ಸಾರಾಂಶ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುವೈದ್ಯಕೀಯ ಕಾಲೇಜು ಮತ್ತು ಹಾಸ್ಟೆಲ್‌ನ ಕುಂದು ಕೊರತೆಗಳನ್ನು ನಿವಾರಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕೆಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದಿಂದ ಸೋಮವಾರ ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ ಮೂಲಕ ವೈದ್ಯಕೀಯ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಲಾಯಿತು.ಈ ವೇಳೆ ಮಾತನಾಡಿದ ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಜಸಂತಾ ಅನಿಲ್‌ಕುಮಾರ್, ಇತ್ತೀಚೆಗೆ ವಿಧಾನ ಪರಿಷತ್ ಸದಸ್ಯರು ವೈದ್ಯಕೀಯ ಕಾಲೇಜು ಹಾಗೂ ಹಾಸ್ಟೆಲ್‌ಗೆ ಭೇಟಿ ನೀಡಿದ್ದಾರೆ.ಅವರೊಂದಿಗೆ ವಿದ್ಯಾರ್ಥಿಗಳು ಮೂಲಭೂತ ಸೌಲಭ್ಯದ ಕೊರತೆಗಳನ್ನು ತೆರೆದಿಟ್ಟಿದ್ದು, ಶೀಘ್ರವೇ ಜಿಲ್ಲಾಡಳಿತ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಅನುಕೂಲ ಮಾಡಿಕೊಡಬೇಕೆಂದರು. ಪ್ರಸ್ತುತ ಕಾಲೇಜು ಹಾಗೂ ವಸತಿ ಗೃಹದಲ್ಲಿ ನೀರಿನ ಸಮಸ್ಯೆ, ಇಂಟರ್‌ನೆಟ್ ಸೌಲಭ್ಯವಿಲ್ಲ. ಹೆಣ್ಣುಮಕ್ಕಳ ವಸತಿಗೃಹಗಳಲ್ಲಿ ಸೂಕ್ತ ಭದ್ರತೆಯಿಲ್ಲ. ಆಹಾರದ ಸ್ವಚ್ಛತೆ, ಗುಣಮಟ್ಟದ ಹಾಗೂ ಸಾಕಷ್ಟು ಆಹಾರವನ್ನು ನೀಡುತ್ತಿಲ್ಲ. ಅಲ್ಲದೇ ಸ್ವಚ್ಚತಾ ಸಿಬ್ಬಂದಿಗಳ ಕೊರತೆಯಿದೆ ಎಂದು ಹೇಳಿದರು.
ಜಿಲ್ಲಾಡಳಿತ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಕಾಲೇಜು ಮತ್ತು ಹಾಸ್ಟೆಲ್‌ಗೆ ಭೇಟಿ ನೀಡಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಒದಗಿಸಿಕೊಡಬೇಕು ಎಂದು ಒತ್ತಾಯಿಸಿದರು.ಈ ಸಂದರ್ಭದಲ್ಲಿ ನಗರಸಭೆ ಉಪಾಧ್ಯಕ್ಷೆ ಲಲಿತಾ ರವಿನಾಯ್ಕ್, ಸದಸ್ಯೆ ಕವಿತಾ ಶೇಖರ್, ಮಹಿಳಾ ಮೋರ್ಚಾ ಜಿಲ್ಲಾ ಉಪಾಧ್ಯಕ್ಷೆ ವೀಣಾ ಶೆಟ್ಟಿ, ಯುವ ಮೋರ್ಚಾ ಅಧ್ಯಕ್ಷೆ ಅಂಕಿತಾ, ಸಾಮಾಜಿಕ ಜಾಲ ತಾಣದ ಚೈತ್ರಗೌಡ, ಖಜಾಂಚಿ ಆಯಿಷಾ, ಸದಸ್ಯರಾದ ಸೌಮ್ಯ, ಇಂದ್ರ ಹಾಜರಿದ್ದರು.
27 ಕೆಸಿಕೆಎಂ 5ವೈದ್ಯಕೀಯ ಕಾಲೇಜು ಮತ್ತು ಹಾಸ್ಟೆಲ್‌ನ ಕುಂದು ಕೊರತೆಗಳನ್ನು ನಿವರಿಸುವಂತೆ ಆಗ್ರಹಿಸಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದಿಂದ ಸೋಮವಾರ ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ ಅವರ ಮೂಲಕ ವೈದ್ಯಕೀಯ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಲಾಯಿತು.--------------------------------
;Resize=(128,128))
;Resize=(128,128))
;Resize=(128,128))