ಕನ್ನಡಪ್ರಭ ವಾರ್ತೆ ಉಡುಪಿ
ತೀರಾ ಹದಗೆಟ್ಟು, ವಾಹನ - ಜನ ಸಂಚಾರಕ್ಕೆ ದುಸ್ತರವಾಗಿರುವ ಉಡುಪಿ- ಮಲ್ಪೆ ರಾಷ್ಟ್ರೀಯ ಹೆದ್ದಾರಿಯನ್ನು ದುರಸ್ತಿಗೊಳಿಸಲು ಜಿಲ್ಲಾಧಿಕಾರಿಗೆ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ನೇತೃತ್ವದಲ್ಲಿ ಮನವಿ ಮಾಡಲಾಯಿತು.ಉಡುಪಿ- ಮಲ್ಪೆ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಹದೆಗೆಟ್ಟಿರುವುದರಿಂದ ವಾಹನ ಸಂಚಾರಕ್ಕೆ ಬಹಳಷ್ಟು ತೊಂದರೆಯಾಗುತ್ತಿದ್ದು, ಮಲ್ಪೆ ಮತ್ತು ಮಲ್ಪೆಯ ಆಸುಪಾಸಿನ ಪ್ರದೇಶಗಳಿಂದ ಪ್ರತಿನಿತ್ಯ ಉಡುಪಿಗೆ ಬಂದು ಹೋಗುವ ಸಾವಿರಾರು ಸಾರ್ವಜನಿಕರು ಇಲ್ಲಿನ ರಾಷ್ಟ್ರೀಯ ಹೆದ್ದಾರಿಯ ನಾದುರಸ್ತಿ ಸ್ಥಿತಿಯಿಂದ ತುಂಬಾ ಸಮಸ್ಯೆಯನ್ನು ಅನುಭವಿಸುತ್ತಿದ್ದಾರೆ. ಇಲ್ಲಿನ ರಸ್ತೆಯು ಸಂಪೂರ್ಣ ದೊಡ್ಡ ದೊಡ್ಡ ಹೊಂಡ ಗುಂಡಿಗಳಿಂದ ತುಂಬಿರುವುದರಿಂದ ಹಲವು ಅಪಘಾತಗಳು ಸಂಭವಿಸಿದ್ದು, ರಾಷ್ಟ್ರೀಯ ಹೆದ್ದಾರಿಯನ್ನುಶೀಘ್ರ ದುರಸ್ತಿಗೊಳಿಸಿ ಸಂಚಾರ ಯೋಗ್ಯವನ್ನಾಗಿ ಮಾಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.ಈ ಸಂದರ್ಭ ಕಡೆಕಾರ್ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನವೀನ್ ಶೆಟ್ಟಿ, ಮಾಜಿ ನಗರಸಭಾ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಯುವರಾಜ್ ಪುತ್ತೂರು, ಸಂಧ್ಯಾ ತಿಲಕ್‌ರಾಜ್, ಬ್ಲಾಕ್ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳಾದ ಶರತ್ ಶೆಟ್ಟಿ, ಶಶಿರಾಜ್ ಕುಂದರ್, ಸತೀಶ್ ಕೊಡವೂರು, ನಾರಾಯಣ ಕುಂದರ್, ಸತೀಶ್ ಪುತ್ರನ್, ಭರತ್ ಮಣಿಪಾಲ, ಅರ್ಚನಾ ದೇವಾಡಿಗ, ಸಂಜಯ್ ಆಚಾರ್ಯ, ಬ್ರಹ್ಮಾವರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಅರ್ಜುನ್ ನಾಯರಿ, ಸಾಗರ್ ಸನಿಲ್ ಉಪಸ್ಥಿತರಿದ್ದರು.ಉಡುಪಿ-ಮಲ್ಪೆ ರಾ.ಹೆ. ದುರಸ್ತಿಗೆ ಬ್ಲಾಕ್ ಕಾಂಗ್ರೆಸ್‌ನಿಂದ ಮನವಿ
ತೀರಾ ಹದಗೆಟ್ಟು, ವಾಹನ - ಜನ ಸಂಚಾರಕ್ಕೆ ದುಸ್ತರವಾಗಿರುವ ಉಡುಪಿ- ಮಲ್ಪೆ ರಾಷ್ಟ್ರೀಯ ಹೆದ್ದಾರಿಯನ್ನು ದುರಸ್ತಿಗೊಳಿಸಲು ಜಿಲ್ಲಾಧಿಕಾರಿಗೆ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ನೇತೃತ್ವದಲ್ಲಿ ಮನವಿ ಮಾಡಲಾಯಿತು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.