ಸೋಮವಾರಪೇಟೆ: ಮಾದಕ ವಸ್ತು ವಿರೋಧಿ ದಿನಾಚರಣೆ

| Published : Jul 07 2025, 11:48 PM IST

ಸಾರಾಂಶ

ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈಚೆಗೆ ಮಾದಕ ವಸ್ತು ವಿರೋಧಿ ದಿನಾಚರಣೆ ಆಚರಿಸಲಾಯಿತು.

ಕನ್ನಡಪ್ರಭವಾರ್ತೆ ಸೋಮವಾರಪೇಟೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಇಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈಚೆಗೆ ಮಾದಕ ವಸ್ತು ವಿರೋಧಿ ದಿನಾಚರಣೆ ಆಚರಿಸಲಾಯಿತು.

ಇನ್ಸ್ಪೆಕ್ಟರ್ ಮುದ್ದುಮಾದೇವ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಮಾತನಾಡಿ, ಮಾದಕ ವ್ಯಸನಕ್ಕೆ ಯಾರೇ ಆಗಲಿ ಸಿಲುಕಿದಲ್ಲಿ ಅವರ ಜೀವನದೊಂದಿಗೆ ಕುಟುಂಬವೂ ಸಂಕಷ್ಟಕ್ಕೆ ಈಡಾಗಬೇಕಾಗುತ್ತದೆ. ಆದುದ್ದರಿಂದ ವಿದ್ಯಾರ್ಥಿಗಳು ಮಾದಕ ವ್ಯಸನದಿಂದ ದೂರ ಇದ್ದು, ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕಿದೆ. ಮನೆಯಲ್ಲಿ ಯಾರೇ ಮಾದಕ ವಸ್ತು ಬಳಸುತ್ತಿದ್ದರೆ, ಅವರಿಗೆ ವಿದ್ಯಾರ್ಥಿಗಳಾದ ನೀವು ಅದರ ಪರಿಣಾಮಗಳ ಬಗ್ಗೆ ತಿಳಿಹೇಳುವ ಮೂಲಕ ವ್ಯಸನ ಮುಕ್ತರನ್ನಾಗಿ ಮಾಡಬೇಕು ಎಂದರು.

ಕಾಲೇಜಿನ ಪ್ರಾಂಶುಪಾಲರಾದ ಬೆಳ್ಳಿಯಪ್ಪ ಮಾತನಾಡಿ, ಶ್ರೀ ಕ್ಷೇತ್ರವು ಗ್ರಾಮಾಭಿವೃದ್ಧಿಯ ಮೂಲಕ ಹತ್ತು ಹಲವು ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದೆ. ಇಂತಹ ಕಾರ್ಯಕ್ರಮಗಳಿಂದ ಮುಂದಿನ ಪೀಳಿಗೆಗೆ ಒಳಿತಾಗಲಿದೆ ಎಂದರು.

ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಹನುಂತಪ್ಪ ಅಂಗಡಿ ಅವರು ಮಾತನಾಡಿ, ನಮ್ಮ ಯೋಜನೆಯ ಮೂಲಕ ಜನಮಂಗಲ ಕಾರ್ಯಕ್ರಮ, ಜ್ಞಾನದೀಪ, ಸ್ಮಜ್ಞಾನ ನಿಧಿ ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದ್ದೇವೆ. ಇದರಿಂದ ಗ್ರಾಮೀಣ ಭಾಗಗಳ ಜನರಿಗೆ ಹೆಚ್ಚಿನ ಅನುಕೂಲವಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕ ಶಮಂತ್, ವಿದ್ಯಾರ್ಥಿಗಳು ಹಾಗೂ ಯೋಜನೆಯ ಮೇಲ್ವಿಚಾರಕರು ಇದ್ದರು.