ಸಾರಾಂಶ
ಕನ್ನಡಪ್ರಭ ವಾರ್ತೆ ಕುಶಾಲನಗರಸಾಮಾಜಿಕ ಹಾಗೂ ಆರ್ಥಿಕ ಜನಗಣತಿ ಕಾರ್ಯದಲ್ಲಿ ಶಿಕ್ಷಕರಿಗೆ ಆಗುತ್ತಿರುವ ಒತ್ತಡವನ್ನು ತಕ್ಷಣ ನಿವಾರಿಸಲು ಅಧಿಕಾರಿಗಳ ಮೂಲಕ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಪದಾಧಿಕಾರಿಗಳು ಶಾಸಕ ಎ.ಎಸ್. ಪೊನ್ನಣ್ಣ ಅವರಿಗೆ ಮನವಿ ಸಲ್ಲಿಸಿದ್ದಾರೆ.ಶಾಸಕ ಪೊನ್ನಣ್ಣ ಅವರು ಕುಶಾಲನಗರದಲ್ಲಿ ನಡೆದ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಸಂದರ್ಭ ಭೇಟಿ ಮಾಡಿದ ಸಂಘ ಜಿಲ್ಲಾಧ್ಯಕ್ಷ ಕೆ.ಎಸ್. ಪ್ರಸನ್ನ ಕುಮಾರ್, ರಾಜ್ಯ ಉಪಾಧ್ಯಕ್ಷ ಎಚ್.ಎನ್. ಮಂಜುನಾಥ್ ಮತ್ತಿತರರು ಮನವಿ ಪತ್ರ ಸಲ್ಲಿಸಿ, ಜಿಲ್ಲೆಯಲ್ಲಿ ಗುಡ್ಡಗಾಡು ಪ್ರದೇಶದಲ್ಲಿ ಹಲವಾರು ಸಮಸ್ಯೆಗಳ ನಡುವೆ ಇಲಾಖೆಯ ಅಂಕಿ ಅಂಶಗಳ ಪ್ರಕಾರ ಶೇ.70ರಷ್ಟು ಗುರಿ ಸಾಧನೆ ಮಾಡಲಾಗಿದೆ. ಆದರೆ ಇಲಾಖೆ ಮೇಲಾಧಿಕಾರಿಗಳು ಶಿಕ್ಷಕರಿಗೆ ನೋಟಿಸ್ ನೀಡುವುದಾಗಿ ಒತ್ತಡ ಹೇರುತ್ತಿದ್ದು, ಶಿಕ್ಷಕರು ಮಾನಸಿಕವಾಗಿ ತೀವ್ರ ಕಿರಿಕಿರಿ ಅನುಭವಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಶಿಕ್ಷಕರು ನಿಗದಿತ ಅವಧಿ ಒಳಗೆ ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗಿದೆ. ತಕ್ಷಣ ಈ ಸಮಸ್ಯೆಗಳನ್ನು ಪರಿಹರಿಸುವಂತೆ ಅವರು ಮನವಿ ಪತ್ರದಲ್ಲಿ ಕೋರಿದ್ದಾರೆ.
ಸಂಘದ ತಾಲೂಕು ಅಧ್ಯಕ್ಷರಾದ ಟಿ ಕೆ ಬಸವರಾಜು ನಿರ್ದೇಶಕರಾದ ಬಿಬಿನ್ ಕುಮಾರ್ ಶಿಕ್ಷಕರಾದ ಜಂಶೀದ್ ಅಹಮದ್ ಮತ್ತಿತರರು ಇದ್ದರು.