ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2025ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರಕಟ ಮಾಡಲಾಗಿದೆ. ಕನ್ನಡಪ್ರಭ ಪತ್ರಿಕೆಯಲ್ಲಿ ಪ್ರಕಟವಾಗ ಮೂರು ವರದಿಗಳಿಗೆ ಪ್ರಶಸ್ತಿ ದೊರಕಿದೆ.
ಕನ್ನಡಪ್ರಭ ವಾರ್ತೆ ಮಡಿಕೇರಿ
ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2025ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರಕಟ ಮಾಡಲಾಗಿದೆ. ಕನ್ನಡಪ್ರಭ ಪತ್ರಿಕೆಯಲ್ಲಿ ಪ್ರಕಟವಾಗ ಮೂರು ವರದಿಗಳಿಗೆ ಪ್ರಶಸ್ತಿ ದೊರಕಿದೆ.ಸ್ವಸ್ಥ ಸಂಸ್ಥೆಯ ಮುಖ್ಯಸ್ಥೆ ಕಾಕಮಾಡ ಗಂಗಾ ಚಂಗಪ್ಪ ತಮ್ಮ ಮಾವ ಕಾಕಮಾಡ ನಾಣಯ್ಯ ಹೆಸರಿನಲ್ಲಿ ಸ್ಥಾಪಿಸಿರುವ ಶೈಕ್ಷಣಿಕ ವರದಿ ಪ್ರಶಸ್ತಿಯನ್ನು ಕನ್ನಡಪ್ರಭ ಪತ್ರಿಕೆಯಲ್ಲಿ ಪ್ರಕಟವಾದ ‘ಕೊಡಗು ವಿವಿ: ಹಣ ಇಲ್ಲ, ಕೆಲವು ಕೋರ್ಸ್ ಬಂದ್’ ವರದಿಗೆ ವಿಘ್ನೇಶ್ ಭೂತನಕಾಡು ಪಡೆದುಕೊಂಡಿದ್ದಾರೆ.
ಶಕ್ತಿ ಸಲಹಾ ಸಂಪಾದಕರಾಗಿರುವ ಬಿ.ಜಿ.ಅನಂತಶಯನ ತಮ್ಮ ಹೋಂಸ್ಟೇ ಆಲ್ಫೆನ್ ಗ್ಲೋ ಹೆಸರಿನಲ್ಲಿ ಸ್ಥಾಪಿಸಿರುವ ಅತ್ಯುತ್ತಮ ಸುದ್ದಿ ಛಾಯಾ ಚಿತ್ರ ಪ್ರಶಸ್ತಿಯನ್ನು ಕನ್ನಡಪ್ರಭ ಪತ್ರಿಕೆಯಲ್ಲಿ ಪ್ರಕಟವಾದ ‘ತಾವರೆಕೆರೆಗೆ ಈಗ ನೆರಳೆ ಮೆರುಗು’ ವರದಿಯ ಚಿತ್ರಕ್ಕೆ ವಿಘ್ನೇಶ್ ಭೂತನಕಾಡು ಪಡೆದುಕೊಂಡಿದ್ದಾರೆ.ಸಮಾಜಸೇವಕ ಮೇರಿಯಂಡ ಸಂಕೇತ್ ಪೂವಯ್ಯ ತಮ್ಮ ತಂದೆ ಮೇರಿಯಂಡ ಪೂವಯ್ಯ ಹೆಸರಿನಲ್ಲಿ ಸ್ಥಾಪಿಸಿರುವ ಹುಲಿ ಸಂರಕ್ಷಣೆ ಕುರಿತಾದ ವರದಿ ಪ್ರಶಸ್ತಿಯನ್ನು ಕನ್ನಡಪ್ರಭ ಪತ್ರಿಕೆಯಲ್ಲಿ ಪ್ರಕಟವಾದ ಅರಣ್ಯದಂಚಿನ ಗ್ರಾಮಗಳಲ್ಲಿ ಹೆಚ್ಚಾದ ವ್ಯಾಘ್ರ ದಾಳಿ ವರದಿಗೆ ಆರ್. ಸುಬ್ರಮಣಿ ಪಡೆದುಕೊಂಡಿದ್ದಾರೆ.
ಗ್ರಾಮೀಣ ವರದಿಯ ವಿಜಯವಾಣಿ ಪತ್ರಿಕೆಯಲ್ಲಿ ಪ್ರಕಟವಾದ ‘ಸೌಕರ್ಯವಿಲ್ಲದ ಮಲ್ಲಳ್ಳಿ ಗ್ರಾಮ ಅನಾಥ’ ವರದಿಗೆ ಹಿರಿಕರ ರವಿ ಪಡೆದುಕೊಂಡಿದ್ದಾರೆ.ಸಂಘದ ಮಾಜಿ ಅಧ್ಯಕ್ಷರಾದ ಕೆ.ಕೆ.ಶಶಿಧರ್ ಸ್ಮರಣಾರ್ಥ ಕ್ರೀಡಾ ವರದಿ ಪ್ರಶಸ್ತಿಯನ್ನು ಜನಮಿತ್ರ ಪತ್ರಿಕೆಯಲ್ಲಿ ಪ್ರಕಟವಾದ ‘ಈಜುಕೊಳದಲ್ಲಿ ಕೊಡಗಿನ ಆರ್ನಾ ಸಾಧನೆ’ ವರದಿಗೆ ಉದಿಯಂಡ ಜಯಂತಿ ಮಂದಣ್ಣ ಪಡೆದುಕೊಂಡಿದ್ದಾರೆ.. ಸಂಘದ ಮಾಜಿ ಉಪಾಧ್ಯಕ್ಷ ಸಿ.ಎನ್.ಸುನಿಲ್ ಕುಮಾರ್, ಅತ್ಯುತ್ತಮ ವೀಡಿಯೋಗ್ರಫಿ ಪ್ರಶಸ್ತಿಯನ್ನು ಟಿವಿ9 ವಾಹಿನಿಯಲ್ಲಿ ಪ್ರಸಾರವಾದ ‘ಕಾಲುಸಂಕದ ಮೇಲೆ ಆತಂಕದ ಹೆಜ್ಜೆ’ ವೀಡಿಯೋಗ್ರಫಿಗೆ ನವೀನ್ ಸುವರ್ಣ ಪಡೆದುಕೊಂಡಿದ್ದಾರೆ.
ನಿವೃತ್ತ ವಾರ್ತಾಧಿಕಾರಿ ಪಳೆಯಂಡ ಪೊನ್ನಪ್ಪ ಸ್ಥಾಪಿಸಿದ ಅತ್ಯುತ್ತಮ ತನಿಖಾ ವರದಿ ಪ್ರಶಸ್ತಿಯನ್ನು ವಿಜಯ ಕರ್ನಾಟಕ ಪತ್ರಿಕೆ ಪ್ರಕಟವಾದ ‘ಸರ್ಕಾರದಿಂದ ಅನುದಾನ ಬಂದರೂ ಪಂಚಾಯಿತಿ ನಿಧಿ ಬಳಕೆ’ ವರದಿಗೆ ಜಗದೀಶ್ ಜೋಡುಬೀಟಿ ಪಡೆದುಕೊಂಡಿದ್ದಾರೆ.ರಾಜ್ಯ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿದ್ದ ಮಂಡಿಬೆಲೆ ರಾಜಣ್ಣ ತಮ್ಮ ತಂದೆ ಮಂಡಿಬೆಲೆ ಶಾಮಣ್ಣ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅರಣ್ಯ ವನ್ಯಜೀವಿ ಪ್ರಶಸ್ತಿಯನ್ನು ಶಕ್ತಿ ಪತ್ರಿಕೆಯಲ್ಲಿ ಪ್ರಕಟವಾದ ‘ವನ್ಯಜೀವಿಗಳ ಆತಂಕದ ನಡುವೆ ಕೃಷಿ ಕೆಲಸಕ್ಕೆ ಹಿನ್ನಡೆ’ ವರದಿಗೆ ಎ.ಎನ್. ವಾಸು ಪಡೆದುಕೊಂಡಿದ್ದಾರೆ.
ಮರಗೋಡು ಹಾಲು ಉತ್ಪಾದಕರ ಸಹಕಾರ ಸಂಘದ ಸ್ಥಾಪಕಾಧ್ಯಕ್ಷರಾದ ಮಂದ್ರೀರ ಮೋಹನ್ ದಾಸ್ ಅವರು ಪ್ರಗತಿಪರ ಹಾಲು ಉತ್ಪಾದಕರಾಗಿದ್ದ ಉಳುವಾರನ ಶೇಷಗಿರಿ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಹೈನುಗಾರಿಕೆ ವರದಿ ಪ್ರಶಸ್ತಿಯನ್ನು ಶಕ್ತಿ ಪತ್ರಿಕೆಯಲ್ಲಿ ಪ್ರಕಟವಾದ ‘ಜಿಲ್ಲೆಯಲ್ಲಿ ಕ್ಷೀಣಿಸುತ್ತಾ ಸಾಗಿದ ಗೋಸಂತತಿ’ ವರದಿಗೆ ಅಣ್ಣೀರ ಹರೀಶ್ ಮಾದಪ್ಪ ಪಡೆದುಕೊಂಡಿದ್ದಾರೆ.ಬೆಳೆಗಾರ ಅಜ್ಜಮಾಡ ಕಟ್ಟಿ ಮಂದಯ್ಯ ತಮ್ಮ ತಂದೆ ತಾಯಿ ಅಜ್ಜಮಾಡ ಸುಬ್ಬಯ್ಯ ಬೊಳ್ಳಮ್ಮ ಹೆಸರಿನಲ್ಲಿ ಸ್ಥಾಪಿಸಿರುವ ತೋಟಗಾರಿಕಾ ಪ್ರಶಸ್ತಿಯನ್ನು ಆಂದೋಲನ ಪತ್ರಿಕೆಯಲ್ಲಿ ಪ್ರಕಟವಾದ ‘ಅವಸಾನದಂಚಿನಲ್ಲಿ ಸಂಬಾರ ರಾಣಿ’ ವರದಿಗೆ ಲಕ್ಷ್ಮಿಕಾಂತ್ ಕೊಮಾರಪ್ಪ ಪಡೆದುಕೊಂಡಿದ್ದಾರೆ. ಕೋವರ್ ಕೊಲ್ಲಿ ಇಂದ್ರೇಶ್ ತಮ್ಮ ತಂದೆ ಚಂದ್ರಶೇಖರ್ ಅವರ ಹೆಸರಿನಲ್ಲಿ ಸ್ಥಾಪಿಸಿದ ಮಾನವೀಯ ವರದಿ ಪ್ರಶಸ್ತಿಯನ್ನು ಶಕ್ತಿ ಪತ್ರಿಕೆಯಲ್ಲಿ ಪ್ರಕಟವಾದ ‘ಹೆತ್ತವರ ಮಡಿಲು ಸೇರಿದ 2 ವರ್ಷದ ಕಂದಮ್ಮ’ ವರದಿಗೆ ಹೆಚ್.ಕೆ. ಜಗದೀಶ್ ಪಡೆದುಕೊಂಡಿದ್ದಾರೆ.
ಮಂಡಿಬೆಲೆ ರಾಜಣ್ಣ ತಮ್ಮ ತಾಯಿ ದ್ಯಾವಮ್ಮ ಶ್ಯಾಮಣ್ಣ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅರಣ್ಯ, ವನ್ಯಜೀವಿ ದೃಶ್ಯಮಾಧ್ಯಮ ವರದಿ ಪ್ರಶಸ್ತಿಯನ್ನು ಟಿವಿ9 ನಲ್ಲಿ ಪ್ರಸಾರವಾದ ‘ಕಾಜೂರು ಅರಣ್ಯದಲ್ಲಿ ಮರಹನನ'''''''''''''''' ವರದಿಗೆ ಐಮಂಡ ಗೋಪಾಲ್ ಸೋಮಯ್ಯ ಪಡೆದುಕೊಂಡಿದ್ದಾರೆ.ತೇನನ ರಾಜೇಶ್ ಅವರು ತಮ್ಮ ತಂದೆ ದಿವಂಗತ ತೇನನ ಸೋಮಣ್ಣ ಹೆಸರಿನಲ್ಲಿ ಸ್ಥಾಪಿಸಿರುವ ಸೇನೆಗೆ ಸಂಬಂಧಿಸಿದ ದೃಶ್ಯ ಮಾಧ್ಯಮ ವರದಿ ಪ್ರಶಸ್ತಿಯನ್ನು ಚಿತ್ತಾರ ವಾಹಿನಿಯಲ್ಲಿ ಪ್ರಸಾರವಾದ ‘ಮಾಜಿ ಯೋಧನ ಹಸನಾದ ಕೃಷಿ ಬದುಕು’ ವರದಿಗೆ ಸ್ಟ್ಯಾನ್ಲಿ ಡೇವಿಡ್ ಪಡೆದುಕೊಂಡಿದ್ದಾರೆ.
ವಕೀಲರಾದ ಪಿ.ಕೃಷ್ಣಮೂರ್ತಿ ಅವರು ತಮ್ಮ ತಂದೆ ದಿವಂಗತ ಟಿ.ಕೆ.ಸುಬ್ರಹ್ಮಣ್ಯ ಭಟ್ ಪಂಜಿತ್ತಡ್ಕ ಅವರ ಸ್ಮರಣಾರ್ಥ ಸ್ಥಾಪಿಸಿರುವ ದೃಶ್ಯ ಮಾಧ್ಯಮದಲ್ಲಿ ಪ್ರಸಾರವಾಗುವ ಮಾನವೀಯ ವರದಿ ಪ್ರಶಸ್ತಿಯನ್ನು ಚಿತ್ತಾರ ವಾಹಿನಿಯಲ್ಲಿ ಪ್ರಸಾರವಾದ ‘ಕೆಸರಿನಲ್ಲಿ ನಿಂತಿದ್ದ ಗುಡಿಸಲಿಗೆ ಮುಕ್ತಿ’ ವರದಿಗೆ ಸಂತೋಷ್ ರೈ ಪಡೆದುಕೊಂಡಿದ್ದಾರೆ. ಆಪ್ತ ಸಮಾಲೋಚಕಿ ತೇಲಪಂಡ ಆರತಿ ಸೋಮಯ್ಯ ತಮ್ಮ ಅಜ್ಜ ಕೋಟೆರ ಮುತ್ತಣ್ಣ ಹೆಸರಿನಲ್ಲಿ ಸ್ಥಾಪಿಸಿರುವ ಆರೋಗ್ಯ ವರದಿ ಪ್ರಶಸ್ತಿಯನ್ನು ಶಕ್ತಿ ಪತ್ರಿಕೆಯಲ್ಲಿ ಪ್ರಕಟವಾದ ‘ಐಸಿಯು ನಿರ್ವಹಣೆಯಲ್ಲಿ ರಾಜ್ಯದಲ್ಲಿ ದ್ವಿತೀಯ ಸ್ಥಾನ’ ವರದಿಗೆ ಹೆಚ್.ಕೆ. ಜಗದೀಶ್ ಪಡೆದುಕೊಂಡಿದ್ದಾರೆ.ಕೈಬುಲೀರ ಪಾವರ್ತಿ ಬೋಪಯ್ಯ ತಮ್ಮ ತಂದೆ-ತಾಯಿ ಉತ್ತಯ್ಯ-ಸುಬ್ಬಮ್ಮ ಹೆಸರಿನಲ್ಲಿ ಸ್ಥಾಪಿಸಿರುವ ಪರಿಸರ ಮತ್ತು ನೈರ್ಮಲ್ಯ ವರದಿ ಪ್ರಶಸ್ತಿಯನ್ನು ವಿಜಯ ಕರ್ನಾಟಕ ಪತ್ರಿಕೆಯಲ್ಲಿ ಪ್ರಕಟವಾದ ‘ಲೈಬ್ರರಿಯಲ್ಲಿ ಶೌಚಗೃಹ ಕೊರತೆ’ ವರದಿಗೆ ಶಶಿಕುಮಾರ್ ರೈ ಪಡೆದುಕೊಂಡಿದ್ದಾರೆ.
ಸಂಘದ ಸದಸ್ಯರಾಗಿದ್ದ ಎಸ್.ಎ.ಮುರುಳೀಧರ್ ತಮ್ಮ ತಾಯಿ ಪಾರ್ವತಮ್ಮ ಅಪ್ಪಸ್ವಾಮಿ ಹೆಸರಿನಲ್ಲಿ ಸ್ಥಾಪಿಸಿರುವ ಕೃಷಿ ವರದಿ ಪ್ರಶಸ್ತಿಯನ್ನು ಶಕ್ತಿ ಪತ್ರಿಕೆಯಲ್ಲಿ ಪ್ರಕಟವಾದ ‘ಭತ್ತದ ಕೃಷಿ ಉತ್ತೇಜನಕ್ಕೆ ಅರ್ಥಪೂರ್ಣ ನಾಟಿಪಣಿ’ ವರದಿಗೆ ಕಾಯಪಂಡ ಶಶಿ ಸೋಮಯ್ಯ ಪಡೆದುಕೊಂಡಿದ್ದಾರೆ.ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಮಂತರ್ ಗೌಡ ಅವರು ತಮ್ಮ ಮುತ್ತಜ್ಜಿ ಸಾಕಮ್ಮ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಕಾಫಿಗೆ ಸಂಬಂಧಿಸಿದ ಅತ್ಯುತ್ತಮ ಪತ್ರಿಕಾ ವರದಿ ಪ್ರಶಸ್ತಿಯನ್ನು ವಿಜಯವಾಣಿ ಪತ್ರಿಕೆಯಲ್ಲಿ ಪ್ರಕಟವಾದ ‘ಕಾಫಿ ಬೆಳೆಗೆ ಬೆರ‍್ರಿ ಬೋರರ್ ಹುಳು ಕಾಟ’ ವರದಿಗೆ ಹಿರಿಕರ ರವಿ ಪಡೆದುಕೊಂಡಿದ್ದಾರೆ.
19. ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಅವರು ತಮ್ಮ ಮುತ್ತಜ್ಜಿ ಸಾಕಮ್ಮ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಕಾಫಿಗೆ ಸಂಬಂಧಿಸಿದ ಅತ್ಯುತ್ತಮ ದೃಶ್ಯ ಮಾಧ್ಯಮ ವರದಿ ಪ್ರಶಸ್ತಿಯನ್ನು ಪಬ್ಲಿಕ್ ಟಿವಿಯಲ್ಲಿ ಪ್ರಕಟವಾದ ‘ಕಾಫಿ ದಸರಾ’ ವರದಿಗೆ ಮಲ್ಲಿಕಾರ್ಜುನ್ ಪಡೆದುಕೊಂಡಿದ್ದಾರೆ.ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಲ್ಲಾರಂಡ ಮಣಿ ಉತ್ತಪ್ಪ ತಮ್ಮ ತಾಯಿ ಬಲ್ಲಾರಂಡ ಮಾಚಮ್ಮ ಹೆಸರಿನಲ್ಲಿ ಸ್ಥಾಪಿಸಿರುವ ರಾಜಕೀಯ ವರದಿ ಪ್ರಶಸ್ತಿಯನ್ನು ಶಕ್ತಿ ಪತ್ರಿಕೆಯಲ್ಲಿ ಪ್ರಕಟವಾದ ‘ಆಟಕ್ಕೂ, ಲೆಕ್ಕಕ್ಕೂ ಇಲ್ಲದಂತಾದ ಜೆಡಿಎಸ್’ ವರದಿಗೆ ಇಸ್ಮಾಯಿಲ್ ಕಂಡಕರೆ ಪಡೆದುಕೊಂಡಿದ್ದಾರೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಹೆಚ್.ಜೆ. ರಾಕೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ನೀಡಲಾಗುವ ಈ ಎಲ್ಲಾ ಪ್ರಶಸ್ತಿಗಳನ್ನು ಜೂನ್ 14 ರಂದು ಸಂಘದ ವಾರ್ಷಿಕ ಮಹಾಸಭೆಯಂದು ನೀಡಿ ಗೌರವಿಸಲಾಗುವುದು.