ಮಲೇರಿಯಾ ವಿರೋಧ ಮಾಸಾಚರಣೆ ಕಾರ್ಯಕ್ರಮ

| Published : Jun 29 2025, 01:36 AM IST

ಸಾರಾಂಶ

ಮಲೇರಿಯಾ ಜ್ವರ ಶೀಘ್ರವಾಗಿ ಪತ್ತೆ ಹಚ್ಚಿ ಸಂಪೂರ್ಣವಾದ ಚಿಕಿತ್ಸೆ ನೀಡಿದಾಗ ಮಲೇರಿಯ ಪೀಡಿತ ವ್ಯಕ್ತಿಯನ್ನು ಗುಣಪಡಿಸಬಹುದು ಎಂದು ಮಂಜುನಾಥ್‌ ತಿಳಿಸಿದರು.

ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ

ಮಲೇರಿಯಾ ಜ್ವರ ಶೀಘ್ರವಾಗಿ ಪತ್ತೆ ಹಚ್ಚಿ ಸಂಪೂರ್ಣವಾದ ಚಿಕಿತ್ಸೆ ನೀಡಿದಾಗ ಮಲೇರಿಯ ಪೀಡಿತ ವ್ಯಕ್ತಿಯನ್ನು ಗುಣಪಡಿಸಬಹುದು ಎಂದು ಜಿಲ್ಲಾ ಎಂಟ ಮಾಲಜಿಸ್ಟ್ (ಕೀಟಶಾಸ್ತ್ರಜ್ಞ) ಮಂಜುನಾಥ್‌ ತಿಳಿಸಿದರು.

ತಾಲೂಕು ಆರೋಗ್ಯ ಇಲಾಖೆ ವತಿಯಿಂದ ಮಾದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಲೇರಿಯಾ ವಿರೋಧ ಮಾಸಾಚರಣೆ ಕಾರ್ಯಕ್ರಮ, ಆಶಾ ಕಾರ್ಯಕರ್ತೆಯವರ ಮಾಸಿಕ ಸಭೆಯಲ್ಲಿ ಮಾತನಾಡಿದರು.

ಈ ಸಂದರ್ಭ ಮಲೇರಿಯಾ ಜ್ವರದ ಲಕ್ಷಣ, ಚಿಕಿತ್ಸೆಯ ಬಗ್ಗೆ, ಸೊಳ್ಳೆಗಳು, ಡೆಂಘಿ ಜ್ವರ, ಚಿಕೂನ್ ಗುನ್ಯಾ ಜ್ವರ, ಎಲ್ಲ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳು, ಪರಿಸರ, ನೀರಿನ ಸ್ವಚ್ಛತೆಯ ಬಗ್ಗೆ, ಆರೋಗ್ಯ ಶಿಕ್ಷಣದ ಕುರಿತು ಮಾಹಿತಿ ನೀಡಲಾಯಿತು.

ಈ ಸಂದರ್ಭ ಮಾದಾಪುರ ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿ ಡಾ. ನಿಶಾ, ಡಾ ದರ್ಶನ್, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ವಿಶ್ವಜ್ಞಾ, ಶಿವಪ್ಪ, ಆರೋಗ್ಯ ಸುರಕ್ಷತಾ ಅಧಿಕಾರಿಗಳಾದ ಮಾರ್ಗರೇಟ್ ಆಳ್ವ, ಗ್ರೀಷ್ಮ ಸುಶೀಲ, ಸಮುದಾಯ ಆರೋಗ್ಯ ಅಧಿಕಾರಿಗಳಾದ ಸಿಂಧು, ಮನೋಜ್, ಶಫಿನಾ, ಶ್ವೇತಾ, ಮೇನಕಾ, ಪ್ರೀತಿ, ಚೈತ್ರ ಹಾಗೂ ಆಶಾ ಕಾರ್ಯಕರ್ತೆಯರು ಹಾಜರಿದ್ದರು.