ಸಾರಾಂಶ
ದೇವನಹಳ್ಳಿ: ತಾಲೂಕು ಕುರುಬ ಸಮಾಜದ ಪದಾಧಿಕಾರಿಗಳು ತಾಲೂಕು ಅಧ್ಯಕ್ಷ ಎಸ್.ಕೆ.ಕೋದಂಡರಾಮ ನೇತೃತ್ವದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ದೇವನಹಳ್ಳಿ: ತಾಲೂಕು ಕುರುಬ ಸಮಾಜದ ಪದಾಧಿಕಾರಿಗಳು ತಾಲೂಕು ಅಧ್ಯಕ್ಷ ಎಸ್.ಕೆ.ಕೋದಂಡರಾಮ ನೇತೃತ್ವದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಪ್ರವಾಸಿ ಮಂದಿರದಲ್ಲಿ ಮನಸಿ ಸಲ್ಲಿಸಿ ಮಾತನಾಡಿದ ಕೋದಂಡರಾಮ, ದೇವನಹಳ್ಳಿ ನ.೮ಕ್ಕೆ ಕನಕದಾಸ ಜಯಂತಿ ವಿಜೃಂಭಣೆಯಿಂದ ಆಚರಿಸಲು ಅಂಬಾರಿ ಮೇಲೆ ಕನಕದಾಸರ ಭಾವಚಿತ್ರ ಮೆರವಣಿಗೆ ಮಾಡಲು ಅರಣ್ಯ ಇಲಾಖೆ ಮತ್ತು ಡಿಸಿಪಿ ಅಧಿಕಾರಿಗಳಿಂದ ಅನುಮತಿ ಕೊಡಿಸಬೇಕು. ಹಾಗೂ ಜಿಲ್ಲಾಧಿಕಾರಿಗಳ ಭವನದ ಮುಂದೆ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪಿಸಲು ಸ್ಥಳಾವಕಾಶ ಕಲ್ಪಿಸುವಂತೆ ಸಚಿವರಿಗೆ ಮನವಿ ಮಾಡಿದರು. ಮನವಿಗೆ ಸ್ಪಂದಿಸಿದ ಸಚಿವ ಮುನಿಯಪ್ಪ, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ತಮ್ಮ ಬೇಡಿಕೆಗಳ ಈಡೇರಿಕೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಕಾರಾತ್ಮವಾಗಿ ಸ್ಪಂದಿಸಿದರು.ಈ ಸಂದರ್ಭದಲ್ಲಿ ತಾಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಸಿ.ಜಗನ್ನಾಥ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಸಿ. ಮಂಜುನಾಥ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕುರುಬರ ಸಂಘದ ಜಿಲ್ಲಾಧ್ಯಕ್ಷ ಬೆಟ್ಟೇನಹಳ್ಳಿ ಮಹೇಶ್ ಕುಮಾರ್, ಪುರಸಭಾ ಉಪಾಧ್ಯಕ್ಷ ಜಿ.ಎ.ರವೀಂದ್ರ, ಪದಾಧಿಕಾರಿಗಳಾದ ರವಿಕುಮಾರ್, ಮಂಜುನಾಥ್, ಮುನಿರಾಜು, ಶಶಿಕಲಾ, ಮಾಧವಿ, ಕಾಂತರಾಜು, ಮೀನಾಕ್ಷಿ, ಕೃಷ್ಣಮೂರ್ತಿ ಮುಖಂಡರಾದ ರಾಧಾರೆಡ್ಡಿ ಇತರರು ಉಪಸ್ಥಿತರಿದ್ದರು.
(ಫೋಟೊ ಕ್ಯಾಫ್ಷನ್)ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತದ ಭವನದ ಮುಂದೆ ಸಂಗೊಳ್ಳಿ ರಾಯಣ್ಣ ಪ್ರತಿಮೆ ನಿರ್ಮಿಸಲು ಸ್ಥಳಾವಕಾಶ ಕೋರಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಅವರಿಗೆ ತಾಲೂಕು ಕುರುಬ ಸಮಾಜದ ಪದಾಧಿಕಾರಿಗಳು ಮನವಿ ಪತ್ರ ಸಲ್ಲಿಸಿದರು.