ಸಾರಾಂಶ
ಕನ್ನಡಪ್ರಭ ವಾರ್ತೆ ಇಂಡಿ
ಶರಣ ಹಡಪದ ಅಪ್ಪಣ್ಣನವರು ಜಾತಿ, ಧರ್ಮ, ವರ್ಣ ಹಾಗೂ ವರ್ಗರಹಿತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ್ದಾರೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.ಶರಣ ಹಡಪದ ಅಪ್ಪಣ್ಣನವರ ಜಯಂತಿ ನಿಮಿತ್ತ ಅಪ್ಪಣ್ಣನವರ ಪತ್ಥಳಿಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು. ಅಪ್ಪಣ್ಣನವರು 12ನೇ ಶತಮಾನದ ವಚನ ಚಳವಳಿ ಮತ್ತು ಸಾಮಾಜಿಕ ಕ್ರಾಂತಿ ಹರಿಕಾರರಲ್ಲಿ ಒಬ್ಬರಾಗಿದ್ದಾರೆ. ಹಡಪದ ಅಪ್ಪಣ್ಣ ಅವರು ಸಾಮಾಜಿಕ ಅಸಮಾನತೆ, ಅಸ್ಪೃಶ್ಯತೆ, ಜಾತಿ ವ್ಯವಸ್ಥೆ, ಕಂದಾಚಾರ, ಮೂಢನಂಬಿಕೆ ವಿರುದ್ಧ ಹೋರಾಡಿ ಸಮಾಜದಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ತರಲು ತಮ್ಮ ವಚನಗಳ ಮೂಲಕ ಶ್ರಮಿಸಿರುವುದು ಅವಿಸ್ಮರಣೀಯ ಎಂದು ಹೇಳಿದರು.
ಸಮಸಮಾಜ ನಿರ್ಮಾಣಕ್ಕಾಗಿ ಶ್ರಮಿಸಿದ ಶರಣರು, ಸಂತರು, ದಾರ್ಶನಿಕರು ಯಾವುದೇ ಒಂದು ಜಾತಿಗೆ ಸೀಮಿತವಲ್ಲ. ಅನುಭವ ಮಂಟಪದಲ್ಲಿ ಬಸವಣ್ಣನವರಿಗೆ ಹಡಪದ ಅಪ್ಪಣ್ಣನವರು ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದರು. ಕಾಯಕ ತತ್ವದಡಿ ಬದುಕು ರೂಪಿಸಿಕೊಳ್ಳುವುದೇ ಶರಣ ಆಶಯವಾಗಿತ್ತು. ಜಗಜ್ಯೋತಿ ಬಸವಣ್ಣನವರ ಸಮಕಾಲೀನವರಾದ ಅಪ್ಪಣ್ಣನವರ ತತ್ವಾದರ್ಶ ಇಂದಿಗೂ ಅನನ್ಯವಾಗಿವೆ. ಅವುಗಳನ್ನು ಪ್ರತಿಯೊಬ್ಬರೂ ನಿತ್ಯ ಜೀವನದಲ್ಲಿ ಅಳವಡಿಸಿಕೊಂಡಾಗ ಬದುಕು ಹಸನಾಗುತ್ತದೆ ಎಂದು ಹೇಳಿದರು.ಹಡಪದ ಅಪ್ಪಣ್ಣ ಸಮಾಜ ಸಂಘದ ಅಧ್ಯಕ್ಷ ಸಂತೋಷ ಗವಳಿ, ಉಪಾಧ್ಯಕ್ಷ ಶಿವಾನಂದ ನಾವಿ,ಸಿದ್ದು ನಾವಿ,ಅಶೋಕ ಹಡಪದ,ದೂಳಪ್ಪ ನಾವಿ, ನಟರಾಜ ಗವಳಿ, ಬಸವರಾಜ ನಾವಿ, ನಾನು ರಾಠೋಡ,ಶಕುಂತಲಾ ನಾವಿ, ಕಾರ್ಯದರ್ಶಿ ಸಿದರಾಯ ಅಪ್ತಾಗಿರಿ, ಅಶೋಕ ನಾವಿ, ತುಕಾರಾಮ ನಾವಿ, ಶಕುಂತಲಾ ಕಟ್ಟಿ, ವಸಂತ ಬಡಿಗೇರ, ಸಚೀನ ನಾವಿ ,ಮಹೇಶ ನಾವಿ, ಮಂಜುನಾಥ ಹಡಪದ, ಮಲ್ಲು ಕೊರೆನವರ, ಗಡ್ಡೆಪ್ಪ ನಾವಿ, ಬಾಳು ಗವಳಿ, ರಮೇಶ ನಾವಿ, ಪಂಡಿತ ಬಿರಾದಾರ,ಭೀಮಾಶಂಕರ ನಾವಿ, ಮಲ್ಲು ಬಾವಿಕಟ್ಟಿ, ಅರವಿಂದ ಗವಳಿ,ಮುತ್ತು ಆಲಮೇಲ ಮೊದಲಾದವರು ಉಪಸ್ಥಿತರಿದ್ದರು. ಇದಕ್ಕೂ ಮುಂಚೆ ಶರಣ ಹಡಪದ ಅಪ್ಪಣ್ಣನವರ ಭಾವಚಿತ್ರ ಅದ್ದೂರಿ ಮೆರವಣಿಗೆ ಮಾಡಲಾಯಿತು.