ಕಾರ್ಕಳ: ಮಾದಕ ವಸ್ತುಗಳ ದುರುಪಯೋಗ ತಡೆ ಹಾಗೂ ಸಮಾಜದಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಶ್ರೀ ಭುವನೇಂದ್ರ ಕಾಲೇಜಿನ ವತಿಯಿಂದ ಜಾಗೃತಿ ಜಾಥಾ ಕಾರ್ಯಕ್ರಮ ನಡೆಯಿತು.

ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಘಟಕ, ಆಂತರಿಕ ಗುಣಮಟ್ಟ ಕೋಶ, ಎನ್ನೆಸ್ಸೆಸ್‌, ಎನ್‌ಸಿಸಿ, ರೋವರ್ಸ್-ರೇಂಜರ್ಸ್ ಹಾಗೂ ರೆಡ್ ಕ್ರಾಸ್ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.ಮಾದಕವಸ್ತು ವ್ಯಸನ ನಿರ್ಮೂಲನೆ ಕುರಿತಾಗಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಈ ಜಾಥಾ ನಡೆಯಿತು. ಕಾಲೇಜು ಆವರಣದಿಂದ ಪ್ರಾರಂಭವಾದ ಜಾಥಾ ಕಾರ್ಕಳ ಪೇಟೆಯವರೆಗೆ ಸಾಗಿತು. ವಿದ್ಯಾರ್ಥಿಗಳು ವಿವಿಧ ಘೋಷಣೆಗಳನ್ನು ಕೂಗಿ, ಮಾದಕವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಿಗೆ ಸಂದೇಶ ನೀಡಿದರು.ಜಾಥಾಕ್ಕೆ ಕಾಲೇಜಿನ ಪ್ರಾಚಾರ್ಯ ಡಾ. ಮಂಜುನಾಥ ಎ. ಕೋಟ್ಯಾನ್ ಚಾಲನೆ ನೀಡಿದರು.

ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಡಾ. ಈಶ್ವರ್ ಭಟ್ ಹಾಗೂ ವಿವಿಧ ಘಟಕಗಳ ಸಂಯೋಜನಾಧಿಕಾರಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ ಯಶಸ್ಸಿಗೆ ಕಾರ್ಕಳ ನಗರ ಠಾಣೆ ಸಿಬ್ಬಂದಿ ಸಹಕಾರ ನೀಡಿದರು. 3 Attachments