ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ೩೦೩.೩೧ ಲಕ್ಷ ರು. ನಿವ್ವಳ ಲಾಭ, ಶೇ.156 ಲಾಭಾಂಶ ಘೋಷಣೆ

| Published : Sep 12 2024, 01:49 AM IST

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ೩೦೩.೩೧ ಲಕ್ಷ ರು. ನಿವ್ವಳ ಲಾಭ, ಶೇ.156 ಲಾಭಾಂಶ ಘೋಷಣೆ
Share this Article
  • FB
  • TW
  • Linkdin
  • Email

ಸಾರಾಂಶ

ಸಂಘವು ಸದಸ್ಯರಿಂದ ಒಟ್ಟು ೧೪೭.೫೪ ಲಕ್ಷ ರು. ಷೇರು ಬಂಡವಾಳ, ೨೨,೪೯೪.೯೮ ಲಕ್ಷ ರು. ಠೇವಣಿ ಸಂಗ್ರಹಿಸಿದೆ. ವರ್ಷಾಂತ್ಯಕ್ಕೆ ೧೭,೮೪೮.೩೯ ಲಕ್ಷ ರು. ಸಾಲ ನೀಡಲಾಗಿದೆ. ಸಂಘದ ದುಡಿಯುವ ಬಂಡವಾಳ ೨೩,೬೪೯.೦೪ ಲಕ್ಷ ರು. ಹೊಂದಿದೆ. ಸಂಘದ ಸದಸ್ಯರಿಗೆ ವರದಿ ಸಾಲಿನಲ್ಲಿ ಶೇ. ೧೫ ಡಿವಿಡೆಂಡ್ ಘೋಷಿಸಲಾಯಿತು.

ಕನ್ನಡಪ್ರಭ ವಾರ್ತೆ ಮಂಗಳೂರು

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಇದರ ೨೦೨೩-೨೪ ನೇ ಸಾಲಿನ ೧೩ನೇ ವಾರ್ಷಿಕ ಸಾಮಾನ್ಯ ಸಭೆ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಇವರ ಅಧ್ಯಕ್ಷತೆಯಲ್ಲಿ ಭಾನುವಾರ ಪಡೀಲಿನ ಬೈರಾಡಿಕೆರೆಯ ಸಂಘದ ಪ್ರಧಾನ ಕಚೇರಿ ಆತ್ಮಶಕ್ತಿ ಸೌಧದ ಸಭಾಂಗಣದಲ್ಲಿ ನಡೆಯಿತು.

ಸಂಘದ ೨೦೨೩-೨೪ನೇ ಸಾಲಿನ ವಾರ್ಷಿಕ ವರದಿ ಲೆಕ್ಕಪತ್ರವನ್ನು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್‌ ಮಂಡಿಸಿದರು. ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್‌ ಮಾತನಾಡಿ, ಸಂಘವು ಪ್ರಸ್ತುತ ಅವಿಭಜಿತ ದ.ಕ. ಹಾಗೂ ಉಡುಪಿ ಜಿಲ್ಲೆಯಲ್ಲಿ ಒಟ್ಟು ೩೩ ಶಾಖೆಗಳನ್ನು ಹೊಂದಿದ್ದು, ೨೦೨೪-೨೫ನೇ ಸಾಲಿನಲ್ಲಿ ಸಂಘದ ಕಾರ್ಯವ್ಯಾಪ್ತಿಯಲ್ಲಿ ಇನ್ನೂ ಹೆಚ್ಚಿನ ಹೊಸ ಶಾಖೆಗಳನ್ನು ತೆರೆದು, ವಿವಿಧ ಯೋಜನೆಗಳ ಮೂಲಕ ಸದಸ್ಯರಿಂದ ೨೭೫ ಕೋಟಿ ರು.ಗೂ ಮಿಕ್ಕಿ ಠೇವಣಿಗಳನ್ನು ಸಂಗ್ರಹಿಸಿ, ೨೧೦ ಕೋಟಿ ರು.ಗೂ ಅಧಿಕ ಸಾಲ ನೀಡುವ ಗುರಿಯನ್ನು ಹೊಂದಿದೆ ಎಂದರು.

ಶೇ.15 ಲಾಭಾಂಶ: ಸಂಘವು ಸದಸ್ಯರಿಂದ ಒಟ್ಟು ೧೪೭.೫೪ ಲಕ್ಷ ರು. ಷೇರು ಬಂಡವಾಳ, ೨೨,೪೯೪.೯೮ ಲಕ್ಷ ರು. ಠೇವಣಿ ಸಂಗ್ರಹಿಸಿದೆ. ವರ್ಷಾಂತ್ಯಕ್ಕೆ ೧೭,೮೪೮.೩೯ ಲಕ್ಷ ರು. ಸಾಲ ನೀಡಲಾಗಿದೆ. ಸಂಘದ ದುಡಿಯುವ ಬಂಡವಾಳ ೨೩,೬೪೯.೦೪ ಲಕ್ಷ ರು. ಹೊಂದಿದೆ. ಸಂಘದ ಸದಸ್ಯರಿಗೆ ವರದಿ ಸಾಲಿನಲ್ಲಿ ಶೇ. ೧೫ ಡಿವಿಡೆಂಡ್ ಘೋಷಿಸಲಾಯಿತು.

ಪ್ರಸ್ತುತ ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ಬೆಂಗಳೂರು ಇವರಿಂದ ಅತೀ ಹೆಚ್ಚು ಮೊತ್ತದ ಇ-ಸ್ಟಾಂಪಿಂಗ್ ಮುದ್ರಿಸುವ ಪ್ರಶಸ್ತಿಯನ್ನು ಸಂಘ ಪಡೆದಿದೆ. ೭೦ನೇ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ‘ಉತ್ತಮ ಸಹಕಾರಿ ಸಂಘ’ ಪ್ರಶಸ್ತಿ ಹಾಗೂ ಸದಸ್ಯರ ಬೇಡಿಕೆಗಳನ್ನು ಸಮರ್ಪಕವಾಗಿ ಪೂರೈಸುವುದರ ಜೊತೆಗೆ ಸಂಘದ ಕಾರ್ಯವೈಖರಿಯನ್ನು ಗುರುತಿಸಿ ಸತತ ೯ ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿಯನ್ನು ನೀಡಿ ಗೌರವಿಸಿರುವುದಕ್ಕೆ ಸಭೆಯಲ್ಲಿ ಸದಸ್ಯರು ಹರ್ಷ ವ್ಯಕ್ತಪಡಿಸಿದರು.