ಸಾರಾಂಶ
23ನೇ ವರ್ಷದ ವಾರ್ಷಿಕ ಪೂಜಾ ಕಾರ್ಯಕ್ರಮ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮ ನಡೆಯಿತು.
ಕನ್ನಡಪ್ರಭ ವಾರ್ತೆ ಕುಶಾಲನಗರ
ಕುಶಾಲನಗರ ಶ್ರೀ ಕೋಣ ಮಾರಮ್ಮ ದೇವಸ್ಥಾನ 23ನೇ ವರ್ಷದ ವಾರ್ಷಿಕ ಪೂಜಾ ಕಾರ್ಯಕ್ರಮದ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮ ನಡೆಯಿತು.ಕಾವೇರಿ ನದಿಯಿಂದ ದೇವಿಯ ವಿಗ್ರಹದೊಂದಿಗೆ ಕಳಸ ತಂದು ಪ್ರತಿಷ್ಠಾಪನೆ ಮಾಡಲಾಯಿತು. ನಂತರ ದೇವಿಯ ಸನ್ನಿಧಿಯಲ್ಲಿ ಗಣಪತಿ ಹೋಮ ತೀರ್ಥಪ್ರಸಾದ ವಿನಿಯೋಗ ನಡೆಯಿತು.
ಗುರುವಾರ ಭಕ್ತಾದಿಗಳಿಗೆ ಅನ್ನದಾನ ಕಾರ್ಯಕ್ರಮ ನಡೆಯಿತು.-----------------------------------------
ಬಸವೇಶ್ವರ ದೇವಾಲಯದಲ್ಲಿ ಗೋ ಪೂಜೆಕನ್ನಡಪ್ರಭವಾರ್ತೆ, ಸೋಮವಾರಪೇಟೆವೀರಶೈವ ಸಮಾಜದ ವತಿಯಿಂದ ಶ್ರೀ ಬಸವೇಶ್ವರ ದೇವಾಲಯದಲ್ಲಿ ದೀಪಾವಳಿಯ ಬಲಿಪಾಡ್ಯಮಿ ದಿನ ಗೋ ಪೂಜೆ ನಡೆಯಿತು.
ದೇವಾಲಯದ ಅರ್ಚಕರಾದ ಶೇಖಯ್ಯ ಪೂಜಾರ್ ಪೂಜಾ ಕಾರ್ಯವನ್ನು ನಡೆಸಿದರು. ಈ ಸಂದರ್ಭ ಸಮಾಜದ ಯಜಮಾನರಾದ ಬಿ.ಪಿ. ಶಿವಕುಮಾರ್, ಶೆಟ್ರು ಬಿ.ಆರ್. ಮೃತ್ಯುಂಜಯ, ಕಾರ್ಯದರ್ಶಿ ಸಿ.ಸಿ. ನಾಗರಾಜ್ ಹಾಗೂ ಆಡಳಿತ ಮಂಡಳಿ ಸದಸ್ಯರಾದ ಕೆ.ಎನ್. ನಾಗೇಶ್, ರಮೇಶ್, ಸಮಾಜ ಬಾಂಧವರಾದ ಸರ್ವಜ್ಞ ಮೂರ್ತಿ, ಪೂರ್ಣಿಮಾ, ನಳಿನಿ, ನವನೇಶ್, ಯಶೋಧ, ವೇದಾವತಿ ಇದ್ದರು.;Resize=(128,128))
;Resize=(128,128))
;Resize=(128,128))