ನಕಲಿ ಪತ್ರಕರ್ತರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಮನವಿ

| Published : Mar 06 2025, 12:32 AM IST

ನಕಲಿ ಪತ್ರಕರ್ತರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಮನವಿ
Share this Article
  • FB
  • TW
  • Linkdin
  • Email

ಸಾರಾಂಶ

ನಕಲಿ ಪತ್ರಕರ್ತರಿಂದ ಆಗುತ್ತಿರುವ ತೊಂದರೆಗಳನ್ನು ನಿವಾರಿಸುವಂತೆ ನಕಲಿ ಪತ್ರಕರ್ತರ ಮೇಲೆ ಸೂಕ್ತ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ಹಿರಿಯ ಹಾಗೂ ಪದವಿಧರೇತರ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಯರ ಸಂಘ ಜಿಲ್ಲಾ ಘಟಕ, ತಾಲೂಕು ಘಟಕದಿಂದ ಉಪವಿಭಾಗಾಧಿಕಾರಿಗೆ, ಡಿವೈಎಸ್ಪಿ, ತಹಸೀಲ್ದಾರ್‌, ತಾಪಂ ಇಒ, ಬಿಇಒ ಅವರಿಗೆ ಮನವಿ ಸಲ್ಲಿಸಲಾಯಿತು.

ಕನ್ನಡಪ್ರಭ ವಾರ್ತೆ ಬೈಲಹೊಂಗಲ

ನಕಲಿ ಪತ್ರಕರ್ತರಿಂದ ಆಗುತ್ತಿರುವ ತೊಂದರೆಗಳನ್ನು ನಿವಾರಿಸುವಂತೆ ನಕಲಿ ಪತ್ರಕರ್ತರ ಮೇಲೆ ಸೂಕ್ತ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ಹಿರಿಯ ಹಾಗೂ ಪದವಿಧರೇತರ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಯರ ಸಂಘ ಜಿಲ್ಲಾ ಘಟಕ, ತಾಲೂಕು ಘಟಕದಿಂದ ಉಪವಿಭಾಗಾಧಿಕಾರಿಗೆ, ಡಿವೈಎಸ್ಪಿ, ತಹಸೀಲ್ದಾರ್‌, ತಾಪಂ ಇಒ, ಬಿಇಒ ಅವರಿಗೆ ಮನವಿ ಸಲ್ಲಿಸಲಾಯಿತು.

ತಾಲೂಕಿನ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ 2003 ರಿಂದ ಅಕ್ಷರ ದಾಸೋಹ ಯೋಜನೆಯನ್ನು ಅತ್ಯಂತ ಪ್ರಾಮಾಣಿಕವಾಗಿ, ಅಚ್ಚುಕಟ್ಟಾಗಿ ನಿರ್ವಹಿಸುತ್ತ ಸರ್ಕಾರದ ಯೋಜನೆಯನ್ನು ಅನುಷ್ಠಾನಗೊಳಿಸುವಲ್ಲಿ ಎಲ್ಲ ಶಿಕ್ಷಕರು ಕರ್ತವ್ಯ ನಿರ್ವಹಿಸುತ್ತ ಬಂದಿರುತ್ತೇವೆ. ಈ ಕಾರ್ಯವನ್ನು ಯಶಸ್ವಿಗೊಳಿಸಲು ನಮ್ಮ ತಾಲೂಕಿನ ಸಹಾಯಕ ನಿರ್ದೇಶಕರು ಮತ್ತು ಶಿಕ್ಷಣ ಇಲಾಖೆಯ ಮಾರ್ಗದರ್ಶನದಲ್ಲಿ ನೂರಕ್ಕೆ ನೂರರಷ್ಟು ಯಶಸ್ವಿಯಾಗಿ ಮಾಡಲು ಸಹಕಾರಿಯಾಗಿದೆ. ಹಲವಾರು ಸಣ್ಣ-ಪುಟ್ಟ ತೊಂದರೆಗಳಿದ್ದರೂ ಸಹ ನಮ್ಮ ಶಾಲಾ ಹಂತದಲ್ಲಿ ಅವುಗಳನ್ನು ಸರಿಪಡಿಸಿಕೊಂಡು ಸಾಕಷ್ಟು ಸಲ ಸ್ವಂತ ಹಣ ಹಾಗೂ ಪರಿಶ್ರಮವನ್ನು ವಿನಯೋಗಿಸಿ ಅಕ್ಷರ ದಾಸೋಹ ಯೋಜನೆಯನ್ನು ತಾಲೂಕಿನಾದ್ಯಂತ ಎಲ್ಲ ಶಾಲೆಗಳಲ್ಲಿ ಅನುಷ್ಠಾನಗೊಳಿಸಿದ್ದೇವೆ. ಆದರೆ, ಕೆಲವು ತಿಂಗಳುಗಳಿಂದ ತಾಲೂಕಿನಾದ್ಯಂತ ಕೆಲ ಶಾಲೆಗಳಿಗೆ ಪತ್ರಕರ್ತರೆಂದು ಹೇಳಿಕೊಂಡು ಕೆಲ ನಕಲಿ ಪತ್ರಕರ್ತರು ಶಾಲೆಗಳಿಗೆ ಬಂದು ಮುಖ್ಯೋಪಾಧ್ಯಯರುಗಳು ಹಾಗೂ ಸಹ ಶಿಕ್ಷಕರುಗಳಿಗೆ, ಅಡುಗೆ ಸಿಬ್ಬಂದಿಯವರಿಗೆ ಮಾನಸಿಕ ಹಿಂಸೆ ನೀಡುತ್ತಿದ್ದಾರೆ ಹಾಗೂ ಅನಾವಶ್ಯಕವಾಗಿ ಕರ್ತವ್ಯಕ್ಕೆ ಅಡ್ಡಿ ಪಡಿಸುತ್ತಿದ್ದಾರೆ. ಅಡುಗೆ ಕೇಂದ್ರದ ಒಳಗೆ ಹೋಗಿ ಫೋಟೋ ತೆಗೆಯುವುದು, ವಿಡಿಯೋ ಮಾಡುವುದು ಹಾಗೂ ಮಕ್ಕಳ ಫೋಟೋ, ವಿಡಿಯೋ ಮಾಡುವುದು ಹಾಗೂ ಪ್ರಧಾನ ಗುರುಗಳಿಗೆ ಹಣದ ಬೇಡಿಕೆ ಇಡುತ್ತಿದ್ದಾರೆ. ಇದರಿಂದ ನಿವೃತ್ತ ಅಂಚಿನಲ್ಲಿರುವ ಪ್ರಧಾನ ಗುರುಗಳು ಪ್ರತಿಕೆಗಳಲ್ಲಿ ಏನಾದರೂ ವಿಷಯಗಳು ಪ್ರಕಟವಾಗಬಹುದೆಂದು ಹೆದರುವ ಪ್ರಸಂಗಗಳು ಉದ್ಭವಿಸಿವೆ. ಅನಧಿಕೃತವಾಗಿ ಪತ್ರಕರ್ತರೆಂದು ಹೇಳಿಕೊಂಡು ಸರ್ಕಾರಿ, ಅನದಾನಿತ ಪ್ರಾಥಮಿಕ, ಪ್ರೌಢಶಾಲೆಗಳ ಪ್ರಧಾನ ಗುರುಗಳ ಕರ್ತವ್ಯಕ್ಕೆ ಅಡ್ಡಿಪಡಿಸುತ್ತಿರುವ ಇಂತಹ ವ್ಯಕ್ತಿಗಳ ಮೇಲೆ ಸೂಕ್ತಕ್ರಮ ಜರುಗಿಸಿ ಶಾಲಾ ಆಡಳಿತವು ಸುಗಮವಾಗಿ ನಡೆಯಲು ಅನುಕೂಲ ಮಾಡಿಕೊಡಬೇಕು ಎಂದು ಮನವಿ ಪತ್ರದಲ್ಲಿ ವಿನಂತಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಘಟಕದ ಗೌರವಾಧ್ಯಕ್ಷ ಬಿ.ಎಸ್.ಅಂಕಲಗಿ, ಅಧ್ಯಕ್ಷ ಬಿ.ಎಸ್.ಫಕ್ಕೀರಸ್ವಾಮಿಮಠ, ಪ್ರಧಾನಕಾರ್ಯದರ್ಶಿ, ಎಂ.ಬಿ.ಗಾಣಗಿ, ತಾಲೂಕು ಘಟಕದ ಗೌರವಾಧ್ಯಕ್ಷ ಪ್ರಕಾಶ ದೇಶನೂರ, ತಾಲೂಕಾಧ್ಯಕ್ಷ ಎಂ.ಆರ್.ಭೋವಿ, ಪ್ರಧಾನ ಕಾರ್ಯದರ್ಶಿ ಶಂಕರ ಅರಳಿಕಟ್ಟಿ, ಮುಖ್ಯೋಪಾಧ್ಯಯ ಜಿ.ಎಂ.ಬೋಳನ್ನವರ, ಬಿ.ಎಸ್.ಚಿವಟಗುಂಡಿ, ಕೆ.ಜಿ.ಭಜಂತ್ರಿ, ಜಿ.ಪಿ.ಚನ್ನಣ್ಣವರ ಸೇರಿದಂತೆ ಅನೇಕರು ಇದ್ದರು.