ಕನ್ನಡಪ್ರಭ ವಾರ್ತೆ ಯಮಕನಮರಡಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷಗಳಾದರೂ ರೈತ ವಿರೋಧಿ ನೀತಿ ಅನುಸರಿಸುತ್ತಿದೆ. ಇದನ್ನು ಖಂಡಿಸಿ ಡಿ.9 ರಂದು ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಾಗುವುದು. ಮುತ್ತಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಪಾಲ್ಗೊಳ್ಳಬೇಕೆಂದು ಹುಕ್ಕೇರಿ ಶಾಸಕ ನಿಖಿಲ ಕತ್ತಿ ಕೋರಿದರು.

ಕನ್ನಡಪ್ರಭ ವಾರ್ತೆ ಯಮಕನಮರಡಿ

ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷಗಳಾದರೂ ರೈತ ವಿರೋಧಿ ನೀತಿ ಅನುಸರಿಸುತ್ತಿದೆ. ಇದನ್ನು ಖಂಡಿಸಿ ಡಿ.9 ರಂದು ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಾಗುವುದು. ಮುತ್ತಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಪಾಲ್ಗೊಳ್ಳಬೇಕೆಂದು ಹುಕ್ಕೇರಿ ಶಾಸಕ ನಿಖಿಲ ಕತ್ತಿ ಕೋರಿದರು.

ಯಮಕನಮರಡಿ ಕ್ಷೇತ್ರ ವ್ಯಾಪ್ತಿಯ ಕಾಕತಿ ಗ್ರಾಮದ ಸಿದ್ದೇಶ್ವರ ದೇವಸ್ಥಾನದ ಸಭಾಭವನದಲ್ಲಿ ಕರೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ರಾಜ್ಯದಲ್ಲಿ ಅತಿವೃಷ್ಟಿ ಬೆಳೆ ಹಾನಿಯಾದರು ಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವರು ಭೇಟಿ ನೀಡಿ ಸೌಜನ್ಯ ತೋರಿಲ್ಲ. ಮೆಕ್ಕೆಜೋಳ ಬೆಂಬಲ ಬೆಲೆ, ಕಬ್ಬಿಗೆ ಸರ್ಕಾರದಿಂದ ಪ್ರೋತ್ಸಾಹ ಧನ ಹೆಚ್ಚಳ ಸೇರಿ ಹಲವು ವಿಷಯಗಳಲ್ಲಿ ರಾಜ್ಯ ಸರ್ಕಾರ ರೈತ ಮತ್ತು ಜನವಿರೋಧಿ ನೀತಿ ಅನುಸರಿಸುತ್ತಿದೆ. ಬಿಜೆಪಿ ಇದನ್ನು ಖಂಡಿಸಿ ಪ್ರತಿಭಟಿಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸಬೇಕಾಗಿದೆ ಎಂದು ಹೇಳಿದರು.

ರಾಜ್ಯ ಬಿಜೆಪಿ ಎಸ್ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಸವರಾಜ ಹುಂದ್ರಿ ಮಾತನಾಡಿ, ಯಮಕನಮರಡಿ ಮತ ಕ್ಷೇತ್ರದಲ್ಲಿ ಪಿಎಗಳ ರಾಜಕೀಯ ನಡೆಯುತ್ತಿದೆ. ಬರುವ ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಬಿಜೆಪಿ ಕಾರ್ಯಕರ್ತರು ಜಯಶಾಲಿಗಳಾಗುವಂತೆ ದುಡಿಯಬೇಕು. ಈ ಗ್ರಾಮ ಪಂಚಾಯಿತಿ ಚುನಾವಣೆಗಳು- 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದರು.ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಶರಣು ತಳ್ಳಿಕೇರಿ ಮಾತನಾಡಿ, ರಾಜ್ಯ ಸರ್ಕಾರದಲ್ಲಿ ಅಧಿಕಾರದ ಕಿತ್ತಾಟ ಜೋರಾಗಿದ್ದು, ಅಭಿವೃದ್ಧಿ ಕಾರ್ಯಗಳನ್ನು ಆಗುತ್ತಿಲ್ಲ. ಇದನ್ನು ಖಂಡಿಸಿ ಸುವರ್ಣಸೌಧ ಮುತ್ತಿಗೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.ಚಿಕ್ಕೋಡಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಅಮೃತ ಕುಲಕರ್ಣಿ, ಬಿಜೆಪಿ ಅಧ್ಯಕ್ಷ ಸತೀಶ ಅಪ್ಪಾಜಿಗೋಳ, ರೈತ ಮೊರ್ಚಾ ಅಧ್ಯಕ್ಷ ರಾಜು ಹರಗನ್ನವರ, ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಂಘದ ಉಪಾಧ್ಯಕ್ಷ ಅಜೀತ ಮುನ್ನೊಳ್ಳಿ, ನಿರ್ದೇಶಕ ಕಲಗೌಡ ಪಾಟೀಲ, ಬಿಜೆಪಿ ಯಮಕನಮರಡಿ ಉತ್ತರ ಮಂಡಲ ಅಧ್ಯಕ್ಷ ಶ್ರೀಶೈಲ್ ಯಮಕನಮರಡಿ, ದಕ್ಷಿಣ ಮಂಡಲ ಅಧ್ಯಕ್ಷ ಅಪ್ಪಯ್ಯ ಜಾಜರಿ, ಸಂಗಮ ಸಹಕಾರಿ ಸಕ್ಕರೆ ಕಾರ್ಖಾನೆ ನಿರ್ದೇಶಕ ಸಿದ್ದಲಿಂಗ ಸಿದ್ದಗೌಡರ, ರಾಜನ ಮಠಪತಿ, ಬಸವರಾಜ ಪೂಜೇರಿ, ಯಲ್ಲಪ್ಪ ಗಡಕರಿ, ಬಾಳಯ್ಯ ತವಗಮಠ, ಶೇಖರಗೌಡ ಮೋದಗಿ ಮುಂತಾದವರು ಇದ್ದರು.