ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರೈತಪರ ಸಂಘಟನೆಗಳಿಂದ ಮನವಿ

| Published : Oct 22 2024, 12:23 AM IST

ಸಾರಾಂಶ

ಶೃಂಗೇರಿ, ಪಟ್ಟಣದ ತಾಲೂಕು ಕಚೇರಿ ಎದುರು ಸೋಮವಾರ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರೈತಪರ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಸಾಂಕೇತಿಕ ಧರಣಿ ನಡೆಸಿ ತಹಸೀಲ್ದಾರ್ ಕಚೇರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಸಾಂಕೇತಿಕ ಧರಣಿ ನಡೆಸಿ ತಹಸೀಲ್ದಾರ್ ಕಚೇರಿ ಮೂಲಕ ಸರ್ಕಾರಕ್ಕೆ ಮನವಿ

ಕನ್ನಡಪ್ರಭ ವಾರ್ತೆ, ಶೃಂಗೇರಿ

ಪಟ್ಟಣದ ತಾಲೂಕು ಕಚೇರಿ ಎದುರು ಸೋಮವಾರ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರೈತಪರ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಸಾಂಕೇತಿಕ ಧರಣಿ ನಡೆಸಿ ತಹಸೀಲ್ದಾರ್ ಕಚೇರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಅತಿವೃಷ್ಟಿ, ಅನಾವೃಷ್ಟಿ, ನೆರೆ ಪ್ರವಾಹ ಪರಿಹಾರ ಬಿಡುಗಡೆ, ಫಸಲ್ ಭಿಮಾ ಯೋಜನೆ ಹಣ, ಬೆಳೆ ವಿಮೆ ಹಣ ಕೂಡಲೇ ಬಿಡುಗಡೆ ಮಾಡಬೇಕು. ಸೆಕ್ಷನ್ 4(1),17, ಕಸ್ತೂರಿ ರಂಗನ್ ವರದಿ ಸಹಿತ ಮಾರಕ ಜನ ವಿರೋಧಿ ಯೋಜನೆಗಳನ್ನು ವಿರೋಧಿಸಿ, ಸೇರಿದಂತೆ ರೈತರ ವಿವಿಧ ಸಮಸ್ಯೆ ಗಳಿಗೆ ಸರ್ಕಾರ ಸ್ಪಂದಿಸಿ ಎಲ್ಲಾ ಬೇಡಿಕೆಗಳನ್ನು ಈಡೇರಿಸಬೇಕು. ಮಲೆನಾಡಿಗೆ ಮಾರಕವಾಗಿರುವ ಯೋಜನೆಗಳನ್ನು ಕೈಬಿಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಯಿತು.

ನಂತರ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ರೈತಪರ ಸಂಘಟನೆಗಳ ಮುಖಂಡರಾದ ಬಿ.ಎಸ್.ಶ್ರೀಧರರಾವ್, ಕಾನುವಳಿ ಚಂದ್ರಶೇಖರ್, ಪೂರ್ಣೇಶ್, ಅನಂತಯ್ಯ , ಗುಂಡಪ್ಪ ಸೇರಿದಂತೆ ರೈತಪರ ಸಂಘಟನೆಗಳ ಪದಾಧಿಕಾರಿಗಳು, ಕಾರ್ಯಕರ್ತರು ಹಾಜರಿದ್ದರು.

21 ಶ್ರೀ ಚಿತ್ರ 1-ಶೃಂಗೇರಿ ಪಟ್ಟಣದ ತಾಲೂಕು ಕಚೇರಿ ಎದುರು ರೈತಪರ ಸಂಘಟನೆಗಳ ಪದಾಧಿಕಾರಿಗಳು ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಾಂಕೇತಿಕ ಧರಣಿ ನಡೆಸಿ ಮನವಿ ಸಲ್ಲಿಸಿದರು.