ಸಾರಾಂಶ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ರಾಷ್ಟ್ರೀಯ ಡೆಂಘೀ ವಿರೋಧ ಮಾಸಾಚರಣೆ ಕಾರ್ಯಕ್ರಮ ಪಟ್ಟಣದ ಸ್ತ್ರೀ ಶಕ್ತಿ ಭವನದಲ್ಲಿ ಮಂಗಳವಾರ ನಡೆಯಿತು. ಜಿಲ್ಲಾ ಸರ್ವೇಕ್ಷಣಾ ಅಧಿಕಾರಿಗಳ ಕಚೇರಿಯ ಸಾಂಕ್ರಾಮಿಕ ರೋಗ ತಜ್ಞ ಮಂಜುನಾಥ್ ಮಾತನಾಡಿದರು.
ಕನ್ನಡಪ್ರಭ ವಾರ್ತೆ ಸೋಮವಾರಪೇಟೆ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ರಾಷ್ಟ್ರೀಯ ಡೆಂಘೀ ವಿರೋಧ ಮಾಸಾಚರಣೆ ಕಾರ್ಯಕ್ರಮ ಪಟ್ಟಣದ ಸ್ತ್ರೀ ಶಕ್ತಿ ಭವನದಲ್ಲಿ ಮಂಗಳವಾರ ನಡೆಯಿತು.ಜಿಲ್ಲಾ ಸರ್ವೇಕ್ಷಣಾ ಅಧಿಕಾರಿಗಳ ಕಚೇರಿಯ ಸಾಂಕ್ರಾಮಿಕ ರೋಗ ತಜ್ಞ ಮಂಜುನಾಥ್ ಮಾತನಾಡಿ, ಡೆಂಘೀ ಹಾಗೂ ಮಲೇರಿಯಾ ಜ್ವರ ಶೀಘ್ರವಾಗಿ ಪತ್ತೆ ಹಚ್ಚಿ ಸಂಪೂರ್ಣವಾದ ಚಿಕಿತ್ಸೆಯನ್ನು ನೀಡುವುದರ ಮೂಲಕ ಗುಣಪಡಿಸಬಹುದು. ಜ್ವರದ ಲಕ್ಷಣಗಳು ಗೊತ್ತಾದ ತಕ್ಷಣ ಸ್ಥಳೀಯ ಆಸ್ಪತ್ರೆಗೆ ತೆರಳಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಹೇಳಿ ಅವರು, ಚಿಕೂನ್ ಗುನ್ಯಾ ಜ್ವರ ಲಕ್ಷಣಗಳು ಮತ್ತು ಚಿಕಿತ್ಸೆಯ ಬಗ್ಗೆ ತಿಳಿಸಿದರು.ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಶ್ವಜ್ಞಾ ಮಾತನಾಡಿ, ರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮ, ರಾಷ್ಟ್ರೀಯ ಕುಷ್ಟರೋಗ ನಿರ್ಮೂಲನೆ, ವಿಶ್ವ ಜನಸಂಖ್ಯಾ ನಿಯಂತ್ರಣ ಕಾರ್ಯಕ್ರಮದ ಬಗ್ಗೆ, ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳು ಹಾಗೂ ಪರಿಸರ, ನೀರಿನ ಸ್ವಚ್ಛತೆಯ ಬಗ್ಗೆ ಮಾಹಿತಿಯನ್ನು ನೀಡಿದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀದೇವಿ, ತಾಲೂಕಿನ ಅಂಗನವಾಡಿ ಕೇಂದ್ರದ ಸಹಾಯಕಿಯರು ಇದ್ದರು.