ಸಾರಾಂಶ
ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಬಾಗವಹಿಸಿ ಹೆಮ್ಮಾಡಿಯ ಜನತಾ ಪಿಯು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಕೃಷ್ಣ ಮೊಗವೀರ ಮಾತನಾಡಿದರು.
ಕನ್ನಡಪ್ರಭ ವಾರ್ತೆ ಉಡುಪಿ
ಕ್ರೀಡೆಗೆ ಐಎಂಜೆ ಶಿಕ್ಷಣ ಸಂಸ್ಥೆಗಳು ಉತ್ತಮ ರೀತಿಯಲ್ಲಿ ಉತ್ತೇಜನ ನೀಡುತ್ತಿದ್ದು, ಇಲ್ಲಿ ಅತ್ಯುತ್ತಮ ಕ್ರೀಡಾ ಪ್ರತಿಭೆಗಳು ಬೆಳಕಿಗೆ ಬರುತ್ತಿದ್ದಾರೆ. ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರೀಯ ಮತ್ತು ವಿಶ್ವವಿದ್ಯಾಲಯದ ಮಟ್ಟದ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲಿ. ಶಿಕ್ಷಣದ ಜೊತೆಗೆ ಕ್ರೀಡೆಗೂ ಕೂಡ ಮಹತ್ವ ನೀಡಿ ಎಂದು ಹೆಮ್ಮಾಡಿಯ ಜನತಾ ಪಿಯು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಕೃಷ್ಣ ಮೊಗವೀರ ವಿದ್ಯಾರ್ಥಿಗಳಿಗೆ ಕರೆ ನೀಡಿದರು.ಇಲ್ಲಿನ ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಬಾಗವಹಿಸಿ ಅವರು ಮಾತನಾಡಿದರು.
ಕೂಟಕ್ಕೆ ಕ್ರೀಡಾ ಜ್ಯೋತಿಯ ಪ್ರಜ್ವಲದೊಂದಿಗೆ ವಿಧ್ಯುಕ್ತವಾಗಿ ಚಾಲನೆ ನೀಡಲಾಯಿತು. ಕ್ರೀಡಾಕೂಟದ ಪ್ರಮುಖ ಆಕರ್ಷಣೆಯಾಗಿ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಪಥಸಂಚಲನದಲ್ಲಿ ಪಾಲ್ಗೊಂಡರು. 6 ತಂಡಗಳಾಗಿ ವಿಂಗಡಿಸಲಾದ ವಿದ್ಯಾರ್ಥಿಗಳ ಗುಂಪು ಅದ್ಬುತ ಪಥಸಂಚಲನವನ್ನು ಪ್ರದರ್ಶಿಸಿತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲ ಡಾ. ಪ್ರತಿಭಾ ಎಂ ಪಾಟೀಲ್ ಅವರು, ಸೋಲು ಗೆಲವುಗಳನ್ನು ಸಮಾನವಾಗಿ ಸ್ವೀಕರಿಸಿ, ಪರಸ್ಪರ ಸಹಕಾರ ಹಾಗೂ ಸ್ಪರ್ಧಾ ಮನೋಭಾವನೆ ಹೊಂದಿ ಕ್ರೀಡಾಕೂಟ ಯಶಸ್ವಿಗೊಳಿಸಿ ಎಂದರು.
ಸಂಸ್ಥೆಯ ಬ್ರ್ಯಾಂಡ್ ಬಿಲ್ಡಿಂಗ್ ನಿರ್ದೇಶಕ ಡಾ. ರಾಮಕೃಷ್ಣ ಹೆಗ್ಡೆ, ಕಾಲೇಜಿನ ಆಡಳಿತ ಮಂಡಳಿ ಕ್ರೀಡೆಗೆ ಮಹತ್ವ ನೀಡುತ್ತದೆ. ಅದಕ್ಕಾಗಿ ಹೊಸತಾಗಿ 400 ಮೀಟರ್ ಟ್ರ್ಯಾಕ್ ನಿರ್ಮಿಸಿ ಕ್ರೀಡಾಪಟುಗಳಿಗೆ ಉತ್ತಮ ಅವಕಾಶ ನೀಡುತ್ತಿದೆ, ವಿದ್ಯಾರ್ಥಿಗಳು ಅದನ್ನು ಸದುಪಯೋಗಪಡಿಸಿಕೊಳ್ಳಿ ಎಂದರು.ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಪ್ರವೀಣ್ ಖಾರ್ವಿ, ವಾರ್ಷಿಕ ಕ್ರೀಡಾ ವರದಿ ವಾಚಿಸಿದರು. ಶ್ರೀರಕ್ಷ ಸ್ವಾಗತ ಮತ್ತು ವಂದನಾರ್ಪಣೆ ನಿರ್ವಹಿಸಿದರು. ಕಾಲೇಜಿನ ಉಪನ್ಯಾಸಕ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸಂತೃಪ್ತಿ ನಿರೂಪಿಸಿದರು.