ಯಕ್ಷ ಸಿರಿ ಯಕ್ಷಗಾನ ತರಬೇತಿ ಕೇಂದ್ರದ ವಾರ್ಷಿಕೋತ್ಸವ

| Published : Oct 20 2025, 01:04 AM IST

ಯಕ್ಷ ಸಿರಿ ಯಕ್ಷಗಾನ ತರಬೇತಿ ಕೇಂದ್ರದ ವಾರ್ಷಿಕೋತ್ಸವ
Share this Article
  • FB
  • TW
  • Linkdin
  • Email

ಸಾರಾಂಶ

ಸುರತ್ಕಲ್ ಬಂಟರ ಸಂಘದ ವಠಾರದಲ್ಲಿ ಬಂಟರ ಸಂಘ ಸುರತ್ಕಲ್ ವತಿಯಿಂದ ನಡೆಸಲ್ಪಡುವ ಯಕ್ಷ ಸಿರಿ ಯಕ್ಷಗಾನ ತರಬೇತಿ ಕೇಂದ್ರದ ತೃತೀಯ ವಾರ್ಷಿಕೋತ್ಸವ ಸಮಾರಂಭ ನಡೆಯಿತು.

ಕನ್ನಡಪ್ರಭ ವಾರ್ತೆ ಮೂಲ್ಕಿ

ಯಕ್ಷಗಾನ ಎಲ್ಲ ಕಲಾ ಪ್ರಕಾರಗಳನ್ನು ಹೊಂದಿರುವ ಶ್ರೇಷ್ಠವಾದ ಕಲೆಯಾಗಿದ್ದು, ಯಕ್ಷಗಾನ ಕಲಾವಿದನಿಗೆ ಭಾಷಾ ಶುದ್ಧಿ ಮತ್ತು ಸಂವಹನಾ ಸಾಮರ್ಥ್ಯವಿದೆ. ಪುರಾಣದ ಜ್ಞಾನ ಸಂಪಾದನೆಗೆ ಯಕ್ಷಗಾನ ಕಲೆ ಪೂರಕ. ಮಕ್ಕಳ ವ್ಯಕ್ತಿತ್ವದ ಸಕಾರಾತ್ಮಕ ಬೆಳವಣಿಗೆಗೆ ಸಹಕಾರಿ ಎಂದು ಸುರತ್ಕಲ್‌ ಗೋವಿಂದದಾಸ ಕಾಲೇಜಿನ ಆಡಳಿತಾತ್ಮಕ ನಿರ್ದೇಶಕ ರಮೇಶ್ ಭಟ್ ಎಸ್.ಜಿ. ಹೇಳಿದರು.

ಸುರತ್ಕಲ್ ಬಂಟರ ಸಂಘದ ವಠಾರದಲ್ಲಿ ನಡೆದ ಬಂಟರ ಸಂಘ ಸುರತ್ಕಲ್ ವತಿಯಿಂದ ನಡೆಸಲ್ಪಡುವ ಯಕ್ಷ ಸಿರಿ ಯಕ್ಷಗಾನ ತರಬೇತಿ ಕೇಂದ್ರದ ತೃತೀಯ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಸುರತ್ಕಲ್ ಬಂಟರ ಸಂಘ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ರಾಷ್ಟ್ರಮಟ್ಟದಲ್ಲಿ ಸಾಧನೆಗೈದ ಹಾಗೂ ಪ್ರಸಕ್ತ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಶೇ.90 ಮತ್ತು ಅದಕ್ಕಿಂತ ಹೆಚ್ಚು ಅಂಕ ಗಳಿಸಿದ ಯಕ್ಷಸಿರಿಯ ವಿದ್ಯಾಥಿಗಳನ್ನು ಅಭಿನಂದಿಸಲಾಯಿತು.

ಉದ್ಯಮಿ ಸತೀಶ್ ಮುಂಚೂರು, ದ.ಕ. ಜಿಲ್ಲಾ ಬಿಜೆಪಿ ವಕ್ತಾರ ರಾಜ್‌ ಗೋಪಾಲ್ ರೈ, ಹೋಟೆಲ್ ಉದ್ಯಮಿ ಚಂದ್ರಹಾಸ ಶೆಟ್ಟಿ ಕಂಫರ್ಟ್‌, ದೀಪಕ್ ಶೆಟ್ಟಿ ಲಿಂಗಮಾರುಗುತ್ತು, ಮಮತಾ ಪ್ರೇಮ್‌ ನಾಥ್ ಹೆಗ್ಡೆ, ಸೀಮಾ ಶೆಟ್ಟಿ ಸುಭಾಷಿತನಗರ, ಸಹನಾ ರಾಜೇಶ್ ರೈ, ಯಕ್ಷಗುರು ರಾಕೇಶ್ ರೈ ಅಡ್ಕ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸಂಘ ಮಾಜಿ ಅಧ್ಯಕ್ಷ ಸುಧಾಕರ್ ಎಸ್. ಪೂಂಜಾ, ಸಂಘ ಉಪಾಧ್ಯಕ್ಷ ಪ್ರವೀಣ್ ಪಿ. ಶೆಟ್ಟಿ, ಕೋಶಾಧಿಕಾರಿ ರತ್ನಾಕರ ಶೆಟ್ಟಿ, ಸಂಘಟನಾ ಕಾರ್ಯದರ್ಶಿ ಪುಷ್ಪರಾಜ್ ಶೆಟ್ಟಿ ಕುಡುಂಬೂರು, ಸಾಂಸ್ಕೃತಿಕ ಕಾರ್ಯದರ್ಶಿ ದೇವೇಂದ್ರ ಶೆಟ್ಟಿ, ಕ್ರೀಡಾ ಕಾರ್ಯದರ್ಶಿ ಪುಷ್ಪರಾಜ್ ಶೆಟ್ಟಿ ಮಧ್ಯ, ಮಹಿಳಾ ವೇದಿಕೆ ಅಧ್ಯಕ್ಷೆ ಸರೋಜ ತಾರಾನಾಥ್ ಶೆಟ್ಟಿ ಉಪಸ್ಥಿತರಿದ್ದರು.

ಅನೂಪ್ ಶೆಟ್ಟಿ ಕಟ್ಲ ದೇವರನ್ನು ಸ್ತುತಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ಲೀಲಾಧರ್ ಶೆಟ್ಟಿ ಸ್ವಾಗತಿಸಿದರು. ಕವಿತಾ ಪುಷ್ಪರಾಜ್ ಶೆಟ್ಟಿ ವಂದಿಸಿದರು. ಡಾ.ಸುಧಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಯಕ್ಷಸಿರಿಯ ವಿದ್ಯಾರ್ಥಿಗಳು ಮತ್ತು ಇತರ ಕಲಾವಿದರ ಕೂಡುವಿಕೆಯೊಂದಿಗೆ ಶ್ರೀದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ನಡೆಯಿತು.