ಅಘೋಷಿತ ಗುಡಿಸಲು ಪ್ರದೇಶಗಳ ಘೋಷಣೆಗೆ ಆಗ್ರಹಿಸಿ ಮನವಿ

| Published : Jul 23 2025, 01:51 AM IST

ಸಾರಾಂಶ

ಗದಗ-ಬೆಟಗೇರಿ ಅವಳಿ ನಗರದಲ್ಲಿಯ ಅಘೋಷಿತ ಗುಡಿಸಲು ಪ್ರದೇಶಗಳನ್ನು ಸ್ಲಂ ಕಾಯ್ದೆ 1973ರ ಪ್ರಕಾರ ಅಧಿಕೃತವಾಗಿ ಸ್ಲಂ ಘೋಷಣೆ ಮಾಡಿ ಸ್ಥಳೀಯವಾಗಿ ನಾಗರಿಕ ಸೌಲಭ್ಯಗಳನ್ನು ಕಲ್ಪಿಸಬೇಕೆಂದು ಆಗ್ರಹಿಸಿ ಸ್ಲಂ ಜನಾಂದೋಲನ ಕರ್ನಾಟಕ ಹಾಗೂ ಜಿಲ್ಲಾ ಸ್ಲಂ ಸಮಿತಿ ವತಿಯಿಂದ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ಮನವಿ ಸಲ್ಲಿಸಲಾಯಿತು.

ಗದಗ: ಗದಗ-ಬೆಟಗೇರಿ ಅವಳಿ ನಗರದಲ್ಲಿಯ ಅಘೋಷಿತ ಗುಡಿಸಲು ಪ್ರದೇಶಗಳನ್ನು ಸ್ಲಂ ಕಾಯ್ದೆ 1973ರ ಪ್ರಕಾರ ಅಧಿಕೃತವಾಗಿ ಸ್ಲಂ ಘೋಷಣೆ ಮಾಡಿ ಸ್ಥಳೀಯವಾಗಿ ನಾಗರಿಕ ಸೌಲಭ್ಯಗಳನ್ನು ಕಲ್ಪಿಸಬೇಕೆಂದು ಆಗ್ರಹಿಸಿ ಸ್ಲಂ ಜನಾಂದೋಲನ ಕರ್ನಾಟಕ ಹಾಗೂ ಜಿಲ್ಲಾ ಸ್ಲಂ ಸಮಿತಿ ವತಿಯಿಂದ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ಮನವಿ ಸಲ್ಲಿಸಲಾಯಿತು.

ಈ ವೇಳೆ ಜಿಲ್ಲಾ ಸ್ಲಂ ಸಮಿತಿ ಅಧ್ಯಕ್ಷ ಇಮ್ತಿಯಾಜ ಆರ್. ಮಾನ್ವಿ ಮಾತನಾಡಿದರು. ಸಮಿತಿ ಕಾರ್ಯದರ್ಶಿ ಅಶೋಕ ಕುಸಬಿ, ಮಹಿಳಾ ಸಮಿತಿ ಸಂಚಾಲಕಿ ಪರವೀನಬಾನು ಹವಾಲ್ದಾರ, ಮೆಹರುನಿಸಾ ಡಂಬಳ, ಇಬ್ರಾಹಿಂ ಮುಲ್ಲಾ, ಮೌಲಾಸಾಬ ಗಚ್ಚಿ, ಶರಣಪ್ಪ ಸೂಡಿ, ಮೆಹಬೂಬಸಾಬ ಬಳ್ಳಾರಿ, ದುರ್ಗಪ್ಪ ಮಣ್ಣವಡ್ಡರ, ಖಾಜಾಸಾಬ ಇಸ್ಮಾಯಿಲನವರ, ಮೈಮುನ ಬೈರಕದಾರ, ಲಕ್ಷ್ಮೀ ಮಣ್ಣವಡ್ಡರ, ಸಲೀಂ ಹರಿಹರ, ಶಿವಪ್ಪ ರೋಣದ, ರವಿ ಗೋಸಾವಿ, ಜಂದಿಸಾಬ ಬಳ್ಳಾರಿ, ಖಾಜಾಸಾಬ ಬಳ್ಳಾರಿ ಹಾಗೂ ಸಮಿತಿ ಪದಾಧಿಕಾರಿಗಳು ಇದ್ದರು.