ನೆಲಜಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ವಾರ್ಷಿಕ ಕಲಾಡ್ಚ ಹಬ್ಬ ಸಂಪನ್ನ

| Published : Mar 24 2024, 01:32 AM IST

ನೆಲಜಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ವಾರ್ಷಿಕ ಕಲಾಡ್ಚ ಹಬ್ಬ ಸಂಪನ್ನ
Share this Article
  • FB
  • TW
  • Linkdin
  • Email

ಸಾರಾಂಶ

ನೆಲಜಿ ಇಗ್ಗುತ್ತಪ್ಪ ದೇವಾಲಯದಲ್ಲಿ ವಾರ್ಷಿಕೋತ್ಸವ ವಿಜೃಂಭಣೆಯಿಂದ ನಡೆಯಿತು. ಉತ್ಸವದ ಅಂಗವಾಗಿ ವಿಶೇಷ ಪೂಜೆಗಳು ನೆರವೇರಿತು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ಸಮೀಪದ ನೆಲಜಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ಕುಂಬ್ಯಾರು ಕಲಾಡ್ಚ ವಾರ್ಷಿಕೋತ್ಸವ ವಿಜೃಂಭಣೆಯಿಂದ ಶನಿವಾರ ನಡೆಯಿತು.

ಉತ್ಸವದ ಅಂಗವಾಗಿ ವಿಶೇಷ ಪೂಜೆಗಳು ನೆರವೇರಿದವು. ದೇವಾಲಯದಲ್ಲಿ ತುಲಾಭಾರ ಸೇವೆ ಬಳಿಕ ಭಕ್ತರು ವಿವಿಧ ರೀತಿಯ ಹರಕೆ ಸಲ್ಲಿಸಿದರು. ದೇವಾಲಯದಲ್ಲಿ 20 ತುಲಾಭಾರ ಸೇವೆಗಳು, ಕಾಫಿ ಕಾಳುಮೆಣಸು, ಎಣ್ಣೆ, ಮತ್ತಿತರ ಹರಕೆ ಸಲ್ಲಿಸಿದರು. ನಂತರ ದೇವಾಲಯದಲ್ಲಿ ಮಹಾಪೂಜೆ ಜರುಗಿತು. ಭಕ್ತರಿಗೆ ಪ್ರಸಾದ ವಿತರಣೆ ಬಳಿಕ ಎತ್ತುಪೋರಾಟ ಅನ್ನಸಂತರ್ಪಣೆ. ಬಳಿಕ ದೇವರ ಪ್ರದರ್ಶನ ಬಲಿ ಜರುಗಿತು. ತಂತ್ರಿ ಸುರೇಶ್‌ ಶರ್ಮ, ಅರ್ಚಕ ರಮೇಶ್ ಶರ್ಮ ಸುಧೀರ ಹಾಗೂ ಜಯಚಂದ್ರ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು. ಅನಂತರ ಇಗ್ಗುತ್ತಪ್ಪ ದೇವರ ಆದಿ ಸ್ಥಳವಾದ ಮಲ್ಮ ಬೆಟ್ಟಕ್ಕೆ ಎತ್ತುಪೋರಾಟದೊಂದಿಗೆ ತೆರಳಿ ವಿವಿಧ ಪೂಜಾ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ಈ ಸಂದರ್ಭ ಉತ್ಸವದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ಶಾಸಕ ಎಎಸ್ ಪೊನ್ನಣ್ಣ, ತಕ್ಕ ಮುಖ್ಯಸ್ಥರಾದ ನಾಪನೆರವಂಡ ಪೊನ್ನಪ್ಪ, ಬಾಳೆಯಡ ರಾಜ ಕುಂಞಪ್ಪ, ಬದಂಚೆಟ್ಟೀರ ನಾಣಯ್ಯ, ಆಡಳಿತ ಮಡಳಿ ಅಧ್ಯಕ್ಷ ಮುಂಡಂಡ ನಾಣಯ್ಯ, ಕಾರ್ಯದರ್ಶಿ ಮುಕ್ಕಾಟಿರ ವಿನಯ್, ಖಜಾಂಚಿ ಮನವಟ್ಟಿರ ಪಾಪು ಚಂಗಪ್ಪ, ಮಂಡಿರ ನಂದ, ಅಪ್ಪುಮಣಿಯಂಡ ಸನ್ನು ಸೋಮಣ್ಣ, ಬದಂಚೆಟ್ಟೀರ ದೇವಯ್ಯ, ಬಾಲೆಯಡ ಶಿವಕುಮಾರ್, ಚೆಕ್ ಪುವಂಡ ಅಪ್ಪಚ್ಚು ಆಡಳಿತ ಮಂಡಳಿ ಸದಸ್ಯರು, ಗ್ರಾಮಸ್ಥರು, ಊರಿನ, ಪರ ಊರಿನ ಭಕ್ತರು ಪಾಲ್ಗೊಂಡಿದ್ದರು.