ಸಾರಾಂಶ
ಮಕ್ಕಿ ಶಾಸ್ತವು ದೇವರ ವಾರ್ಷಿಕ ಉತ್ಸವ ಎರಡು ದಿನಗಳ ಕಾಲ ಅತ್ಯಂತ ವಿಜೃಂಭಣೆಯಿಂದಜರುಗಿ ಸಂಪನ್ನಗೊಂಡಿತು. ಎರಡು ಪ್ರಮುಖ ಕೋಲಗಳೊಂದಿಗೆ ಉತ್ಸವ ಕೊನೆಗೊಂಡಿತು.
ಕನ್ನಡಪ್ರಭ ವಾರ್ತೆ ನಾಪೋಕ್ಲು
ಸಮೀಪದ ಬೇತು ಗ್ರಾಮದ ಮಕ್ಕಿ ಶಾಸ್ತಾವು ದೇವರ ವಾರ್ಷಿಕ ಉತ್ಸವ ಎರಡು ದಿನಗಳ ಕಾಲ ಅತ್ಯಂತ ವಿಜೃಂಭಣೆಯಿಂದ ಜರುಗಿ ಸಂಪನ್ನಗೊಂಡಿತ್ತು.ಶನಿವಾರ ದೇವಾಲಯದ ಆವರಣದಲ್ಲಿ ನಡೆದ ಎರಡು ಪ್ರಮುಖ ಕೋಲಗಳೊಂದಿಗೆ ಉತ್ಸವ ಕೊನೆಗೊಂಡಿತು. ಮಕ್ಕಿ ಶಾಸ್ತಾವು ಸನ್ನಿಧಿಯಲ್ಲಿ ಬೆಳಗ್ಗಿನಿಂದಲೇ ವಿವಿಧ ಕೋಲಗಳು ಶಾಸ್ತಾವು ದೇವರಿಗೆ ಸೇವೆ ಸಲ್ಲಿಸಿದವು. ಬೆಳಗ್ಗೆ ಅಜ್ಜಪ್ಪ ಕೋಲ ಹಾಗೂ ಮಧ್ಯಾಹ್ನ ವಿಷ್ಣುಮೂರ್ತಿ ಕೋಲಮೇಲೇರಿ ಗಮನ ಸೆಳೆದವು.
ಭಕ್ತರು ಅಧಿಕ ಸಂಖ್ಯೆಯಲ್ಲಿ ಉತ್ಸವದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ವೀಕ್ಷಿಸಿದರು. ಭಕ್ತರಿಂದ ದೇವರಿಗೆ ವಿವಿಧ ರೀತಿಯ ಹರಕೆಗಳನ್ನು ಸಲ್ಲಿಸಿ ತೀರ್ಥ ಪ್ರಸಾದ ಸ್ವೀಕರಿಸಿ ಪುನೀತರಾದರು. ದೇವಾಲಯದ ವತಿಯಿಂದ ಉತ್ಸವದಲ್ಲಿ ಭಾಗವಹಿಸಿದ ಭಕ್ತರಿಗೆ ಅನ್ನದಾನ ಏರ್ಪಡಿಸಲಾಗಿತ್ತು.ಅಪರಾಹ್ನ ಜರುಗಿದ ವಿಷ್ಣುಮೂರ್ತಿ ಕೋಲವನ್ನು ಭಕ್ತರು ಭಯಭಕ್ತಿಯಿಂದ ವೀಕ್ಷಿಸಿದರು. ಉತ್ಸವದ ಅಂಗವಾಗಿ ಶುಕ್ರವಾರ ಮಧ್ಯಾಹ್ನ ಎತ್ತೇರಾಟ ಹಾಗೂ ರಾತ್ರಿ ದೀಪಾರಾಧನೆ ನಡೆಯಿತು.
ಈ ಸಂದರ್ಭ ದೇವಾಲಯದ ಆಡಳಿತ ಮಂಡಳಿ ಪದಾಧಿಕಾರಿಗಳು ತಕ್ಕ ಮುಖ್ಯಸ್ಥರು ಭಕ್ತಾದಿಗಳು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿದ್ದರು.