ಬೆಳಗಾವಿ ಗ್ರಾಮೀಣ ತಾಲೂಕಿನ ಬೆನಕನಹಳ್ಳಿಯಲ್ಲಿರುವ ಎಸ್.ಕೆ.ಎಜುಕೇಶನ್ ಟ್ರಸ್ಟ್‌ನಿಂದ ನಡೆಸಲ್ಪಡುವ ಸತ್ ಸಂಸ್ಕಾರ ಇಂಟರ್‌ನ್ಯಾಷನಲ್ ಸ್ಕೂಲ್‌ನ ವಾರ್ಷಿಕ ಕ್ರೀಡಾಕೂಟವು ನ.24 ರಂದು ಬೆಳಗ್ಗೆ 9 ಗಂಟೆಗೆ ಶಾಲೆಯಲ್ಲಿ ನಡೆಯಲಿದೆ.
ಕನ್ನಡಪ್ರಭ ವಾರ್ತೆ ಬೆಳಗಾವಿ
ಬೆಳಗಾವಿ ಗ್ರಾಮೀಣ ತಾಲೂಕಿನ ಬೆನಕನಹಳ್ಳಿಯಲ್ಲಿರುವ ಎಸ್.ಕೆ.ಎಜುಕೇಶನ್ ಟ್ರಸ್ಟ್‌ನಿಂದ ನಡೆಸಲ್ಪಡುವ ಸತ್ ಸಂಸ್ಕಾರ ಇಂಟರ್‌ನ್ಯಾಷನಲ್ ಸ್ಕೂಲ್‌ನ ವಾರ್ಷಿಕ ಕ್ರೀಡಾಕೂಟವು ನ.24 ರಂದು ಬೆಳಗ್ಗೆ 9 ಗಂಟೆಗೆ ಶಾಲೆಯಲ್ಲಿ ನಡೆಯಲಿದೆ.ಮುಖ್ಯ ಅತಿಥಿಗಳಾಗಿ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕ್ರೀಡಾ ನಿರ್ದೇಶಕ ಡಾ.ಜಗದೀಶ್ ಎಸ್.ಗಸ್ತಿ ಭಾಗವಹಿಸಲಿದ್ದು, ವಿದ್ಯಾರ್ಥಿಗಳ ಜೀವನದಲ್ಲಿ ಕ್ರೀಡೆಯ ಪಾತ್ರ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಕ್ರೀಡೆಯಲ್ಲಿ ಭಾಗವಹಿಸುವಿಕೆಯ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಲಿದ್ದಾರೆ. ಎಸ್.ಕೆ.ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಸಿದ್ಧರೂಢ ಸಂಗೊಳ್ಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಸತ್ ಸಂಸ್ಕಾರ ಇಂಟರ್‌ನ್ಯಾಷನಲ್ ಸ್ಕೂಲ್‌ನ ಪ್ರಾಂಶುಪಾಲರಾದ ಶ್ರುತಿ ಎ.ಮಹಾಜನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.