ಅಂತರ್ ಜಾತಿ ವಿವಾಹವಾದ ಮಕ್ಕಳನ್ನು ತಮ್ಮ ಪೋಷಕರೇ ಕಾನೂನಿನ ಭಯವಿಲ್ಲದೆ ಮರ್ಯಾದೆಯ ಹೆಸರಲ್ಲಿ ನಿರ್ದಯವಾಗಿ ಹತ್ಯೆ ಮಾಡುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ.

ಕನಕಗಿರಿ: ಧಾರವಾಡ ಜಿಲ್ಲೆಯ ಇನಾಂವೀರಾಪುರ ಗ್ರಾಮದಲ್ಲಿ ಮರ್ಯಾದಾ ಹತ್ಯೆ ನಡೆಸಿದ ಮತ್ತು ಈ ಕೊಲೆಗೆ ಪ್ರಚೋದನೆ ನೀಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಈಚೆಗೆ ಮನವಿ ಸಲ್ಲಿಸಲಾಯಿತು.

ಒಕ್ಕೂಟದ ತಾಲೂಕು ಸಂಚಾಲಕ ಪಾಮಣ್ಣ ಅರಳಿಗನೂರು ಮಾತನಾಡಿ, ರಾಜ್ಯದಲ್ಲಿ ದಿನದಿಂದ ದಿನಕ್ಕೆ ಜಾತಿ ವೈಷಮ್ಯ ಹೆಚ್ಚಾಗುತ್ತಿದೆ. ಇದೊಂದು ಆತಂಕಕಾರಿ ಬೆಳವಣಿಗೆ ಧಾರವಾಡ ಜಿಲ್ಲೆಯಲ್ಲಿ ಈಚೆಗೆ ನಡೆದಿದೆ. ಅಂತರ್ ಜಾತಿ ವಿವಾಹವಾದ ಮಕ್ಕಳನ್ನು ತಮ್ಮ ಪೋಷಕರೇ ಕಾನೂನಿನ ಭಯವಿಲ್ಲದೆ ಮರ್ಯಾದೆಯ ಹೆಸರಲ್ಲಿ ನಿರ್ದಯವಾಗಿ ಹತ್ಯೆ ಮಾಡುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಈ ಪಿಡುಗನ್ನು ಬುಡ ಸಮೇತ ಕಿತ್ತು ಹಾಕಲು ಸರ್ಕಾರ ಇಚ್ಛಾಶಕ್ತಿ ತೋರಬೇಕು. ಜಾತಿ ದ್ವೇಷದಿಂದ ಪ್ರೇಮಿಗಳ ಹಾಗೂ ಅವರ ಕುಟುಂಬಸ್ಥರ ಮೇಲೆ ನಡೆಯುವ ಹಲ್ಲೆ,ಹತ್ಯೆಯಂತಹ ಅಮಾನವೀಯ ಘಟನೆ ಘೋರ ಅಪರಾಧ ಎಂದು ಪರಿಗಣಿಸಬೇಕು. ಇಂತಹ ಕೃತ್ಯವೆಸಗಿದವರನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿದರು.

ಪಪಂ ಸದಸ್ಯ ಶೇಷಪ್ಪ ಪೂಜಾರ್, ಲಿಂಗಪ್ಪ ಪೂಜಾರ, ಹನುಮಂತಪ್ಪ ಬಸರಿಗಿಡದ, ನೀಲಕಂಠ ಬಡಿಗೇರ, ಸಣ್ಣ ಹನುಮಂತ ಹುಲಿಹೈದರ, ಸಣ್ಣ ದುರಗಪ್ಪ ಗೊರಳಕೇರಿ, ದುರುಗಪ್ಪ ದೊಡ್ಮನಿ, ಉಮೇಶ ಮ್ಯಾಗಡೆ, ಸುರೇಶ ಕುರುಗೋಡ, ಹೊನ್ನೂರಸಾಬ ಬೀಡಿ, ಹನುಮಂತರೆಡ್ಡಿ ಮಹಲಿನಮನಿ, ಹನುಮೇಶ ಡಿಶ್ ವೆಂಕಟೇಶ್ ಪೂಜಾರ್ ಇತರರಿದ್ದರು.