ಮಾಜಿ ಶಾಸಕ ಅನ್ನದಾನಿಯಿಂದ ಸಂವಿಧಾನ ವಿರೋಧಿ ಹೇಳಿಕೆ: ಸಾಗ್ಯ ಕೆಂಪಯ್ಯ ಖಂಡನೆ

| Published : Aug 27 2024, 01:40 AM IST

ಮಾಜಿ ಶಾಸಕ ಅನ್ನದಾನಿಯಿಂದ ಸಂವಿಧಾನ ವಿರೋಧಿ ಹೇಳಿಕೆ: ಸಾಗ್ಯ ಕೆಂಪಯ್ಯ ಖಂಡನೆ
Share this Article
  • FB
  • TW
  • Linkdin
  • Email

ಸಾರಾಂಶ

ಮಾಜಿ ಶಾಸಕ ಅನ್ನದಾನಿ ಕ್ಷೇತ್ರದಲ್ಲಿ ಎರಡು ಬಾರಿ ಶಾಸಕರಾಗಿದ್ದ ಅವಧಿಯಲ್ಲಿ ಕ್ಷೇತ್ರದಲ್ಲಿ ಸಾಧನೆ ಏನು ಎನ್ನುವುದನ್ನು ಅರಿಯಬೇಕು. ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಸೋಲಿಸಿ ಮನೆಗೆ ಕಳುಹಿಸಿದ್ದಾರೆ ಎನ್ನುವುದನ್ನು ಮರೆಯಬಾರದು.

ಕನ್ನಡಪ್ರಭ ವಾರ್ತೆ ಮಳವಳ್ಳಿ

ಕಾಂಗ್ರೆಸ್‌ಗೆ ಮತಹಾಕಿದ ಮತದಾರರನ್ನು ಮುಠಾಳರು ಎನ್ನುವ ಮೂಲಕ ಮಾಜಿ ಶಾಸಕ ಡಾ.ಕೆ.ಅನ್ನದಾನಿ ಸಂವಿಧಾನದ ವಿರೋಧಿ ಹೇಳಿಕೆ ನೀಡಿರುವುದನ್ನು ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಸಾಗ್ಯ ಕೆಂಪಯ್ಯ ಖಂಡಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕರು ರಾಜಕೀಯ ವಿರೋಧಿಗಳನ್ನು ಟೀಕಿಸುವುದು ಸಾಮಾನ್ಯ. ಆದರೆ, ವ್ಯಯಕ್ತಿವಾಗಿ ಟೀಕೆ ಮಾಡುವುದು ತಪ್ಪು. ನಿಮಗೆ ಯೋಗ್ಯತೆ ಇದಿಯಾ ಎನ್ನುವ ಅನ್ನದಾನಿ ಅವರಿಗೆ ಶಾಸಕರ ಬಗ್ಗೆ ಅವಹೇಳನವಾಗಿ ಮಾತನಾಡುವ ಯೋಗ್ಯತೆ ಉಳಿಸಿಕೊಂಡಿದ್ದಾರೆಯೇ ಎಂದು ಪ್ರಶ್ನಿಸಿದರು.

ಕುಮಾರಸ್ವಾಮಿ ಅವರನ್ನು ಮೆಚ್ಚಿಸಲು ನೀವು ಏನು ಬೇಕಾದರೂ ಮಾಡಿಕೊಳ್ಳಿ. ಆದರೆ, ಪಿ.ಎಂ ನರೇಂದ್ರಸ್ವಾಮಿ ಅವರ ಬಗ್ಗೆ ಬಾಯಿಗೆ ಬಂದಂತೆ ಮಾತನಾಡುವುದನ್ನು ನಿಲ್ಲಿಸಬೇಕು. ಮುಂದುವರೆದರೇ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.

ಜಿಲ್ಲಾ ಪರಿಷದ್ ಮಾಜಿ ಸದಸ್ಯ ಜಯರಾಜು ಮಾತನಾಡಿ, ಮಾಜಿ ಶಾಸಕ ಅನ್ನದಾನಿ ಕ್ಷೇತ್ರದಲ್ಲಿ ಎರಡು ಬಾರಿ ಶಾಸಕರಾಗಿದ್ದ ಅವಧಿಯಲ್ಲಿ ಕ್ಷೇತ್ರದಲ್ಲಿ ಸಾಧನೆ ಏನು ಎನ್ನುವುದನ್ನು ಅರಿಯಬೇಕು. ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಸೋಲಿಸಿ ಮನೆಗೆ ಕಳುಹಿಸಿದ್ದಾರೆ ಎನ್ನುವುದನ್ನು ಮರೆಯಬಾರದು ಎಂದರು.

ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಮತದಾನದ ಮೂಲಕ ಜನಪ್ರತಿನಿಧಿಗಳನ್ನು ಆಯ್ಕೆ ಎನ್ನುವ ಸಂವಿಧಾನದ ಅರಿವು ಇಲ್ಲದ ಡಾ.ಅನ್ನದಾನಿ ಅವರು ಕಾಂಗ್ರೆಸ್ ಬಗ್ಗೆ ಟೀಕೆ ಮಾಡುವುದು ಖಂಡನೀಯ ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಶಿವಕುಮಾರ್, ಬಂಡೂರು ಸಿದ್ದರಾಜು, ಕಿರಣ್‌ಶಂಕರ್, ಮುದ್ದುರಾಜ್, ನಟರಾಜ್, ಸೋಮಶೇಖರ್, ಮಹದೇವಯ್ಯ, ಬಾಣಸಮುದ್ರ ಸಿದ್ದರಾಜು, ಪುಟ್ಟಸ್ವಾಮಿ ಸೇರಿದಂತೆ ಇತರರು ಇದ್ದರು.