ಸಾರಾಂಶ
ರಾಜ್ಯದಲ್ಲಿನ ಭೀಕರ ಬರಗಾಲದಿಂದ ನೊಂದಿರುವ ರೈತರ ಬ್ಯಾಂಕ್ ಖಾತೆಗೆ ಜಮೆಯಾಗಿರುವ ವಿವಿಧ ಯೋಜನೆಯ ಹಣವನ್ನು ಬ್ಯಾಂಕಿನ ಅಧಿಕಾರಿಗಳು ಸಾಲದ ಖಾತೆಗೆ ಜಮಾ ಮಾಡುತ್ತಿದ್ದು, ಈ ಹಣವನ್ನು ರೈತರಿಗೆ ನೀಡುವಂತೆ ಒತ್ತಾಯಿಸಿ ನ್ಯಾಷನಲ್ ಹ್ಯೂಮನ್ ರೈಟ್ಸ್ ಸಂಸ್ಥೆಯ ತಾಲೂಕು ಘಟಕದ ಪದಾಧಿಕಾರಿಗಳು ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಕನ್ನಡಪ್ರಭ ವಾರ್ತೆ ರಾಮದುರ್ಗ
ರಾಜ್ಯದಲ್ಲಿನ ಭೀಕರ ಬರಗಾಲದಿಂದ ನೊಂದಿರುವ ರೈತರ ಬ್ಯಾಂಕ್ ಖಾತೆಗೆ ಜಮೆಯಾಗಿರುವ ವಿವಿಧ ಯೋಜನೆಯ ಹಣವನ್ನು ಬ್ಯಾಂಕಿನ ಅಧಿಕಾರಿಗಳು ಸಾಲದ ಖಾತೆಗೆ ಜಮಾ ಮಾಡುತ್ತಿದ್ದು, ಈ ಹಣವನ್ನು ರೈತರಿಗೆ ನೀಡುವಂತೆ ಒತ್ತಾಯಿಸಿ ನ್ಯಾಷನಲ್ ಹ್ಯೂಮನ್ ರೈಟ್ಸ್ ಸಂಸ್ಥೆಯ ತಾಲೂಕು ಘಟಕದ ಪದಾಧಿಕಾರಿಗಳು ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.ಭೀಕರ ಬರಗಾಲದಿಂದ ಸಂಕಷ್ಟದಲ್ಲಿದ್ದು ರೈತರ ಬ್ಯಾಂಕ್ ಖಾತೆಗೆ ಬೆಳೆಹಾನಿ, ಬೆಳೆವಿಮೆ, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ ಯೋಜನೆ ಸೇರಿದಂತೆ ವಿವಿಧ ಮೂಲದ ಹಣ ಜಮಾ ಆಗಿದ್ದು ಬ್ಯಾಂಕಿನ ಅಧಿಕಾರಿಗಳು ಸಾಲದ ಖಾತೆಗೆ ಜಮಾ ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ರೈತರಿಗೆ ತೊಂದರೆಯಾಗಿದೆ ಎಂದು ಮನವಿಯಲ್ಲಿ ದೂರಿದರು.ಈ ಬಾರಿ ಮುಂಗಾರು ಮಳೆ ಚೆನ್ನಾಗಿ ಸುರಿದಿದ್ದು ರೈತರಿಗೆ ಬೀಜ, ಗೊಬ್ಬರಕ್ಕಾಗಿ ಹಣದ ಅವಶ್ಯಕತೆ ಹೆಚ್ಚಾಗಿದೆ. ಕಾರಣ ವಿವಿಧ ಮೂಲದಿಂದ ಜಮಾ ಆಗಿರುವ ಹಣವನ್ನು ಬ್ಯಾಂಕ್ ಅಧಿಕಾರಿಗಳು ರೈತರಿಗೆ ಕೊಡುವಂತೆ ಸೂಚಿಸಬೇಕು ಎಂದು ಒತ್ತಾಯಿಸಿದರು.ಈ ಸಂದರ್ಭದಲ್ಲಿ ತಾಲೂಕು ಘಟಕದ ಅಧ್ಯಕ್ಷ ಬಸೀರಅಹ್ಮದ್ ಬೈರೆಕದಾರ, ಸಂಘಟನಾ ಕಾರ್ಯದರ್ಶಿ ಹನಮಂತ ತಿಪರಡ್ಡಿ, ಈರಣ್ಣ ಕಲ್ಯಾಣಿ, ಬಿ.ಜಿ.ಖಾನೋಜಿ, ಯಂಕಪ್ಪ ಮುದಕಣ್ಣವರ, ಪಿ.ಕೆ.ಪಾಟೀಲ, ಎಫ್.ಎಂ.ದಾನಕಟಗಿ, ಕೆ.ಬಿ.ಹನಮಸಾಗರ ಸೇರಿದಂತೆ ಹಲವರಿದ್ದರು.