ಸಾರಾಂಶ
-ಚಂದಾಪಟ್ಟಿ ಸಂಗ್ರಹಿಸದೆ ಅದ್ಧೂರಿ, ವಿಶಿಷ್ಠ ಬಸವ ಜಯಂತಿಗೆ ನಿರ್ಧಾರ । ಶಾಸಕ ಎಂವೈ ಪಾಟೀಲ್
-----ಕನ್ನಡಪ್ರಭ ವಾರ್ತೆ ಕಲಬುರಗಿ: ಕರ್ನಾಟಕದ ಸಾಂಸ್ಕೃತಿ ನಾಯಕ ವಿಶ್ವಗುರು ಬಸವಣ್ಣನವರ 892ನೇ ಜಯಂತ್ಯುತ್ಸವನ್ನು ಏ.29 ಹಾಗೂ 30ರಂದು ಎರಡು ದಿನಗಳ ಕಾಲ ಈ ಅತ್ಯಂತ ವಿಜೃಂಭಣೆ ಹಾಗೂ ವಿಶಿಷ್ಠ ರೀತಿಯಲ್ಲಿ ಆಚರಿಸಲಾಗುವುದು ಎಂದು ಬಸವ ಜಯಂತಿ ಉತ್ಸವ ಸಮಿತಿ ಅಧ್ಯಕ್ಷ ಶಾಸಕ ಎಂ.ವೈ. ಪಾಟೀಲ ತಿಳಿಸಿದರು.
ಏ. 29ರಂದು ಸಂಜೆ 5 ಗಂಟೆಗೆ ನಗರದ ಶರಣಬಸವೇಶ್ವರ ಜಾತ್ರಾ ಮೈದಾನದಲ್ಲಿ ಬಸವಾಭಿಮಾನಿಗಳ ಬೃಹತ್ ಬಹಿರಂಗ ಸಮಾವೇಶ ಜರುಗಲಿದೆ. 30ರಂದು ಬೆಳಗ್ಗೆ 7.30ಕ್ಕೆ ಜಗತ್ ವೃತ್ತದ ಬಸವೇಶ್ವರ ಪುತ್ಥಳಿ ಆವರಣದಲ್ಲಿ ಷಟಸ್ಥಲ ಧ್ವಜಾರೋಹಣ, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ರಕ್ತದಾನ ಶಿಬಿರ ಆಯೋಜಿಸಲಾಗಿದ್ದು, ಸಂಜೆ 4 ಗಂಟೆಗೆ ನಗರೇಶ್ವರ ಶಾಲೆಯಿಂದ ಸೂಪರ್ ಮಾರ್ಕೆಟ್ ಮಾರ್ಗವಾಗಿಬಸವಣ್ಣನವರ ಭಾವಚಿತ್ರ ಹಾಗೂ ವಿವಿಧ ಕಾಯಕ ಶರಣರ ಭಾವಚಿತ್ರಗಳ ಮೆರವಣಿಗೆ ನಡೆಯಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
29ರಂದು ಸಂಜೆ ನಡೆಯುವ ಬಹಿರಂಗ ಸಭೆಯ ಸಾನ್ನಿಧ್ಯವನ್ನು ಶಿರೂರಿನ ಬಸವಲಿಂಗ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಲಿದ್ದಾರೆ. ಬೆಳವಿಯ ಶರಣಬಸವ ದೇವರು ನೇತೃತ್ವ, ಯಡ್ರಾಮಿ ವಿರಕ್ತ ಮಠದ ಸಿದ್ಧಲಿಂಗ ಸ್ವಾಮಿಗಳು ಸಾನ್ನಿಧ್ಯ ವಹಿಸಲಿದ್ದಾರೆ. ಶರಣಬಸವವೇಶ್ವರ ವಿದ್ಯಾವರ್ಧಕ ಸಂಘದ ಚೇರ್ ಪರ್ಸ್‍ನ್ ಡಾ. ದಾಕ್ಷಾಯಿಣಿ ಎಸ್. ಅಪ್ಪ ಅವರು ಉದ್ಘಾಟಿಸಲಿದ್ದಾರೆ. "ವ್ಯಕ್ತಿತ್ವ ಮತ್ತು ಬಸವಣ್ಣ " ವಿಷಯ ಕುರಿತು ಚಿಂತಕ ಎಸ್.ಜಿ. ಸಿದ್ಧರಾಮಯ್ಯ ಉಪನ್ಯಾಸ ನೀಡಲಿದ್ದಾರೆ. ಶಾಸಕ ಎಂ.ವೈ. ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಹೇಳಿದರು.ಮುಖ್ಯ ಅತಿಥಿಗಳಾಗಿ ಸಚಿವರಾದ ಪ್ರಿಯಾಂಕ್ ಖರ್ಗೆ, ಶರಣಬಸಪ್ಪ ದರ್ಶನಾಪುರ, ಡಾ. ಶರಣಪ್ರಕಾಶ ಪಾಟೀಲ, ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್. ಪಾಟೀಲ, ಶಾಸಕರಾದ ಡಾ. ಅಜಯಸಿಂಗ್, ಕನೀಜ್ ಫಾತಿಮಾ, ಅಲ್ಲಮಪ್ರಭು ಪಾಟೀಲ, ಬಸವರಾಜ ಮತ್ತಿಮಡು, ಸಂಸದರಾದ ರಾಧಾಕೃಷ್ಣ ದೊಡ್ಡಮನಿ, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಯ ಶಾಸಕರು, ಮಾಜಿ ಶಾಸಕರು, ಸಂಸದರು ಹಾಗೂ ಸಮಾಜದ ಪ್ರಮುಖರು ಭಾಗವಿಸಲಿದ್ದಾರೆ ಎಂದು ತಿಳಿಸಿದರು.
ಶಾಸಕರಾದ ಬಿ.ಆರ್. ಪಾಟೀಲ, ಶಶೀಲ್ ಜಿ. ನಮೋಶಿ, ವೀರಶೈವ ಲಿಂಗಾಯತ ಮಹಸಭಾ ಜಿಲ್ಲಾಧ್ಯಕ್ಷ ಶರಣು ಮೋದಿ, ಮುಖಂಡರಾದ ಚಂದು ಪಾಟೀಲ, ಸೋಮಶೇಖರ ಗೋನಾಯಕ, ಅರುಣಕುಮಾರ ಪಾಟೀಲ, ಶರಣು ಭೂಸನೂರ, ಸಂಗಮೇಶ್ವರ ನಾಗನಳ್ಳಿ, ಡಾ. ಶ್ರೀಶೈಲ ಘೂಳಿ, ಪ್ರಭುಲಿಂಗ ಮಹಾಗಾಂವಕರ್, ಸಂಗಮೇಶ ನಾಗನಳ್ಳಿ, ಆರ್.ಕೆ. ಹುಡಗಿ, ಆರ್.ಜಿ. ಶೆಟಗಾರ ಇತರರು ಸುದ್ದಿಗೋಷ್ಠಿಯಲ್ಲಿ ಇದ್ದರು.....ಕೋಟ್...
ಇದೇ ಮೊದಲ ಬಾರಿಗೆ ವೀರಶೈವ-ಲಿಂಗಾಯತ ಸಮಾಜದ ಎಲ್ಲ ವಿವಿಧ ಕಾಯಕ ಸಮಾಜಗಳ ಸಂಘಟನೆ, ಒಳಪಂಗಡ ಮರೆತು ಒಂದಾಗಿ ಬಸವ ಜಯಂತಿ ಆಚರಿಸಲಾಗುತ್ತಿದೆ. ಮೇಲಾಗಿ ಈ ಬಾರಿ ಯಾರ ಬಳಿಯೂ ಚಂದಾಪಟ್ಟಿ ಕೂಡ ಎತ್ತಿಲ್ಲ. ಸಮಾಜದ ಮುಖಂಡರು ತನು, ಮನ, ಧನ ಸೇವೆ ಸಲ್ಲಿಸಲು ಮುಂದೆ ಬಂದಿದ್ದಾರೆ.-ಎಂ.ವೈ. ಪಾಟೀಲ, ಶಾಸಕರು, ಬಸವ ಜಯಂತ್ಯುತ್ಸವ ಸಮಿತಿ ಅಧ್ಯಕ್ಷರು, ಕಲಬುರಗಿ
-----ಕನ್ನಡಪ್ರಭ ವಾರ್ತೆ ಕಲಬುರಗಿ
ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ 892ನೇ ಜಯಂತ್ಯುತ್ಸವನ್ನು ಏ.29 ಹಾಗೂ 30ರಂದು ಎರಡು ದಿನಗಳ ಕಾಲ ಈ ಅತ್ಯಂತ ವಿಜೃಂಭಣೆ ಹಾಗೂ ವಿಶಿಷ್ಠ ರೀತಿಯಲ್ಲಿ ಆಚರಿಸಲಾಗುವುದು ಎಂದು ಬಸವ ಜಯಂತಿ ಉತ್ಸವ ಸಮಿತಿ ಅಧ್ಯಕ್ಷ ಶಾಸಕ ಎಂ.ವೈ. ಪಾಟೀಲ ತಿಳಿಸಿದರು.ಏ.29ರಂದು ಸಂಜೆ 5ಗಂಟೆಗೆ ನಗರದ ಶರಣಬಸವೇಶ್ವರ ಜಾತ್ರಾ ಮೈದಾನದಲ್ಲಿ ಬಸವಾಭಿಮಾನಿಗಳ ಬೃಹತ್ ಬಹಿರಂಗ ಸಮಾವೇಶ ಜರುಗಲಿದೆ. 30ರಂದು ಬೆಳಗ್ಗೆ 7.30ಕ್ಕೆ ಜಗತ್ ವೃತ್ತದ ಬಸವೇಶ್ವರ ಪುತ್ಥಳಿ ಆವರಣದಲ್ಲಿ ಷಟಸ್ಥಲ ಧ್ವಜಾರೋಹಣ, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ರಕ್ತದಾನ ಶಿಬಿರ ಆಯೋಜಿಸಲಾಗಿದ್ದು, ಸಂಜೆ 4 ಗಂಟೆಗೆ ನಗರೇಶ್ವರ ಶಾಲೆಯಿಂದ ಸೂಪರ್ ಮಾರ್ಕೆಟ್ ಮಾರ್ಗವಾಗಿ
ಬಸವಣ್ಣನವರ ಭಾವಚಿತ್ರ ಹಾಗೂ ವಿವಿಧ ಕಾಯಕ ಶರಣರ ಭಾವಚಿತ್ರಗಳ ಮೆರವಣಿಗೆ ನಡೆಯಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.29ರಂದು ಸಂಜೆ ನಡೆಯುವ ಬಹಿರಂಗ ಸಭೆಯ ಸಾನ್ನಿಧ್ಯವನ್ನು ಶಿರೂರಿನ ಬಸವಲಿಂಗ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಲಿದ್ದಾರೆ. ಬೆಳವಿಯ ಶರಣಬಸವ ದೇವರು ನೇತೃತ್ವ, ಯಡ್ರಾಮಿ ವಿರಕ್ತ ಮಠದ ಸಿದ್ಧಲಿಂಗ ಸ್ವಾಮಿಗಳು ಸಾನ್ನಿಧ್ಯ ವಹಿಸಲಿದ್ದಾರೆ. ಶರಣಬಸವವೇಶ್ವರ ವಿದ್ಯಾವರ್ಧಕ ಸಂಘದ ಚೇರ್ ಪರ್ಸ್‍ನ್ ಡಾ. ದಾಕ್ಷಾಯಿಣಿ ಎಸ್. ಅಪ್ಪ ಅವರು ಉದ್ಘಾಟಿಸಲಿದ್ದಾರೆ. "ವ್ಯಕ್ತಿತ್ವ ಮತ್ತು ಬಸವಣ್ಣ " ವಿಷಯ ಕುರಿತು ಚಿಂತಕ ಎಸ್.ಜಿ. ಸಿದ್ಧರಾಮಯ್ಯ ಉಪನ್ಯಾಸ ನೀಡಲಿದ್ದಾರೆ. ಶಾಸಕ ಎಂ.ವೈ. ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಸಚಿವರಾದ ಪ್ರಿಯಾಂಕ್ ಖರ್ಗೆ, ಶರಣಬಸಪ್ಪ ದರ್ಶನಾಪುರ, ಡಾ. ಶರಣಪ್ರಕಾಶ ಪಾಟೀಲ, ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್. ಪಾಟೀಲ, ಶಾಸಕ ಡಾ. ಅಜಯಸಿಂಗ್, ಕನೀಜ್ ಫಾತಿಮಾ, ಅಲ್ಲಮಪ್ರಭು ಪಾಟೀಲ, ಬಸವರಾಜ ಮತ್ತಿಮಡು, ಸಂಸದ ರಾಧಾಕೃಷ್ಣ ದೊಡ್ಡಮನಿ, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಯ ಶಾಸಕರು, ಮಾಜಿ ಶಾಸಕರು, ಸಂಸದರು ಹಾಗೂ ಸಮಾಜದ ಪ್ರಮುಖರು ಭಾಗವಿಸಲಿದ್ದಾರೆ ಎಂದು ತಿಳಿಸಿದರು.ಶಾಸಕರಾದ ಬಿ.ಆರ್. ಪಾಟೀಲ, ಶಶೀಲ್ ಜಿ. ನಮೋಶಿ, ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಶರಣು ಮೋದಿ, ಮುಖಂಡರಾದ ಚಂದು ಪಾಟೀಲ, ಸೋಮಶೇಖರ ಗೋನಾಯಕ, ಅರುಣಕುಮಾರ ಪಾಟೀಲ, ಶರಣು ಭೂಸನೂರ, ಸಂಗಮೇಶ್ವರ ನಾಗನಳ್ಳಿ, ಡಾ. ಶ್ರೀಶೈಲ ಘೂಳಿ, ಪ್ರಭುಲಿಂಗ ಮಹಾಗಾಂವಕರ್, ಸಂಗಮೇಶ ನಾಗನಳ್ಳಿ, ಆರ್.ಕೆ. ಹುಡಗಿ, ಆರ್.ಜಿ. ಶೆಟಗಾರ ಇತರರು ಸುದ್ದಿಗೋಷ್ಠಿಯಲ್ಲಿ ಇದ್ದರು.
ಕೋಟ್...ಇದೇ ಮೊದಲ ಬಾರಿಗೆ ವೀರಶೈವ-ಲಿಂಗಾಯತ ಸಮಾಜದ ಎಲ್ಲ ವಿವಿಧ ಕಾಯಕ ಸಮಾಜಗಳ ಸಂಘಟನೆ, ಒಳಪಂಗಡ ಮರೆತು ಒಂದಾಗಿ ಬಸವ ಜಯಂತಿ ಆಚರಿಸಲಾಗುತ್ತಿದೆ. ಮೇಲಾಗಿ ಈ ಬಾರಿ ಯಾರ ಬಳಿಯೂ ಚಂದಾ ಪಟ್ಟಿ ಕೂಡ ಎತ್ತಿಲ್ಲ. ಸಮಾಜದ ಮುಖಂಡರುಗಳು ಸ್ವಚ್ಛೆಯಿಂದ ತನು,ಮನ, ಧನ ಸೇವೆ ಸಲ್ಲಿಸಲು ಮುಂದೆ ಬಂದಿದ್ದಾರೆ.
-ಎಂ.ವೈ. ಪಾಟೀಲ, ಶಾಸಕರು, ಬಸವ ಜಯಂತ್ಯುತ್ಸವ ಸಮಿತಿ ಅಧ್ಯಕ್ಷರು, ಕಲಬುರಗಿ-------------
ಫೋಟೋ- ಬಸವ 1 ಮತ್ತು ಬಸವ 2ಕಲಬುರಗಿಯಲ್ಲಿಂದು ಬಸವ ಉತ್ಸವ ಸಮೀತಿ ಅದ್ಯಕ್ಷರಾದ ಹಿರಿಯ ಸಾಸಕ ಎಂವೈ ಪಾಟೀಲರು ಸುದ್ದಿಗೋಷ್ಠಿ ನಡೆಸಿದರು.
--------------ಗಮನಿಸಿರಿ... ಜಾಹೀರಾತು ಸಂಬಂಧಿ ಸುದ್ದಿ ಇದಾಗಿದೆ. ಮುಂದಿನ 2 ದಿನಕ್ಕಾಗಿ ಇವರಿಗೆ ಜಾಹೀರಾತಚ ಕೇಳೋದಿದೆ.