ನಾರಾಯಣಗೌಡ ಬಂಧನ ಖಂಡಿಸಿ ಕರವೇ ಮನವಿ

| Published : Dec 30 2023, 01:30 AM IST

ಸಾರಾಂಶ

ಗುಳೇದಗುಡ್ಡ: ಕನ್ನಡ ಭಾಷೆಗಾಗಿ ಹೋರಾಟ ಮಾಡುತ್ತಿರುವ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಾಕ್ಷ ಟಿ.ಎನ್. ನಾರಾಯಣಗೌಡರ ಬಂಧನ ಖಂಡಿಸಿ ಗುಳೇದಗುಡ್ಡ ತಾಲೂಕು ಕರವೇ ಘಟಕದಿಂದ ಶುಕ್ರವಾರ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಕನ್ನಡಪ್ರಭವಾರ್ತೆ ಗುಳೇದಗುಡ್ಡ

ಕನ್ನಡ ಭಾಷೆಗಾಗಿ ಹೋರಾಟ ಮಾಡುತ್ತಿರುವ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಾಕ್ಷ ಟಿ.ಎನ್. ನಾರಾಯಣಗೌಡರ ಬಂಧನ ಖಂಡಿಸಿ ಗುಳೇದಗುಡ್ಡ ತಾಲೂಕು ಕರವೇ ಘಟಕದಿಂದ ಶುಕ್ರವಾರ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ತಾಲೂಕು ಘಟಕದ ಅಧ್ಯಕ್ಷ ರವಿ ಅಂಗಡಿ ಮಾತನಾಡಿ, ರಾಜ್ಯಾಧ್ಯಕ್ಷ ನಾರಾಯಣಗೌಡ ಅವರನ್ನು ಸರ್ಕಾರ ಬಂಧಿಸಿ 14 ದಿನಗಳವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿದ್ದು ಖಂಡನೀಯ. ಕೂಡಲೇ ರಾಜ್ಯಪಾಲರು ಮಧ್ಯ ಪ್ರವೇಶಿಸಿ ನಾರಾಯಣಗೌಡರನ್ನು ಬಿಡುಗಡೆ ಮಾಡಬೇಕು. ಬಿಡುಗಡೆ ಮಾಡುವವರೆಗೆ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು. ಉಪತಹಸೀಲ್ದಾರ್‌ ವಿರೇಶ ಬಡಿಗೇರ ಮನವಿಯನ್ನು ಸ್ವೀಕರಿಸಿದರು. ಕರವೇ ಪದಾಧಿಕಾರಿಗಳು ಹಾಜರಿದ್ದರು.