ಸಾರಾಂಶ
ಕ್ರೀಡೆಗಳಲ್ಲಿ ಮಕ್ಕಳು ಭಾಗವಹಿಸುವುದರಿಂದ ದೈಹಿಕ ಮತ್ತು ಮಾನಸಿಕ ಸಾಮರ್ಥ್ಯ ಹೆಚ್ಚಳಕ್ಕೆ ಸಹಕಾರಿಯಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಓದಿನ ಜೊತೆಗೆ ಕ್ರೀಡಾ ಚಟುವಟಿಕೆಗಳಲ್ಲೂ ಭಾಗವಹಿಸಿ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಕ್ರೀಡೆಯಿಂದ ಶಿಸ್ತು, ಸಂಯಮ ಮತ್ತು ಆರೋಗ್ಯ ವೃದ್ಧಿಸುತ್ತದೆ.
ಕನ್ನಡಪ್ರಭ ವಾರ್ತೆ ಶಿಡ್ಲಘಟ್ಟ
ಶಿಕ್ಷಣದ ಜೊತೆಗೆ ಕ್ರೀಡೆಯನ್ನು ಸಮತೋಲನವಾಗಿ ನೋಡಬೇಕು. ಕ್ರೀಡೆಯಲ್ಲಿ ಸೋಲು, ಗೆಲುವನ್ನು ಸಮಾನವಾಗಿ ಸ್ವೀಕರಿಸಿದಾಗ ನಾವೆಲ್ಲರೂ ಒಂದೇ ಎಂಬ ಮನೋಭಾವ ಮೂಡುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎ. ನರೇಂದ್ರಕುಮಾರ್ ತಿಳಿಸಿದರು.ನಗರದ ನೆಹರು ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮೇಲಾಟಗಳ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡೆ ಮತ್ತು ಶಿಕ್ಷಣ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ, ಕ್ರೀಡೆ ಎಂಬುದು ದೈಹಿಕ ಮತ್ತು ಮಾನಸಿಕ ಸಾಮರ್ಥ್ಯವನ್ನು ಸದೃಢಗೊಳಿಸುತ್ತದೆ ಎಂದರು. ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿ
ಶಿಕ್ಷಣ ಮತ್ತು ಕ್ರೀಡೆಯಲ್ಲಿ ವಿಶಿಷ್ಟತೆ ಮೆರೆಯಬೇಕು. ಶಿಡ್ಲಘಟ್ಟ ತಾಲ್ಲೂಕು ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಹೋಬಳಿ ಮಟ್ಟದಿಂದ ರಾಷ್ಟ್ರಮಟ್ಟದ ವರೆಗೂ ಹೆಸರು ಪಡೆಯಬೇಕು. ಕ್ರೀಡಾಪಟುಗಳು ಇಲ್ಲಿನ ಮಣ್ಣಿನ ಗುಣವನ್ನು ದೇಶಕ್ಕೆ ಸಾರಬೇಕು ಎಂದು ಸಲಹೆ ನೀಡಿದರು. ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ದೇವೇಂದ್ರಪ್ಪ ಮಾತನಾಡಿ, ಕ್ರೀಡೆಗಳಲ್ಲಿ ಮಕ್ಕಳು ಭಾಗವಹಿಸುವುದರಿಂದ ದೈಹಿಕ ಮತ್ತು ಮಾನಸಿಕ ಸಾಮರ್ಥ್ಯ ಹೆಚ್ಚಳಕ್ಕೆ ಸಹಕಾರಿಯಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಓದಿನ ಜೊತೆಗೆ ಕ್ರೀಡಾ ಚಟುವಟಿಕೆಗಳಲ್ಲೂ ಭಾಗವಹಿಸಿ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಕ್ರೀಡೆಯಿಂದ ಶಿಸ್ತು, ಸಂಯಮ ಮತ್ತು ಆರೋಗ್ಯ ವೃದ್ಧಿಸುತ್ತದೆ. ಕ್ರೀಡೆಯಲ್ಲಿ ಉತ್ತಮ ತರಬೇತಿ ಪರಿಣತಿಯನ್ನು ಹೊಂದಿದವರು ಮಾತ್ರ ಗೆಲುವು ಸಾಧಿಸುತ್ತಾರೆ. ಸೋಲು ಕೊನೆಯಲ್ಲ, ಗೆಲುವು ಶಾಶ್ವತವಲ್ಲ ಎಂದರು. ತಾಲ್ಲೂಕು ದೈಹಿಕ ಶಿಕ್ಷಣ ಅಧ್ಯಕ್ಷ ಪ್ರಕಾಶ್ ಬಾಬು ಕೆವಿ,ಕಾರ್ಯದರ್ಶಿ ಕೃಷ್ಣಪ್ಪ ಬಿ.ಕೆ, ಖಜಾಂಚಿ ಸಿ.ಕೆ ರವಿ, ಗೌರವಾಧ್ಯಕ್ಷ ಮಂಜುನಾಥ್, ದೈಹಿಕ ಶಿಕ್ಷಕರು ಹಾಗೂ ಕ್ರೀಡಾಪಟುಗಳು ಭಾಗವಹಿಸಿದ್ದರು.;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))