ಎಕ್ಸ್‌ಪರ್ಟ್‌ ಶಿಕ್ಷಣ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟ

| Published : Oct 28 2024, 01:04 AM IST

ಎಕ್ಸ್‌ಪರ್ಟ್‌ ಶಿಕ್ಷಣ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟ
Share this Article
  • FB
  • TW
  • Linkdin
  • Email

ಸಾರಾಂಶ

ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಪುರಬ್‌ ಶೆಟ್ಟಿ ಪ್ರತಿಜ್ಞಾವಿಧಿ ಬೋಧಿಸಿದರು. ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳ ಪಥ ಸಂಚಲನ, ವಿವಿಧ ರಿಲೇ ಏರ್ಪಟ್ಟಿತು.

ಕನ್ನಡಪ್ರಭ ವಾರ್ತೆ ಮಂಗಳೂರು

ಮಂಗಳೂರಿನ ಎಕ್ಸ್‌ಪರ್ಟ್‌ ಶಿಕ್ಷಣ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟ-2024 ನಗರದ ಮಂಗಳಾ ಸ್ಟೇಡಿಯಂನಲ್ಲಿ ಭಾನುವಾರ ಏರ್ಪಟ್ಟಿತು.

ದ.ಕ. ಸಂಸದ ಕ್ಯಾ.ಬ್ರಿಜೇಶ್‌ ಚೌಟ ಅವರು ಬಲೂನ್‌ನ್ನು ಆಗಸಕ್ಕೆ ಹಾರಿಸಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಕ್ರೀಡೆಯಿಂದ ಮಾನಸಿಕ, ದೈಹಿಕ ಸಾಮರ್ಥ್ಯಕ್ಕೆ ಹೆಚ್ಚಳ ಸಾಧ್ಯ. ಕ್ರೀಡೆಗೆ ಕೇಂದ್ರ ಸರ್ಕಾರ ಕೂಡ ಉತ್ತೇಜನ ನೀಡುತ್ತಿದ್ದು, ಅತ್ಯುತ್ತಮ ಕ್ರೀಡಾಪಟುಗಳು ಹೊರಹೊಮ್ಮಬೇಕು ಎಂದರು.

ಸಂಸ್ಥೆಯ ಅಧ್ಯಕ್ಷ ಪ್ರೊ.ನರೇಂದ್ರ ಎಲ್‌.ನಾಯಕ್‌, ಉಪಾಧ್ಯಕ್ಷೆ ಉಷಾಪ್ರಭಾ ನಾಯಕ್‌, ಐಟಿ ಮುಖ್ಯಸ್ಥ ಅಂಕುಶ್‌ ಎನ್‌.ನಾಯಕ್‌, ಪ್ರಾಂಶುಪಾಲ ಪ್ರೊ.ರಾಮಚಂದ್ರ ಭಟ್‌ ಇದ್ದರು.

ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಪುರಬ್‌ ಶೆಟ್ಟಿ ಪ್ರತಿಜ್ಞಾವಿಧಿ ಬೋಧಿಸಿದರು. ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳ ಪಥ ಸಂಚಲನ, ವಿವಿಧ ರಿಲೇ ಏರ್ಪಟ್ಟಿತು.