ಚಿಕ್ಕಮಗಳೂರು: ಜಿಲ್ಲೆಯಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳನ್ನು ಗಡಿಪಾರು ಮಾಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಅಪರ ಜಿಲ್ಲಾಧಿಕಾರಿ ನಾರಾಯಣ ಕನಕರಡ್ಡಿಗೆ ಮನವಿ ಸಲ್ಲಿಸಿದ್ದಾರೆ.

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳನ್ನು ಗಡಿಪಾರು ಮಾಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಅಪರ ಜಿಲ್ಲಾಧಿಕಾರಿ ನಾರಾಯಣ ಕನಕರಡ್ಡಿಗೆ ಮನವಿ ಸಲ್ಲಿಸಿದ್ದಾರೆ.

ದೇಶದಲ್ಲಿ ದಿನದಿಂದ ದಿನಕ್ಕೆ ಅಕ್ರಮ ವಿದೇಶಿ ಪ್ರಜೆಗಳ ಹಾವಳಿ ಹೆಚ್ಚಾಗುತ್ತಿದೆ. ಜೊತೆಗೆ ರಾಜ್ಯದಲ್ಲಿ ಅಕ್ರಮ ಪ್ರಜೆಗಳಿಂದ ಕನ್ನಡಿಗರ ಉದ್ಯೋಗವನ್ನು ಕಿತ್ತು ತಿಂದು ಸ್ಥಳಿಯರು ಸಾಯುವಂತ ಪರಿಸ್ಥಿತಿಗೆ ಬಂದಿದ್ದಾರೆ ಎಂದು ಆರೋಪಿಸಿರುವ ವೇದಿಕೆ ಜಿಲ್ಲಾಧ್ಯಕ್ಷ ಎಚ್.ಗುರುಮೂರ್ತಿ ಪರಿಶೀಲನೆ ನಡೆಸಿ ಕಾನೂನು ಕ್ರಮ ಕೈಗೊಂಡು ಗಡಿಪಾರಿಗೆ ಕ್ರಮ ವಹಿಸಲು ಒತ್ತಾಯಿಸಿದ್ದಾರೆ.ಈ ವೇಳೆ ವೇದಿಕೆ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ದರ್ಶನ್, ತಾಲೂಕು ಅಧ್ಯಕ್ಷ ಅನಿಲ್, ಉಪಾಧ್ಯಕ್ಷ ಚಂದ್ರಶೇಖರ್, ನಗರ ಉಪಾಧ್ಯಕ್ಷ ಕಿರಣ್ ಕುಮಾರ್, ಕಾರ್ಮಿಕ ಅಧ್ಯಕ್ಷ ಶ್ರೀಕಾಂತ್, ಮಾದೇಶ್, ಸೌಮ್ಯ ಇದ್ದರು.ಫೋಟೋ

ಜಿಲ್ಲೆಯಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳನ್ನು ಪರಿಶೀಲಿಸಿ ಗಡಿಪಾರಿಗೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದೆ.