ಸಾರಾಂಶ
ವಿಜಯಪುರ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ ಪತ್ರಕರ್ತರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡುವ ವಾರ್ಷಿಕ ಪ್ರಶಸ್ತಿಯನ್ನು ಕನ್ನಡ ಪ್ರಭ ಪತ್ರಿಕೆ ಮೂರು ಪತ್ರಕರ್ತರು ಸೇರಿದಂತೆ 31 ಪತ್ರಕರ್ತರಿಗೆ ವಾರ್ಷಿಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ವಿಜಯಪುರ : ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ ಪತ್ರಕರ್ತರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡುವ ವಾರ್ಷಿಕ ಪ್ರಶಸ್ತಿಯನ್ನು ಕನ್ನಡ ಪ್ರಭ ಪತ್ರಿಕೆ ಮೂರು ಪತ್ರಕರ್ತರು ಸೇರಿದಂತೆ 31 ಪತ್ರಕರ್ತರಿಗೆ ವಾರ್ಷಿಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ನಗರದ ಪೊಲೀಸ್ ಸಮುದಾಯ ಭವನದಲ್ಲಿ ನಡೆದ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ, ಮುಖ್ಯಮಂತ್ರಿಗಳ ಪ್ರಧಾನ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ, ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಕಾನಿಪ ರಾಜ್ಯ ಘಟಕದ ಅಧ್ಯಕ್ಷ ಶಿವಾನಂದ ತಗಡೂರ, ಜಿಲ್ಲಾಧಿಕಾರಿ ಟಿ.ಭೂಬಾಲನ್, ಎಸ್ಪಿ ಋಷಿಕೇಶ ಸೋನಾವನೆ ಸೇರಿದಂತೆ ಹಲವು ಗಣ್ಯರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.
ಪ್ರಶಸ್ತಿ ಪಡೆದವರು: ಕನ್ನಡಪ್ರಭದ ಸಿಂದಗಿ ವರದಿಗಾರ ಸಿದ್ಧಲಿಂಗ ಕಿಣಗಿ, ಬಸವನಬಾಗೆವಾಡಿಯ ವರದಿಗಾರ ಬಸವರಾಜ ನಂದಿಹಾಳ, ಚಡಚಣ ವರದಿಗಾರ ಶಂಕರ ಹಾವಿನಾಳ ಸೇರಿ 31 ಜನರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.