ಶ್ರೀಭೈತೂರಪ್ಪ ಪೊವ್ವೆದಿ ಬಸವೇಶ್ವರ ದೇವರ ವಾರ್ಷಿಕ ಹಬ್ಬ ಸಂಪನ್ನ

| Published : Apr 30 2024, 02:06 AM IST / Updated: Apr 30 2024, 02:07 AM IST

ಶ್ರೀಭೈತೂರಪ್ಪ ಪೊವ್ವೆದಿ ಬಸವೇಶ್ವರ ದೇವರ ವಾರ್ಷಿಕ ಹಬ್ಬ ಸಂಪನ್ನ
Share this Article
  • FB
  • TW
  • Linkdin
  • Email

ಸಾರಾಂಶ

ಸೂರ್ಯೋದಯದ ವೇಳೆಗೆ ಗಣಹೋಮದೊಂದಿಗೆ ವಾರ್ಷಿಕ ಹಬ್ಬಕ್ಕೆ ಚಾಲನೆ ನೀಡಲಾಯಿತು. ದೇವರಿಗೆ ವಿಶೇಷ ಪೂಜೆ ನೆರವೇರಿತು.

ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ

ಕೊಡಗರಹಳ್ಳಿಯಲ್ಲಿ ನೆಲೆಸಿರುವ ಶ್ರೀಭೈತೂರಪ್ಪ ಪೊವ್ವೆದಿ ಬಸವೇಶ್ವರ ದೇವರ ವಾರ್ಷಿಕ ಹಬ್ಬ ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಶ್ರದ್ಧಾ ಭಕ್ತಿಯಿಂದ ನೆರವೇರಿತು.

ಸೋಮವಾರ ಸೂರ್ಯೋದಯ ವೇಳೆಗೆ ಗಣಹೋಮದೊಂದಿಗೆ ವಾರ್ಷಿಕ ಹಬ್ಬಕ್ಕೆ ಚಾಲನೆ ನೀಡಲಾಯಿತು. ಶ್ರೀ ಬೈತೂರಪ್ಪ ಪೊವ್ವೆದಿ ಪರಿವಾರ ದೇವರಿಗೆ ವಿಶೇಷ ಪೂಜೆ ಮತ್ತು ರುದ್ರಾಭಿಷೇಕವನ್ನು ದೇವಾಲಯದ ಪ್ರಧಾನ ಆರ್ಚಕರಾದ ನರಸಿಂಹ ಭಟ್, ಚಂದ್ರಶೇಖರ್ ಭಟ್, ರವಿಶಂಕರ್ ಮಂಜುನಾಥ್‌ಭಟ್ ಹಾಗೂ ಕೃಷ್ಣ ಭಟ್ ಅವರ ತಂಡ ನೆರವೇರಿಸಿತು.

ದೇವತಕ್ಕರಾದ ಜಗ್ಗರಂಡ ಹ್ಯಾರಿಕಾರ್ಯಪ್ಪ ಅವರ ಮನೆಯಿಂದ ದೇವರ ಭಂಡಾರವನ್ನು ಆರ್ಚಕ ನರಸಿಂಹ ಭಟ್ ಅವರ ನೇತೃತ್ವದಲ್ಲಿ ಪೂಜೆ ಮತ್ತು ಧಾರ್ಮಿಕ ವಿಧಿವಿಧಾನಗಳನ್ನು ನೇರವೇರಿಸಿ ದುಡಿಕೊಟ್ ಪಾಟ್ ಸಾಂಪ್ರಾದಾಯಿಕ ಕೊಡವ ಓಲಗದೊಂದಿಗೆ ದೇವಾಲಯಕ್ಕೆ ತಂದು ಪೂಜೆ ನೆರವೇರಿಸಲಾಯಿತು.

ಮಹಾಪೂಜೆಯ ಬಳಿಕ ತೀರ್ಥ ಪ್ರಸಾದದೊಂದಿಗೆ ಅನ್ನ ಸಂತರ್ಪಣೆ ನೆರವೇರಿತು. ದೇವಾಲಯದ ವಾರ್ಷಿಕ ಹಬ್ಬದ ಸಂದರ್ಭ ದೇವಾಲಯಕ್ಕೆ ಒಳಪಟ್ಟ ಕುಟುಂಬಗಳು ಸಾಂಪ್ರಾದಾಯಿಕ ವೇಷ ಭೂಷಣದೊಂದಿಗೆ ದೇವಾಲಯದ ಆವರಣದಲ್ಲಿ ಸೇರಿ ಸಾಂಪ್ರಾದಾಯಿಕ ಬೊಳಕಾಟ್ ನೃತ್ಯ ಸೇವೆ ಸಲ್ಲಿಸಿದರು. ವಿಶೇಷವೆಂದರೆ ಹಬ್ಬದ ಕಟ್ಟಿನ ಮರುದಿನದಿಂದ 11 ದಿನಗಳ ಕಾಲ ಬೆಳಗಿನ ಜಾವದಲ್ಲಿ ದೀಪದ ಬೆಳಕಿನಲ್ಲಿ ದೇವರಿಗೆ ಬೊಳಕಾಟ್ ನೃತ್ಯ ಸೇವೆ ಸಾಂಪ್ರಾದಾಯಿಕ ಉಡುಪಿನಲ್ಲಿ ಸಲ್ಲಿಸುವುದು ವಿಶೇಷವಾಗಿದೆ.

16 ರಂದು ಗ್ರಾಮ ದೇವತೆಗೆ ಪೂಜೆ ಸಲ್ಲಿಸುವ ಮೂಲಕ ಏ.18 ರಂದು ದೇವಾಲಯದ ಆವರಣದಲ್ಲಿ ಹಬ್ಬದ ಕಟ್ಟನ್ನು ಹಾಕಲಾಗಿತ್ತು. ಏ.26 ರ ಶುಕ್ರವಾರ ರಂದು ಶ್ರೀಬಸವೇಶ್ವರ ದೇವರ ಎತ್ತುಪೋರಾಟದೊಂದಿಗೆ ಹಬ್ಬಕ್ಕೆ ಚಾಲನೆ ನೀಡಲಾಗಿತ್ತು.

ಈ ಸಂದರ್ಭ ಕೊಡಗರಹಳ್ಳಿ ಸೇರಿದಂತೆ ಸುತ್ತ ಮುತ್ತಲಿನ ಗ್ರಾಮಸ್ಥರು ನೂರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ವಾರ್ಷಿಕ ಹಬ್ಬವನ್ನು ಶ್ರೀಬೈತೂರಪ್ಪ ಪೊವ್ವೆದಿ ಬಸವೇಶ್ವರ ದೇವಾಲಯ ಟ್ರಸ್ಟ್ ಮೇಲುಸ್ತುವಾರಿಯಲ್ಲಿ ದೇವತಕ್ಕರು ಮತ್ತು ಮುಕ್ಕಾಟಿಯವರ ನೇತೃತ್ವದಲ್ಲಿ ಗ್ರಾಮಸ್ಥರು ದಾನಿಗಳು ಮತ್ತು ಹಿತೈಷಿಗಳು ಯಶಸ್ವಿಯಾಗಿ ನಡೆಸಿಕೊಟ್ಟರು ಎಂದು ದೇವಾಲಯ ಟ್ರಸ್ಟ್ ಪ್ರಕಟಣೆಯಲ್ಲಿ ತಿಳಿಸಿದೆ.