ರಿಕ್ಕಿ ರೈ ಶೂಟೌಟ್‌ 2ನೇ ಆರೋಪಿ ಅನುರಾಧಾ ಅಮೆರಿಕಕ್ಕೆ ಪರಾರಿ!

| N/A | Published : Apr 22 2025, 01:47 AM IST / Updated: Apr 22 2025, 09:03 AM IST

Muttappa Rai 2nd wife Anuradha rai

ಸಾರಾಂಶ

ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ 2ನೇ ಆರೋಪಿ ಮುತ್ತಪ್ಪ ರೈ ಎರಡನೇ ಪತ್ನಿ ಅನುರಾಧಾ ರೈ ವಿದೇಶಕ್ಕೆ ತೆರಳಿರುವುದು ಬೆಳಕಿಗೆ ಬಂದಿದೆ.

  ರಾಮನಗರ : ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ 2ನೇ ಆರೋಪಿ ಮುತ್ತಪ್ಪ ರೈ ಎರಡನೇ ಪತ್ನಿ ಅನುರಾಧಾ ರೈ ವಿದೇಶಕ್ಕೆ ತೆರಳಿರುವುದು ಬೆಳಕಿಗೆ ಬಂದಿದೆ.

ರಿಕ್ಕಿ ರೈ ಮೇಲಿನ ಶೂಟೌಟ್ ಪ್ರಕರಣ ಸಂಬಂಧ ಅವರ ಕಾರು ಚಾಲಕ ಬಸವರಾಜು ನೀಡಿದ ದೂರಿನ ಮೇರೆಗೆ ಬಿಡದಿ ಪೊಲೀಸ್ ಠಾಣೆಯಲ್ಲಿ ಮುತ್ತಪ್ಪ ರೈ ಎರಡನೇ ಪತ್ನಿ ಅನುರಾಧಾ ರೈ ಮೇಲೂ ಪ್ರಕರಣ ದಾಖಲಾಗಿತ್ತು.

ಈ ಹಿನ್ನೆಲೆಯಲ್ಲಿ ಪೊಲೀಸರು ಅನುರಾಧಾ ರೈ ಸಿಮ್ ಕಾರ್ಡ್ ವಿಳಾಸ ಆಧರಿಸಿ ನೋಟಿಸ್ ನೀಡಲು ಬೆಂಗಳೂರಿನ ಕೊಡಿಗೆಹಳ್ಳಿಯಲ್ಲಿರುವ ಅವರ ಮನೆಗೆ ತೆರಳಿದ್ದರು. ಆದರೆ, ಅನುರಾಧಾ ರೈ ಆ ಮನೆಯನ್ನು ಅಮೆರಿಕ ಮೂಲದ ವ್ಯಕ್ತಿಗೆ ಮಾರಾಟ ಮಾಡಿದ್ದಾರೆ. ಅಲ್ಲದೆ, ಏಪ್ರಿಲ್ 14ರಂದೇ ಅಮೆರಿಕಗೆ ತೆರಳಿರುವುದು ಗೊತ್ತಾಗಿದೆ.

ಪೊಲೀಸರು ಅನುರಾಧಾ ರೈ ಅವರ ಮೊಬೈಲ್ ಲೊಕೇಶನ್ ಪರಿಶೀಲಿಸಿದಾಗ ಬೆಂಗಳೂರಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಕೊನೆಯಾಗಿದೆ. ಪ್ರಕರಣದಲ್ಲಿ 2ನೇ ಆರೋಪಿಯಾಗಿರುವ ಅನುರಾಧಾ ರೈ ಅವರ ನಡೆ ಪೊಲೀಸರಲ್ಲಿ ಸಾಕಷ್ಟು ಅನುಮಾನ ಮೂಡಿಸಿದೆ.