋತ್ಸವ ಸಮಾರಂಭ ಏ. 14 ರಂದು ಸಂಜೆ 6.30 ಕ್ಕೆ ಸುರತ್ಕಲ್ ಬಂಟರ ಭವನದ ಬಳಿ ನಡೆಯಲಿದೆ.ಸಮಾರಂಭವನ್ನು ಯಕ್ಷಧ್ರುವ ಯಕ್ಷ ಶಿಕ್ಷಣದ ಪ್ರಧಾನ ಸಂಚಾಲಕ ಪಣಂಬೂರು ವಾಸುದೇವ ಐತಾಳ ಉದ್ಘಾಟಿಸಲಿದ್ದು ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಉಪಸ್ಥಿತಿಯಲ್ಲಿ ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುರತ್ಕಲ್ ಘಟಕದ ಅಧ್ಯಕ್ಷ ಸುಧಾಕರ ಎಸ್ ಪೂಂಜ ವಹಿಸಲಿದ್ದಾರೆ. ಫೌಂಡೇಶನ್ ನ ಟ್ರಸ್ಟಿ, ಉದ್ಯಮಿ ಚಂದ್ರಶೇಖರ ಮಾಡ ಕುದ್ರಾಡಿಗುತ್ತು, ಕೇಂದ್ರೀಯ ಮಹಿಳಾ ಘಟಕ ಗೌರವಾಧ್ಯಕ್ಷೆ ಆರತಿ ಆಳ್ವ, ಗೋವಿಂದ ದಾಸ ಕಾಲೇಜ್ ನ ನಿವೃತ್ತ ಉಪ ಪ್ರಾಂಶುಪಾಲ ಪ್ರೊ. ರಮೇಶ್ ಭಟ್ ಎಸ್ ಜಿ, ಲಲಿತಾ ಕಲಾ ಆಟ್ಸ್೯ ನ ಮಾಲೀಕ ಧನಪಾಲ್ ಶೆಟ್ಟಿಗಾರ್ ತಡಂಬೈಲ್ ಮುಖ್ಯ ಅತಿಥಿಗಳಾಗಲಿದ್ದಾರೆ.ಸಮಾರಂಭದಲ್ಲಿ ಹಿರಿಯ ಯಕ್ಷಗಾನ ಕಲಾವಿದ ನೆಲ್ಲಿಕಟ್ಟೆ ನಾರಾಯಣ ಹಾಸ್ಯಗಾರ್ ಅವರನ್ನು ಸನ್ಮಾನಿಸಲಾಗುವುದು. ಅದೇ ರೀತಿ ಯಕ್ಷಗಾನ ತಾಳಮದ್ದಲೆಯಲ್ಲಿ ಸಾಧನೆಗೈದ ಮಹಾಬಲ ಶೆಟ್ಟಿ ಜೋಕಟ್ಟೆ, ಜಯಂತಿ ಹೊಳ್ಳ ಕೃಷ್ಣಾಪುರ, ವಾಸುದೇವ ಆಚಾರ್ಯ ಕುಳಾಯಿ, ಕರುಣಾಕರ ಪೂಜಾರಿ ಮಧ್ಯ, ಲಿಂಗಪ್ಪ ಶೆಟ್ಟಿ ಕೃಷ್ಣಾಪುರ ಅವರನ್ನು ಗೌರವಿಸಲಾಗುವುದು.ಯಕ್ಷಸಿರಿ ತರಗತಿಯ ವಿದ್ಯಾರ್ಥಿ ದಿ. ಯಶ್ವಿತ್ ಅಗರಮೇಲು ಕುಟುಂಬಕ್ಕೆ ಮರಣೋತ್ತರ ಆರ್ಥಿಕ ಸಹಾಯ ನೀಡಲಾಗುವುದು. ಬಳಿಕ ಪಾವಂಜೆಯ ನಾಗವೃಜ ಕ್ಷೇತ್ರದ ಶ್ರೀ ಜ್ಞಾನ ಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿಯವರಿಂದ ಅಯೋಧ್ಯಾ ದೀಪ ಯಕ್ಷಗಾನ ಪ್ರದರ್ಶನ ಗೊಳ್ಳಲಿದೆ ಎಂದು ಸುರತ್ಕಲ್ ಘಟಕದ ಪ್ರಧಾನ ಕಾರ್ಯದರ್ಶಿ ಬಾಳ ಗಂಗಾಧರ ಪೂಜಾರಿ ಚೇಳಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.