ರಾಜ್ಯದಲ್ಲಿ ಆಡಳಿತದಲ್ಲಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೇಸ್ ಸರ್ಕಾರ ಅಭಿವೃದ್ಧಿ ಪರವಾದ ಸರ್ಕಾರವಾಗಿದೆ. ಬಡಜನತೆಗೆ ಗ್ಯಾರಂಟಿ ಯೋಜನೆಗಳನ್ನು ಕೊಡುವ ಜೊತೆಗೆ ಅಭಿವೃದ್ಧಿ ಮಾಡುತ್ತ ಮುನ್ನಡೆಯುತ್ತಿದೆ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ಹೇಳಿದ್ದಾರೆ.

- ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಶಾಸಕ ಶಿವಗಂಗಾ

- - -

ಕನ್ನಡಪ್ರಭ ವಾರ್ತೆ ಚನ್ನಗಿರಿ

ರಾಜ್ಯದಲ್ಲಿ ಆಡಳಿತದಲ್ಲಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೇಸ್ ಸರ್ಕಾರ ಅಭಿವೃದ್ಧಿ ಪರವಾದ ಸರ್ಕಾರವಾಗಿದೆ. ಬಡಜನತೆಗೆ ಗ್ಯಾರಂಟಿ ಯೋಜನೆಗಳನ್ನು ಕೊಡುವ ಜೊತೆಗೆ ಅಭಿವೃದ್ಧಿ ಮಾಡುತ್ತ ಮುನ್ನಡೆಯುತ್ತಿದೆ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ಹೇಳಿದರು.

ಮಂಗಳವಾರ ತಾಲೂಕಿನ ಮಾದೇನಹಳ್ಳಿ ಗ್ರಾಮದಲ್ಲಿ ₹1 ಕೋಟಿ ವೆಚ್ಚದ ಮಾದೇನಹಳ್ಳಿ ಗ್ರಾಮದಿಂದ ಶ್ರೀನಿವಾಸ ಪುರಕ್ಕೆ ಹೋಗುವ ರಸ್ತೆ ಅಭಿವೃದ್ಧಿಗೆ ಗುದ್ದಲಿ ಪೂಜೆ, ₹25 ಲಕ್ಷ ವೆಚ್ಚದಲ್ಲಿ ಚರಂಡಿ ನಿರ್ಮಾಣ, ₹20 ಲಕ್ಷ ವೆಚ್ಚದಲ್ಲಿ ಸೇವಾಲಾಲ್ ಭವನ ಕಾಮಗಾರಿ, ₹14.50 ಲಕ್ಷ ವೆಚ್ಚದಲ್ಲಿ ಹೊಸೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೊಠಡಿಗಳ ನಿರ್ಮಾಣ, ಕೆ.ಗಾಣದಕಟ್ಟೆ ಗ್ರಾಮದಲ್ಲಿ ₹43.50 ಲಕ್ಷ ವೆಚ್ಚದಲ್ಲಿ ಸರ್ಕಾರಿ ಶಾಲೆಯ ಕೊಠಡಿಗಳ ನಿರ್ಮಾಣ, ಜೋಳದಾಳ್ ಗ್ರಾಮದಲ್ಲಿ ₹72 ಲಕ್ಷ ವೆಚ್ಚದಲ್ಲಿ ಸರ್ಕಾರಿ ಶಾಲೆಯ 4 ಕೊಠಡಿಗಳ ನಿಮಾಣ, ₹5 ಲಕ್ಷ ವೆಚ್ಚದಲ್ಲಿ ಕುಕ್ಕುವಾಡೇಶ್ವರಿ ದೇವಾಲಯದ ಮಹಾದ್ವಾರ ನಿರ್ಮಾಣ ಒಟ್ಟು ₹2.80 ಕೋಟಿ ವೆಚ್ಚದ ವಿವಿಧ ಕಾಮಗಾರಿ ಕೆಲಸಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಜನತೆ ನನ್ನ ಮತ್ತು ಕಾಂಗ್ರೆಸ್ ಪಕ್ಷದ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ಚ್ಯುತಿ ಬಾರದ ರೀತಿಯಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತ ಮುನ್ನಡೆದಿದ್ದೇನೆ. ವಿರೋಧ ಪಕ್ಷದವರು ವಿನಾಕಾರಣ ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಿರುವುದು ಸರಿಯಲ್ಲ. ಮುಂದಿನ ಕೆಲವೇ ದಿನಗಳಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ಬರಲಿದೆ. ನಿಮ್ಮ ಎಲ್ಲ ಸುಳ್ಳು ಕಥೆಗಳಿಗೆ ಕ್ಷೇತ್ರದ ಜನರೇ ತಕ್ಕಪಾಠ ಕಲಿಸಲಿದ್ದಾರೆ ಎಂದರು.

ಕ್ಷೇತ್ರದಲ್ಲಿ ಆಗುತ್ತಿರುವ ಅಭಿವೃದ್ಧಿ ಕೆಲಸಗಳನ್ನು ಸಹಿಸದ ಕೆಲವರು ವಿನಾಕಾರಣ ಅರೋಪಗಳನ್ನು ಮಾಡುತ್ತ ಹೋಗುತ್ತಿದ್ದಾರೆ. ಅವರಿಗೆ ಉತ್ತರ ಕೊಡುತ್ತ ಕಾಲಹರಣ ಮಾಡುವ ಬದಲು ಅಭಿವೃದ್ಧಿ ಕೆಲಸಗಳಿಗೆ ಒತ್ತು ನೀಡಿ, ನನ್ನ ಅಭಿವೃದ್ಧಿ ಕೆಲಸಗಳೇ ಅವರಿಗೆ ಉತ್ತರವಾಗಬೇಕು. ಆ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇನೆ. ಕ್ಷೇತ್ರದ ಪ್ರತಿ ಗ್ರಾಮದಲ್ಲಿಯೋ ಒಂದಿಲ್ಲೊಂದು ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ. ರಾಜ್ಯದ ಸಿಎಂ ಸಹಾ ನನಗೆ ಹೆಚ್ಚಿನ ಸಹಕಾರ ನೀಡುತ್ತಿದ್ದಾರೆ ಎಂದರು.

ತಾಪಂ ಮಾಜಿ ಸದಸ್ಯ ಶ್ರೀಕಾಂತ್, ಗ್ರಾಪಂ ಮಾಜಿ ಅಧ್ಯಕ್ಷ ಕುಶಾಲ್, ಪ್ರಮುಖರಾದ ಓಂಕಾರಮೂರ್ತಿ, ಅಂಜಿನಪ್ಪ, ಗೋಪಾಲ ನಾಯ್ಕ್, ಜಯರಾಂ ನಾಯ್ಕ್, ಕವಿತಮ್ಮ, ನಾಗರಾಜ್, ಬಸವರಾಜ್, ಸುಣಿಗೆರೆ ಮಲ್ಲಾ ನಾಯ್ಕ್, ದೋಣಿಹಳ್ಳಿ ಸುನೀಲ್, ನಾಗರಾಜ ನಾಯ್ಕ್ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.

- - -

-27ಕೆಸಿಎನ್‌ಜಿ1:

₹2.80 ಕೋಟಿ ವೆಚ್ಚದ ವಿವಿಧ ಕಾಮಗಾರಿ ಕೆಲಸಗಳಿಗೆ ಶಾಸಕ ಬಸವರಾಜು ವಿ.ಶಿವಗಂಗಾ ಗುದ್ದಲಿ ಪೂಜೆ ನೆರವೇರಿಸಿದರು.