ಭಯೋತ್ಪಾದನಾ ವಿರೋಧಿ ದಿನದ ಪ್ರಮಾಣ ವಚನ

| Published : May 24 2025, 12:44 AM IST

ಭಯೋತ್ಪಾದನಾ ವಿರೋಧಿ ದಿನದ ಪ್ರಮಾಣ ವಚನ
Share this Article
  • FB
  • TW
  • Linkdin
  • Email

ಸಾರಾಂಶ

ಹಂಪಿ ಕನ್ನಡ ವಿಶ್ವವಿದ್ಯಾಲಯದ ಕ್ರಿಯಾಶಕ್ತಿ ಮುಂಭಾಗದಲ್ಲಿ ಸರ್ಕಾರದ ಆದೇಶದಂತೆ ಕುಲಪತಿ ಡಾ. ಡಿ.ವಿ. ಪರಮಶಿವಮೂರ್ತಿ ಅವರ ನೇತೃತ್ವದಲ್ಲಿ ಕುಲಸಚಿವರು ಹಾಗೂ ಸಿಬ್ಬಂದಿ ಸೇರಿ ಭಯೋತ್ಪಾದನಾ ವಿರೋಧಿ ದಿನದ ಅಂಗವಾಗಿ ಪ್ರತಿಜ್ಞಾ ವಚನ ಸ್ವೀಕಾರ ಕಾರ್ಯಕ್ರಮ ನಡೆಸಿದರು.

ಹೊಸಪೇಟೆ: ಕನ್ನಡ ವಿಶ್ವವಿದ್ಯಾಲಯದ ಕ್ರಿಯಾಶಕ್ತಿ ಮುಂಭಾಗದಲ್ಲಿ ಸರ್ಕಾರದ ಆದೇಶದಂತೆ ಕುಲಪತಿ ಡಾ. ಡಿ.ವಿ. ಪರಮಶಿವಮೂರ್ತಿ ಅವರ ನೇತೃತ್ವದಲ್ಲಿ ಕುಲಸಚಿವರು ಹಾಗೂ ಸಿಬ್ಬಂದಿ ಸೇರಿ ಭಯೋತ್ಪಾದನಾ ವಿರೋಧಿ ದಿನದ ಅಂಗವಾಗಿ ಪ್ರತಿಜ್ಞಾ ವಚನ ಸ್ವೀಕಾರ ಕಾರ್ಯಕ್ರಮ ನಡೆಸಿದರು.

"ಅಹಿಂಸೆ ಹಾಗೂ ಸಹನೆಗೆ ಹೆಸರಾದ ನಮ್ಮ ರಾಷ್ಟ್ರದ ಭವ್ಯ ಪರಂಪರೆಯಲ್ಲಿ ದೃಢ ವಿಶ್ವಾಸವುಳ್ಳ ಭಾರತದ ಪ್ರಜೆಗಳಾದ ನಾವು ಎಲ್ಲ ಬಗೆಯ ಭಯೋತ್ಪಾದನೆ ಮತ್ತು ಹಿಂಸೆಯನ್ನು ನಮ್ಮೆಲ್ಲ ಶಕ್ತಿ ಸಾಮರ್ಥ್ಯದಿಂದ ಎದುರಿಸುತ್ತೇವೆ ಎಂದು ಈ ಮೂಲಕ ಶ್ರದ್ಧಾಪೂರ್ವಕವಾಗಿ ಪ್ರತಿಜ್ಞೆ ಮಾಡುತ್ತೇವೆ. ನಮ್ಮ ಸಹಬಾಂಧವರಲ್ಲಿ ಶಾಂತಿ, ಸಾಮಾಜಿಕ ಸೌಹಾರ್ದತೆ ಮತ್ತು ಪರಸ್ಪರ ಅರಿವನ್ನು ಸಾಧಿಸಲು ಹಾಗೂ ಉತ್ತೇಜಿಸಲು ಮತ್ತು ಮಾನವ ಜೀವಕ್ಕೆ ಹಾಗೂ ಮೌಲ್ಯಗಳಿಗೆ ಬೆದರಿಕೆ ಒಡ್ಡುತ್ತಿರುವ ವಿಚ್ಛಿದ್ರಕಾರಿ ಶಕ್ತಿಗಳ ವಿರುದ್ಧ ಹೋರಾಡಲು ನಾವು ಪಣ ತೊಡುತ್ತೇವೆ’’ ಎಂದು ಎಲ್ಲರೂ ಪ್ರತಿಜ್ಞಾ ವಚನ ಸ್ವೀಕರಿಸಿದರು.

ವಿಶ್ವವಿದ್ಯಾಲಯದ ಪ್ರತಿಯೊಂದು ವಿಭಾಗಗಳಲ್ಲಿ ಪ್ರತಿಜ್ಞಾ ವಚನ ಸ್ವೀಕಾರ ಕಾರ್ಯಕ್ರಮ ನಡೆಯಿತು.

ಕನ್ನಡ ವಿಶ್ವವಿದ್ಯಾಲಯದ ಕ್ರಿಯಾಶಕ್ತಿ ಮುಂಭಾಗದಲ್ಲಿ ಸರ್ಕಾರದ ಆದೇಶದಂತೆ ಕುಲಪತಿ ಡಾ. ಡಿ.ವಿ. ಪರಮಶಿವಮೂರ್ತಿ ಅವರ ನೇತೃತ್ವದಲ್ಲಿ ಕುಲಸಚಿವರು ಹಾಗೂ ಸಿಬ್ಬಂದಿ ಸೇರಿ ಭಯೋತ್ಪಾದನಾ ವಿರೋಧಿ ದಿನದ ಅಂಗವಾಗಿ ಪ್ರತಿಜ್ಞಾ ವಚನ ಸ್ವೀಕಾರ ಕಾರ್ಯಕ್ರಮ ನಡೆಸಿದರು.

ಕನ್ನಡ ವಿವಿ ಕುಲಸಚಿವ ಡಾ. ವಿಜಯ ಪೂಣಚ್ಚ ತಂಬಂಡ, ಪ್ರಾಧ್ಯಾಪಕ ಡಾ. ಎ.ಎಸ್. ಪ್ರಭಾಕರ, ಉಪಕುಲಸಚಿವ ಡಾ. ಎ. ವೆಂಕಟೇಶ ಮತ್ತಿತರರಿದ್ದರು.