ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್. ಹಾದಿಮನಿ ಅವರ ಉಪಸ್ಥಿತಿಯಲ್ಲಿ ಗುರುವಾರ ‘ಭಯೋತ್ಪಾದನಾ ವಿರೋಧಿ’ ದಿನಾಚರಣೆ ಪ್ರಯುಕ್ತ ‘ಪ್ರತಿಜ್ಞಾ ವಿಧಿ’ ಸ್ವೀಕರಿಸುವ ಕಾರ್ಯಕ್ರಮ ನಡೆಯಿತು. ಪ್ರತಿಜ್ಞಾ ವಿಧಿಯನ್ನು ಜಿಲ್ಲಾಧಿಕಾರಿ ಅವರ ಆಪ್ತ ಸಹಾಯಕರಾದ ಜಿ.ಷಣ್ಮುಖ ಬೋಧಿಸಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಎಸ್. ಹಾದಿಮನಿ ಅವರ ಉಪಸ್ಥಿತಿಯಲ್ಲಿ ಗುರುವಾರ ‘ಭಯೋತ್ಪಾದನಾ ವಿರೋಧಿ’ ದಿನಾಚರಣೆ ಪ್ರಯುಕ್ತ ‘ಪ್ರತಿಜ್ಞಾ ವಿಧಿ’ ಸ್ವೀಕರಿಸುವ ಕಾರ್ಯಕ್ರಮ ನಡೆಯಿತು. ಪ್ರತಿಜ್ಞಾ ವಿಧಿಯನ್ನು ಜಿಲ್ಲಾಧಿಕಾರಿ ಅವರ ಆಪ್ತ ಸಹಾಯಕರಾದ ಜಿ.ಷಣ್ಮುಖ ಬೋಧಿಸಿದರು. ಅಹಿಂಸೆ ಹಾಗೂ ಸಹನೆಗೆ ಹೆಸರಾದ ಭಾರತ ರಾಷ್ಟ್ರದ ಭವ್ಯ ಪರಂಪರೆಯಲ್ಲಿ ದೃಢ ವಿಶ್ವಾಸದಿಂದ ಎಲ್ಲಾ ಬಗೆಯ ಭಯೋತ್ಪಾದನೆ ಮತ್ತು ಹಿಂಸೆಯನ್ನು ನಮ್ಮೆಲ್ಲ ಶಕ್ತಿ ಸಾಮರ್ಥ್ಯದಿಂದ ಎದುರಿಸುತ್ತೇವೆ ಎಂದು ಈ ಮೂಲಕ ಪ್ರತಿಜ್ಞಾ ವಿಧಿ ಬೋಧಿಸಿದರು. ಶಾಂತಿ, ಸಾಮಾಜಿಕ ಸೌಹಾರ್ದತೆ ಮತ್ತು ಪರಸ್ಪರ ಅರಿವು ಸಾಧಿಸಲು ಹಾಗೂ ಉತ್ತೇಜಿಸಲು ಮತ್ತು ಮಾನವ ಜೀವಕ್ಕೆ ಹಾಗೂ ಮೌಲ್ಯಗಳಿಗೆ ಬೆದರಿಕೆಯೊಡ್ಡುತ್ತಿರುವ ವಿಚ್ಛಿದ್ರಕಾರಿ ಶಕ್ತಿಗಳ ವಿರುದ್ಧ ಹೋರಾಡಲು ಎಲ್ಲರೂ ಪಣತೊಡಬೇಕು ಎಂದು ಷಣ್ಮುಖ ಅವರು ಪ್ರಮಾಣ ವಚನ ಬೋಧಿಸಿದರು. ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಚಂದ್ರಶೇಖರ್, ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಬಿ.ಆರ್.ಶೆಟ್ಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಸತೀಶ್, ಐಟಿಡಿಪಿ ಇಲಾಖಾ ಅಧಿಕಾರಿ ಎಸ್.ಹೊನ್ನೇಗೌಡ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್, ಪಶುಪಾಲನಾ ಇಲಾಖೆ ಉಪ ನಿರ್ದೇಶಕರಾದ ಲಿಂಗರಾಜು ದೊಡ್ಡಮನಿ, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಶಶಿಧರ, ಲೋಕೋಪಯೋಗಿ ಇಲಾಖೆ ಇಇ ಪ್ರಭು, ಜಿ.ಪಂ.ಇಇ ಭಾಸ್ಕರ, ಆಹಾರ ಇಲಾಖೆಯ ಉಪ ನಿರ್ದೇಶಕರಾದ ಭೀಮರಾಯ, ಕೈಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ರಘು, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಬಸವರಾಜು, ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಮಂಜುನಾಥ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಪ್ರಸನ್ನ ಕುಮಾರ್, ಕಾರ್ಮಿಕ ಅಧಿಕಾರಿ ಎಂ.ಎಂ.ಯತ್ನಟ್ಟಿ, ಕೆಎಸ್‌ಆರ್‌ಟಿಸಿ ಮಡಿಕೇರಿ ಘಟಕ ವ್ಯವಸ್ಥಾಪಕರಾದ ಈರಸಪ್ಪ, ವಿಕಲಚೇತನರ ಅಧಿಕಾರಿ ವಿಮಲ, ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ಸ್ನೇಹಾ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ದಿವಾಕರ, ತಹಸೀಲ್ದಾರರಾದ ಪ್ರವೀಣ್ ಕುಮಾರ್, ಶ್ರೀಧರ, ಸಂಜನಾ, ಪೌರಾಯುಕ್ತರಾದ ಎಚ್.ಆರ್.ರಮೇಶ್, ವಿರಾಜಪೇಟೆ ಪುರಸಭೆ ಮುಖ್ಯಾಧಿಕಾರಿ ನಾಚಪ್ಪ, ಒಳಚರಂಡಿ ಮಂಡಳಿ ಎಂಜಿನಿಯರ್ ಪ್ರಸನ್ನ, ಕೌಶಲ್ಯ ಅಭಿವೃದ್ಧಿ ಅಧಿಕಾರಿ ರೇಖಾ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾದ ಸಚಿನ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲೂಕು ಅಧಿಕಾರಿ ಶ್ರೀಕಾಂತ್, ಶಿವಶಂಕರ, ವಿವಿಧ ನಿಗಮಗಳ ವ್ಯವಸ್ಥಾಪಕರು ಮತ್ತು ಸಿಬ್ಬಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರತಿಜ್ಞಾ ವಿಧಿ ಸ್ವೀಕರಿಸಿದರು.