ಸಾರಾಂಶ
ವಾಹನ ಚಾಲಕರು ಮತ್ತು ಮೋಟಾರ್ ಕೆಲಸಗಾರರ ಸಂಘದ ವಾರ್ಷಿಕ ಮಹಾಸಭೆ ನಡೆಯಿತು. ಗ್ರೂಪ್ ಇನ್ಸೂರೆನ್ಸ್ ಮಾಡುವಂತೆ ಸಭೆಯಲ್ಲಿ ತೀರ್ಮಾನಿಸಲಾಯಿತು.
ಕನ್ನಡಪ್ರಭವಾರ್ತೆ ಸೋಮವಾರಪೇಟೆ
ಇಲ್ಲಿನ ವಾಹನ ಚಾಲಕರು ಮತ್ತು ಮೋಟರ್ ಕೆಲಸಗಾರರ ಸಂಘದ ವಾರ್ಷಿಕ ಮಹಾಸಭೆ ಬಾಲಕೃಷ್ಣ ಪೂಜಾರಿ ಅಧ್ಯಕ್ಷತೆಯಲ್ಲಿ ಮಾನಸ ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು.ಸಭೆಯಲ್ಲಿ ಸಂಘದ ಸದಸ್ಯರ ಮಕ್ಕಳಿಗೆ ವಿದ್ಯಾನಿಧಿ ಹಾಗೂ ಸದಸ್ಯರಿಗೆ ಗ್ರೂಪ್ ಇನ್ಸೂರೆನ್ಸ್ ಮಾಡುವಂತೆ ಸಭೆಯಲ್ಲಿ ತೀರ್ಮಾನಿಸಲಾಯಿತು.
ಸಂಘದ ಈಗಾಗಲೇ ಸ್ವಂತ ಕಟ್ಟಡ ಹೊಂದಿದ್ದು ಮುಂದಿನ ದಿನಗಳಲ್ಲಿ ಸಂಘದ ಹೆಸರಿನಲ್ಲಿ ಸಹಕಾರ ಸಂಘ ನಿರ್ಮಿಸುವಂತೆ ಸಭೆಯಲ್ಲಿ ತೀರ್ಮಾನಿಸಲಾಯಿತು. ಸಂಘದ ಸದಸ್ಯರ ಮರಣ ನಿಧಿ ರೂ.15000 ಹಾಗೂ ಸಂಘದ ಸದಸ್ಯರಿಗೆ ವೈದ್ಯಕೀಯ ಚಿಕಿತ್ಸೆಗೆ ರೂ. 3000 ನೀಡುವಂತೆ ಸಭೆಯಲ್ಲಿ ತೀರ್ಮಾನಿಸಲಾಯಿತು. ನಂತರ ಸಂಘದ ಅಭಿವೃದ್ಧಿಯ ಬಗ್ಗೆ ಚರ್ಚಿಸಲಾಯಿತು.ಸಂಘದ ಉಪಾಧ್ಯಕ್ಷ ರಂಗಸ್ವಾಮಿ, ಕಾರ್ಯದರ್ಶಿ ಮಣಿ ಕುಶಾಲಪ್ಪ, ಸಹ ಕಾರ್ಯದರ್ಶಿ ಕಿರಣ, ಖಜಾಂಜಿ ಡೊಮಿನಿಕ್, ಸಲಹೆಗಾರರಾದ ಎ.ಪಿ. ವೀರರಾಜು, ಟಿ.ಕೆ. ರಮೇಶ್, ವಿನ್ಸಿ ಪಿಂಟೊ, ವಿನ್ಸಿ ಡಿಸೋಜಾ, ಹಾಲಪ್ಪ, ಸುಭಾಷ್ ತಿಮ್ಮಯ್ಯ, ಚಕ್ರವರ್ತಿ ಸುರೇಶ್, ಜನಾರ್ಧನ್ ಪ್ರಭು ಉಪಸ್ಥಿತರಿದ್ದರು.