ಜೈ ಜವಾನ್ ಮಾಜಿ ಸೈನಿಕರ ಸಂಘದ ವಾರ್ಷಿಕ ಮಹಾಸಭೆ

| Published : Nov 20 2025, 01:45 AM IST

ಜೈ ಜವಾನ್ ಮಾಜಿ ಸೈನಿಕರ ಸಂಘದ ವಾರ್ಷಿಕ ಮಹಾಸಭೆ
Share this Article
  • FB
  • TW
  • Linkdin
  • Email

ಸಾರಾಂಶ

ಜೈ ಜವಾನ್‌ ಮಾಜಿ ಸೈನಿಕರ ಸಂಘದ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಬಿ. ಆರ್‌. ಈರಪ್ಪ ಅಧ್ಯಕ್ಷತೆಯಲ್ಲಿ ನಡೆಯಿತು.

ಕನ್ನಡಪ್ರಭವಾರ್ತೆ ಸೋಮವಾರಪೇಟೆ

ಜೈ ಜವಾನ್ ಮಾಜಿ ಸೈನಿಕರ ಸಂಘದ ವಾರ್ಷಿಕ ಮಹಾಸಭೆ, ಸಂಘದ ಅಧ್ಯಕ್ಷ ಬಿ.ಆರ್. ಈರಪ್ಪ ಅವರ ಅಧ್ಯಕ್ಷತೆಯಲ್ಲಿ ಪತ್ರಿಕಾಭವನದಲ್ಲಿ ಶನಿವಾರ ನಡೆಯಿತು.ಸಭೆಯಲ್ಲಿ ಅಧ್ಯಕ್ಷ ಈರಪ್ಪ ಮಾತನಾಡಿ, ಸಂಘದ ಸ್ವಂತ ಕಟ್ಟಡದ ಕಾಮಗಾರಿ ನಡೆಯುತ್ತಿದೆ. ಎಲ್ಲ ಸದಸ್ಯರು ಸಮಯಕ್ಕೆ ಸರಿಯಾಗಿ ಸದಸ್ಯತ್ವ ನವೀಕರಿಸುವ ಮೂಲಕ ಎಲ್ಲ ಸದಸ್ಯರು ಹೆಚ್ಚಿನ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.ಈ ಸಂದರ್ಭ ಸಂಘದ ಉಪಾಧ್ಯಕ್ಷ ಎಸ್.ಎಂ. ಸುಬ್ರಹ್ಮಣ್ಯ, ಪ್ರಧಾನ ಕಾರ್ಯದರ್ಶಿ ಆರ್.ಜಿ. ಬಸಪ್ಪ. ಖಜಾಂಚಿ ಎನ್.ಜಿ. ಕೆಂಪಯ್ಯ ಸೇರಿದಂತೆ ಎಲ್ಲ ನಿರ್ದೇಶಕರು ಪಾಲ್ಗೊಂಡಿದ್ದರು. ಇದೇ ಸಂದರ್ಭ ಸಂಘದ ಸದಸ್ಯರಾದ ಎನ್. ಬಿ. ಚಂದ್ರಾವತಿ, ಬಿ.ಎಸ್. ಶೇಷಪ್ಪ, ಜಿ. ಎಂ. ಮಂಜುನಾಥ ಹಾಗೂ ಎಚ್. ಆರ್. ಸೋಮಯ್ಯ ಅವರನ್ನು ಸನ್ಮಾನಿಸಲಾಯಿತು.