ಸಾರಾಂಶ
ಹಾವೇರಿ: ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ವಿಶ್ವ ತಂಬಾಕು ರಹಿತ ದಿನಾಚರಣೆ ಪ್ರಯುಕ್ತ ಜಾಗೃತಿ ಜಾಥಾಕ್ಕೆ ಪ್ರಧಾನ ವ ಜಿಲ್ಲಾ ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಸಿ. ಸದಾನಂದಸ್ವಾಮಿ ಅವರು ಚಾಲನೆ ನೀಡಿ, ತುಂಬಾಕು ಉತ್ಪನ್ನಗಳ ದುಷ್ಪರಿಣಾಮ ಕುರಿತು ಮಾತನಾಡಿದರು.ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಶುಕ್ರವಾರ ಜಿಲ್ಲಾ ನ್ಯಾಯಾಂಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಜಿಲ್ಲಾ ಆಸ್ಪತ್ರೆ, ಜಿಲ್ಲಾ ನ್ಯಾಯವಾದಿಗಳ ಸಂಘ, ಪೊಲೀಸ್ ಇಲಾಖೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾದ ವಿಶ್ವ ತಂಬಾಕು ರಹಿತ ದಿನಾಚರಣೆ ಪ್ರಯುಕ್ತ ಜಾಥಾಕ್ಕೆ ಚಾಲನೆ ನೀಡಿದರು.ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಸಿಜೆಎಂ ಪ್ರಕಾಶ ವಿ., ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಸ್.ಎಚ್. ಜತ್ತಿ, ಕಾರ್ಯದರ್ಶಿ ಪಿ.ಎಸ್. ಹೆಬ್ಬಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಎಸ್. ರಾಘವೇಂದ್ರಸ್ವಾಮಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಪಿ.ಆರ್. ಹಾವನೂರ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ಹಾಗೂ ತಂಬಾಕು ನಿಯಂತ್ರಣಾಧಿಕಾರಿ ಡಾ. ಜಗದೀಶ ಪಾಟೀಲ, ಜಿಲ್ಲಾ ಎನ್.ಓ.ಎಚ್.ಪಿ. ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ. ಕಲ್ಪನಾ, ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರಭಾಕರ ಕುಂದೂರ ಹಾಗೂ ಜಿಲ್ಲಾ ಶೂಶ್ರುಷಕ ತರಬೇತಿ ಕೇಂದ್ರದ ಪ್ರಾಂಶುಪಾಲರಾದ ಸರಸ್ವತಿ ವೈ.ಎಚ್. ಅವರು ಭಾಗವಹಿಸಿದ್ದರು.