ಸಿದ್ದರಾಮಯ್ಯರಿಂದ ದಲಿತ ವಿರೋಧಿ ನೀತಿ

| Published : May 23 2024, 01:03 AM IST

ಸಾರಾಂಶ

ಚಿಕ್ಕಮಗಳೂರ, ರಾಜ್ಯದಿಂದ ಯಾರು ಕೂಡಾ ಪ್ರಧಾನಿ ಅಭ್ಯರ್ಥಿ ಆಕಾಂಕ್ಷಿಗಳಿಲ್ಲವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡುವ ಮೂಲಕ ದಲಿತ ವಿರೋಧಿ ನಡೆ ಅನುಸರಿಸುತ್ತಿದ್ದಾರೆ ಎಂದು ದಸಂಸ ಜಿಲ್ಲಾ ಸಂಚಾಲಕ ಕಬ್ಬಿಕೆರೆ ಮೋಹನ್‌ಕುಮಾರ್ ಆರೋಪಿಸಿದ್ದಾರೆ.

ದಸಂಸ ಜಿಲ್ಲಾ ಸಂಚಾಲಕ ಕಬ್ಬಿಕೆರೆ ಮೋಹನ್‌ಕುಮಾರ್ ಆರೋಪ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ರಾಜ್ಯದಿಂದ ಯಾರು ಕೂಡಾ ಪ್ರಧಾನಿ ಅಭ್ಯರ್ಥಿ ಆಕಾಂಕ್ಷಿಗಳಿಲ್ಲವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡುವ ಮೂಲಕ ದಲಿತ ವಿರೋಧಿ ನಡೆ ಅನುಸರಿಸುತ್ತಿದ್ದಾರೆ ಎಂದು ದಸಂಸ ಜಿಲ್ಲಾ ಸಂಚಾಲಕ ಕಬ್ಬಿಕೆರೆ ಮೋಹನ್‌ಕುಮಾರ್ ಆರೋಪಿಸಿದ್ದಾರೆ.ದೇಶಾದ್ಯಂತ ಹಲವಾರು ರಾಜ್ಯಗಳು ಮಲ್ಲಿಕಾರ್ಜುನ್ ಖರ್ಗೆ ಪ್ರಧಾನಿ ಅಭ್ಯರ್ಥಿ ಘೋಷಿಸುತ್ತಿದ್ದರೂ ಸಹ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರ ಖರ್ಗೆ ಅವರನ್ನು ಲೆಕ್ಕಕ್ಕೆ ತೆಗೆದುಕೊಳ್ಳದೇ ವಿನಾಕಾರಣ ವಿರೋಧಿಸುತ್ತಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.ಪಶ್ಚಿಮ ಬಂಗಾಳ, ದೆಹಲಿ ರಾಜ್ಯದ ಮುಖ್ಯಮಂತ್ರಿ ಖರ್ಗೆ ಆಡಳಿತ ವೈಖರಿ ಒಪ್ಪಿ ದೇಶದ ಚುಕ್ಕಾಣಿ ಹಿಡಿಯಲು ಯೋಗ್ಯ ರೆಂದು ಅರಿತಿರುವಾಗ, ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರ ಇದರಿಂದ ದೂರ ಸರಿದು ಬೇಕಾಬಿಟ್ಟಿ ಹೇಳಿಕೆ ನೀಡಿ ಖರ್ಗೆ ಅವರಿಗೆ ಅವಮಾನಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.ದಲಿತ ಹಾಗೂ ಅಹಿಂದಾ ಪರ ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂತಹ ಹೇಳಿಕೆಯಿಂದ ದಲಿತ ವಿರೋಧಿ ಎಂದು ಸಾಬೀತುಪಡಿಸಿದ್ದಾರೆ. ಇದೇ ಬಿಜೆಪಿ ಮುಖಂಡರು ಹೇಳಿಕೆ ನೀಡಿದ್ದರೆ ದಲಿತ ವಿರೋಧಿ, ಶೋಷಿತ ಸಮಾಜ ವಿರೋಧಿ, ಕೋಮುವಾದಿ ಎಂಬ ಪಟ್ಟ ಕಟ್ಟುತ್ತಾರೆ. ಸಿದ್ದರಾಮಯ್ಯ ಯಾರ ವಿರೋಧಿ ಯಾರ ಪರ ಎಂದು ಪ್ರಶ್ನಿಸಿದ್ದಾರೆ.ಪೋಟೋ ಫೈಲ್ ನೇಮ್‌ 22 ಕೆಸಿಕೆಎಂ 3