ಸಾರಾಂಶ
ರಾಜ್ಯ ಸರ್ಕಾರ ಕಳೆದ 20 ತಿಂಗಳಿಂದ ಯಾವುದೇ ಕ್ಷೇತ್ರದಲ್ಲೂ ಅಭಿವೃದ್ದಿ ಕೆಲಸಗಳಿಗೆ ಶಂಕುಸ್ಥಾಪನೆ ಮಾಡಿಲ್ಲ. ಗ್ಯಾರಂಟಿ ಯೋಜನೆಗಾಗಿ ಸರ್ಕಾರ ಪೆಟ್ರೋಲ್. ಡೀಸೆಲ್ ಬೆಲೆ ಏರಿಕೆ ಮಾಡುತ್ತಿದೆ ಎಂದು ಆರೋಪಿಸಿ ಬಿಜೆಪಿ, ಜೆಡಿಎಸ್ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.
ಕನ್ನಡಪ್ರಭ ವಾರ್ತೆ ಕೊರಟಗೆರೆ
ರಾಜ್ಯ ಸರ್ಕಾರ ಕಳೆದ 20 ತಿಂಗಳಿಂದ ಯಾವುದೇ ಕ್ಷೇತ್ರದಲ್ಲೂ ಅಭಿವೃದ್ದಿ ಕೆಲಸಗಳಿಗೆ ಶಂಕುಸ್ಥಾಪನೆ ಮಾಡಿಲ್ಲ. ಗ್ಯಾರಂಟಿ ಯೋಜನೆಗಾಗಿ ಸರ್ಕಾರ ಪೆಟ್ರೋಲ್. ಡೀಸೆಲ್ ಬೆಲೆ ಏರಿಕೆ ಮಾಡುತ್ತಿದೆ ಎಂದು ಆರೋಪಿಸಿ ಬಿಜೆಪಿ, ಜೆಡಿಎಸ್ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.ಪಟ್ಟಣದ ಎನ್‌ಡಿಎ ಕಚೇರಿಯಿಂದ ಪಪಂ ಮುಖ್ಯರಸ್ತೆಯ ಮೂಲಕ ಸರ್ಕಾರಿ ಬಸ್ ನಿಲ್ದಾಣದವರೆಗೆ ಎತ್ತಿನ ಗಾಡಿ, ಸೈಕಲ್‌ಗಳಲ್ಲಿ ನೂರಾರು ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ವಿರುದ್ಧ ಘೋಷಣೆ ಕೂಗಿದರು.ಬಿಜೆಪಿ ಜಿಲ್ಲಾಧ್ಯಕ್ಷ ಹನುಮಂತೇಗೌಡ ಮಾತನಾಡಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ರೈತರ ವಿರುದ್ಧ ಕೆಲಸ ಮಾಡುತ್ತಿದ್ದಾರೆ. ಗ್ಯಾರಂಟಿ ಯೋಜನೆಯ ಹೆಸರಿನಲ್ಲಿ ಗ್ರಾಹಕರಿಂದ ಲೂಟಿ ಮಾಡಲಾಗುತ್ತಿದೆ. ಎಡಗೈಯಿಂದ ಕೊಟ್ಟು ಬಲಗೈಯಿಂದ ದುಪ್ಪಟ್ಟು ಹಣ ಕಿತ್ತುಕೊಳ್ಳುತ್ತಿದ್ದಾರೆ ಎಂದರು.ಮುಖಂಡ ಬಿ.ಎಚ್.ಅನಿಲ್‌ಕುಮಾರ್ ಮಾತನಾಡಿ, ಲೋಕಸಭಾ ಚುನಾವಣೆ ಮುಕ್ತಾಯದ ಮರುಕ್ಷಣವೇ ಮದ್ಯದ ಬೆಲೆ, ಸ್ಟಾಂಪ್ ಮತ್ತು ರಿಜಿಸ್ಟರ್ ಪೇಪರ್ ಬೆಲೆ ಹೆಚ್ಚಳವಾಗಿದೆ. ಪ್ರಸ್ತುತ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳದಿಂದ ಗ್ರಾಹಕರ ಜೀವನವೇ ಸಂಕಷ್ಟಕ್ಕೆ ತಲುಪಿದೆ ಎಂದು ಹೇಳಿದರು.ಮೂಲ ಬಿಜೆಪಿ ಮುಖಂಡರ ಬೇಸರ: ಬಿಜೆಪಿ ಕಾರ್ಯಕ್ರಮ ಮತ್ತು ಸಭೆಗಳಲ್ಲಿ ಕೊರಟಗೆರೆಯ ಮೂಲ ಕಾರ್ಯಕರ್ತರನ್ನು ಕಡೆಗಣನೆ ಮಾಡಲಾಗುತ್ತಿದೆ. ಹತ್ತಾರು ವರ್ಷಗಳಿಂದ ಬಿಜೆಪಿ ಬಾವುಟ ಕಟ್ಟಿ ಬೆಳೆಸಿದ ಕಾರ್ಯಕರ್ತರ ಮೂಲೆಗುಂಪು ಮಾಡಲಾಗಿದೆ ಎಂದು ಬಿಜೆಪಿ ಕಾರ್ಯಕರ್ತರು ಬೇಸರ ವ್ಯಕ್ತಪಡಿಸಿದರು.ಜೆಡಿಎಸ್ ಗೌರವಾಧ್ಯಕ್ಷ ನರಸಿಂಹರಾಜು, ಮಧುಗಿರಿ ಯುವ ಮೋರ್ಚಾ ಅಧ್ಯಕ್ಷ ಶಿವಕುಮಾರ ಸ್ವಾಮಿ, ಮುಖಂಡರಾದ ದಾಸಾಲುಕುಂಟೆರಘು, ದಾಡಿವೆಂಕಟೇಶ್, ರಂಗರಾಜು, ಅರುಣಕುಮಾರ್, ಗೋವಿಂದರೆಡ್ಡಿ, ಚೇತನ್, ಮಂಜುನಾಥ, ಸುರೇಶ್, ಆನಂದ್, ವಕೀಲ ಸಂತೋಷ, ವಿಶ್ವನಾಥ ಅಪ್ಪಾಜಪ್ಪಇದ್ದರು.