ಶಾಂತಿಯುತವಾಗಿ ಹಬ್ಬ ಆಚರಿಸಲು ಮನವಿ

| Published : Aug 30 2024, 01:08 AM IST

ಸಾರಾಂಶ

ತರೀಕೆರೆ, ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಹಬ್ಬಗಳನ್ನು ಶಾಂತಿಯುತವಾಗಿ ಆಚರಿಸಬೇಕೆಂದು ಉಪ ವಿಭಾಗಾಧಿಕಾರಿ ಡಾ.ಕೆ.ಜಿ.ಕಾಂತರಾಜ್ ಮನವಿ ಮಾಡಿದ್ದಾರೆ.ತಾಲೂಕು ಆಡಳಿತದಿಂದ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ, ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಹಬ್ಬಗಳ ಆಚರಣೆ ಹಿನ್ನಲೆಯಲ್ಲಿ ಏರ್ಪಡಿಸಿದ್ದ ಪೂರ್ವಬಾವಿ ಶಾಂತಿ ಸಭೆಯಲ್ಲಿ ಮಾತನಾಡಿ, ಜಿಲ್ಲಾಧಿಕಾರಿಗಳು ವಿವಿಧ ಇಲಾಖೆಗಳ ಸಭೆ ನಡೆಸಿ ನೀಡಿದ ಸೂಚನೆಯಂತೆ ತಾಲೂಕು ಮಟ್ಟದಲ್ಲಿ ವಿವಿಧ ಇಲಾಖೆ ಮತ್ತು ಸಂಘಟನೆಗಳ ಸಭೆ ಕರೆಯಲಾಗಿದೆ. ಸಾರ್ವಜನಿಕರ ಸಹಕಾರದಿಂದ ಹಬ್ಬಗಳನ್ನು ಶಾಂತಿಯುತವಾಗಿ ಆಚರಿಸಬೇಕೆಂದು ಮನವಿ ಮಾಡಿದರು.

ಗಣೇಶ ಚತುರ್ಥಿ, ಈದ್ ಮಿಲಾದ್ ಪೂರ್ವಬಾವಿ ಶಾಂತಿ ಸಭೆಯಲ್ಲಿ ಡಾ.ಕೆ.ಜಿ.ಕಾಂತರಾಜ್

ಕನ್ನಡಪ್ರಭ ವಾರ್ತೆ, ತರೀಕೆರೆ

ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಹಬ್ಬಗಳನ್ನು ಶಾಂತಿಯುತವಾಗಿ ಆಚರಿಸಬೇಕೆಂದು ಉಪ ವಿಭಾಗಾಧಿಕಾರಿ ಡಾ.ಕೆ.ಜಿ.ಕಾಂತರಾಜ್ ಮನವಿ ಮಾಡಿದ್ದಾರೆ.

ತಾಲೂಕು ಆಡಳಿತದಿಂದ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ, ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಹಬ್ಬಗಳ ಆಚರಣೆ ಹಿನ್ನಲೆಯಲ್ಲಿ ಏರ್ಪಡಿಸಿದ್ದ ಪೂರ್ವಬಾವಿ ಶಾಂತಿ ಸಭೆಯಲ್ಲಿ ಮಾತನಾಡಿ, ಜಿಲ್ಲಾಧಿಕಾರಿಗಳು ವಿವಿಧ ಇಲಾಖೆಗಳ ಸಭೆ ನಡೆಸಿ ನೀಡಿದ ಸೂಚನೆಯಂತೆ ತಾಲೂಕು ಮಟ್ಟದಲ್ಲಿ ವಿವಿಧ ಇಲಾಖೆ ಮತ್ತು ಸಂಘಟನೆಗಳ ಸಭೆ ಕರೆಯಲಾಗಿದೆ. ಸಾರ್ವಜನಿಕರ ಸಹಕಾರದಿಂದ ಹಬ್ಬಗಳನ್ನು ಶಾಂತಿಯುತವಾಗಿ ಆಚರಿಸಬೇಕೆಂದು ಮನವಿ ಮಾಡಿದರು.

ಪುರಸಭೆ ಸದಸ್ಯ ಟಿ.ದಾದಾಪೀರ್ ಮಾತನಾಡಿ ಹಬ್ಬ ಆಚರಿಸುವುದು ಈ ದೇಶದ ಸಂಸ್ಕೃತಿ, ಸಂತೋಷದಿಂದ ಹಬ್ಬ ಆಚರಿಸೋಣ ಎಂದು ಹೇಳಿದರು.

ಪುರಸಭೆ ಸದಸ್ಯ ಟಿ.ಎಂ.ಬೋಜರಾಜ್ ಮಾತನಾಡಿ ಹಬ್ಬಗಳ ಆಚರಣೆ ಈ ನೆಲದ ಮೂಲ ಸಂಸ್ಕೃತಿ, ಇಲ್ಲಿ ಶಾಂತಿ ಸಾಮರಸ್ಯ ಇದೆ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಎಚ್.ಮಹೇಂದ್ರ ಮಾತನಾಡಿ ಇಲಾಖೆಗೆ ಸಹಕರಿಸೋಣ, ಹಬ್ಬಆಚರಿಸೋಣ ಎಂದು ಹೇಳಿದರು.ಪುರಸಭೆ ನಾಮಿನಿ ಸದಸ್ಯ ಆದಿಲ್ ಪಾಷ ಶಾಂತಿಯುತವಾಗಿ ಹಬ್ಬ ಆಚರಿಸೋಣ ಎಂದು ಹೇಳಿದರು.ಪುರಸಭೆ ಅದ್ಯಕ್ಷ ವಸಂತಕುಮಾರ್(ಕವಾಲಿ) ಉಪಾದ್ಯಕ್ಷೆ ಗಿರಿಜ ಪ್ರಕಾಶ್ ವರ್ಮ, ಪುರಸಭೆ ಮಾಜಿ ಸದಸ್ಯ ಮಿಲ್ಟ್ರಿ ಶ್ರೀನಿವಾಸ್, ಡಿವೈಎಸ್.ಪಿ.ಹಾಲಮೂರ್ತಿ ರಾವ್, ಪುರಸಭೆ ಮುಖ್ಯಾಧಿಕಾರಿ ಎಚ್.ಪ್ರಶಾಂತ್, ಪೋಲೀಸ್ ಇನ್ಸ್ ಪೆಕ್ಟರ್ ವಿರೇಂದ್ರ ಮತ್ತಿತರರು ಮಾತನಾಡಿದರು.

ಪುರಸಭೆ ಸದಸ್ಯ ಹಳಿಯೂರು ಕುಮಾರ್, ತಾಪಂತಿ ಕಾರ್ಯ ನಿರ್ವಹಣಾಧಿಕಾರಿ ಡಾ.ದೇವೇಂದ್ರಪ್ಪ ಉಪಸ್ಥಿತರಿದ್ದರು.

29ಕೆಟಿಆರ್.ಕೆ.8ಃ

ತರೀಕೆರೆಯಲ್ಲಿ ತಾಲೂಕು ಅಡಳಿದಿಂದ ನಡೆದ ಪೂರ್ವಬಾವಿ ಶಾಂತಿಸಭೆಯಲ್ಲಿ ಉಪ ವಿಭಾಗಾಧಿಕಾರಿ ಡಾ.ಕೆ.ಜಿ.ಕಾಂತರಾಜ್ ಮಾತನಾಡಿದರು. ಪುರಸಭೆ ಅಧ್ಯಕ್ಷ ವಸಂತಕುಮಾರ್ (ಕವಾಲಿ) ಉಪಾದ್ಯಕ್ಷೆ ಗಿರಿಜಾ ಪ್ರಕಾಶ್ ವರ್ಮ, ಡಿವೈಎಸ್ ಪಿ.ಹಾಲಮೂರ್ತಿರಾವ್, ಪುರಸಭೆ ಮುಖ್ಯಾಧಿಕಾರಿ ಎಚ್.ಪ್ರಶಾಂತ್ ಮತ್ತಿತರರು ಇದ್ದರು.