ನಗರೋತ್ಥಾನ ಯೋಜನೆಯಡಿ ಅನುದಾನ ಬಿಡುಗಡೆಗೆ ಮನವಿ

| Published : Mar 23 2025, 01:31 AM IST

ಸಾರಾಂಶ

ನರಸಿಂಹರಾಜಪುರ, ನಗರೋತ್ಥಾನ ಹಂತ–04 ರ ಯೋಜನೆಯಡಿ ವೈಯಕ್ತಿಕ ಸೌಲಭ್ಯಗಳನ್ನು ಫಲಾನುಭವಿಗಳಿಗೆ ವಿತರಿಸಲು ಅನುದಾನ ಬಿಡುಗಡೆ ಮಾಡುವಲ್ಲಿ ವಿಳಂಬವಾಗಿದ್ದು ತಕ್ಷಣ ಅನುದಾನ ಬಿಡುಗಡೆ ಮಾಡುವಂತೆ ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತ್ ಶೆಟ್ಟಿ ಬೆಂಗಳೂರಿನಲ್ಲಿ ರಾಜ್ಯ ಪೌರಾಡಳಿತ ಸಚಿವ ರಹೀಂಖಾನ್ ಅವರನ್ನು ಶುಕ್ರವಾರ ಭೇಟಿ ಮಾಡಿ ಮನವಿ ಸಲ್ಲಿಸಿದರು.

ರಾಜ್ಯ ಪೌರಾಡಳಿತ ಸಚಿವ ರಹೀಂಖಾನ್ ಗೆ ಪ್ರಶಾಂತಶೆಟ್ಟಿ ಕೋರಿಕೆ

ಕನ್ನಡಪ್ರಭ ವಾರ್ತೆ, ನರಸಿಂಹರಾಜಪುರ

ನಗರೋತ್ಥಾನ ಹಂತ–04 ರ ಯೋಜನೆಯಡಿ ವೈಯಕ್ತಿಕ ಸೌಲಭ್ಯಗಳನ್ನು ಫಲಾನುಭವಿಗಳಿಗೆ ವಿತರಿಸಲು ಅನುದಾನ ಬಿಡುಗಡೆ ಮಾಡುವಲ್ಲಿ ವಿಳಂಬವಾಗಿದ್ದು ತಕ್ಷಣ ಅನುದಾನ ಬಿಡುಗಡೆ ಮಾಡುವಂತೆ ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಶಾಂತ್ ಶೆಟ್ಟಿ ಬೆಂಗಳೂರಿನಲ್ಲಿ ರಾಜ್ಯ ಪೌರಾಡಳಿತ ಸಚಿವ ರಹೀಂಖಾನ್ ಅವರನ್ನು ಶುಕ್ರವಾರ ಭೇಟಿ ಮಾಡಿ ಮನವಿ ಸಲ್ಲಿಸಿದರು.ಮನವಿಯಲ್ಲಿ, ನರಸಿಂಹರಾಜಪುರ ಪಟ್ಟಣ ಪಂಚಾಯಿತಿಗೆ ನಗರೋತ್ಥಾನ ಹಂತ –04 ರಡಿ 5 ಕೋಟಿ ಅನುದಾನ ಮಂಜೂರಾಗಿದ್ದು ಆ ಅನುದಾನದಡಿ ಎಸ್.ಸಿ.ಪಿ/ ಟಿ.ಎಸ್.ಪಿ (ಶೇಕಡ 24.10), ನಗರ ಇತರೆ ಬಡಜನರ ಕಲ್ಯಾಣ ಕಾರ್ಯಕ್ರಮ (ಶೇಕಡ 7.25) ಹಾಗೂ ಅಂಗವಿಕಲ ಕಲ್ಯಾಣ ಕಾರ್ಯಕ್ರಮ (ಶೇ. 5) ಘಟಕದಡಿ ಮನೆ ನಿರ್ಮಾಣ ಸಹಾಯಧನ, ವೈದ್ಯಕೀಯ ಚಿಕಿತ್ಸೆ, ವಿದ್ಯಾಭ್ಯಾಸಕ್ಕಾಗಿ ಸಹಾಯಧನ, ವೈಯಕ್ತಿಕ ಶೌಚಾಲಯ ನಿರ್ಮಾಣ ಸಹಾಯಧನ ಇತ್ಯಾದಿ ವೈಯಕ್ತಿಕ ಸೌಲಭ್ಯಗಳನ್ನು ಫಲಾನುಭವಿಗಳಿಗೆ ವಿತರಿಸುವ ಸಲುವಾಗಿ 77 ಲಕ್ಷ ಕಾಯ್ದಿರಿಸಿದ್ದು ಅರ್ಹ ಫಲಾನುಭವಿಗಳನ್ನು ಈಗಾಗಲೇ ಆಯ್ಕೆ ಮಾಡಲಾಗಿರುತ್ತದೆ.

ಆದರೆ, ಈ ಕಾರ್ಯಕ್ರಮಗಳಿಗೆ ಕಾಯ್ದಿರಿಸಿದ ಅನುದಾನದ ಮೊತ್ತ ಇದುವರೆಗೂ ಬಿಡುಗಡೆಯಾಗದ ಕಾರಣ ಫಲಾನುಭವಿ ಗಳಿಗೆ ಯಾವುದೇ ಸೌಲಭ್ಯ ಒದಗಿಸಲು ಸಾಧ್ಯವಾಗಿಲ್ಲ. ವಿಧಾನ ಸಭಾ ಚುನಾವಣೆ ಸಮಯದಲ್ಲಿ ವೈಯಕ್ತಿಕ ಸೌಲಭ್ಯ ಗಳನ್ನು ನೀಡುವುದಾಗಿ ಭರವಸೆ ನೀಡಿದ್ದರಿಂದ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಮತ ನೀಡಿ ಗೆಲ್ಲಿಸಿದ್ದಾರೆ. ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷಗಳಾದರೂ ಸಹ ಅನುದಾನ ಬಿಡುಗಡೆಯಲ್ಲಿ ವಿಳಂಬ ವಾಗಿದೆ. ಆದ್ದರಿಂದ ಶೀಘ್ರದಲ್ಲೇ ಅನುದಾನ ಬಿಡುಗಡೆ ಮಾಡಿ ಫಲಾನುಭವಿಗಳಿಗೆ ಸೌಲಭ್ಯ ವಿತರಿಸಲು ಅನುಕೂಲ ಮಾಡಿಕೊಡ ಬೇಕು ಎಂದು ಒತ್ತಾಯಿಸಿದ್ದಾರೆ. ಈ ಸಂದರ್ಭದಲ್ಲಿ ಖಾಂಡ್ಯ ಭಾಗದ ಕಾಂಗ್ರೆಸ್ ಪಕ್ಷದ ಮುಖಂಡ ಕಾಫಿ ಗಿರೀಶ್ ಇದ್ದರು.