ಬಾಂಗ್ಲಾದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ ತಡೆಯಲು ಕೇಂದ್ರಕ್ಕೆ ಮನವಿ

| Published : Aug 10 2024, 01:40 AM IST

ಬಾಂಗ್ಲಾದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ ತಡೆಯಲು ಕೇಂದ್ರಕ್ಕೆ ಮನವಿ
Share this Article
  • FB
  • TW
  • Linkdin
  • Email

ಸಾರಾಂಶ

ಬಾಂಗ್ಲಾದೇಶದ ಹಿಂದೂಗಳ ಮೇಲಿನ ದೌರ್ಜನ್ಯಗಳ ವಿರುದ್ಧ ತಕ್ಷಣ ಮಧ್ಯಪ್ರವೇಶ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಸನಾತನ ಹಿಂದೂ ಧರ್ಮರಕ್ಷಣಾ ವೇದಿಕೆ ವತಿಯಿಂದ ಉಡುಪಿ ಜಿಲ್ಲಾಧಿಕಾರಿಗಳ ಮುಖೇನ ಮನವಿ ಸಲ್ಲಿಸಿತು.

ಕನ್ನಡಪ್ರಭ ವಾರ್ತೆ ಉಡುಪಿ

ಬಾಂಗ್ಲಾದೇಶದಲ್ಲಿ ಕೆಲವು ದಿನಗಳಿಂದ ಹಿಂದೂ ಶ್ರದ್ಧಾ ಕೇಂದ್ರಗಳ ದ್ವಂಸ, ಹಿಂದೂಗಳ ಮೇಲೆ ನಡೆಯುತ್ತಿರುವ ಹಿಂಸಾಚಾರ, ಕೊಲೆ ಹಾಗೂ ಮಹಿಳೆಯರ ಅತ್ಯಾಚಾರ ದೌರ್ಜನ್ಯಗಳ ವಿರುದ್ಧ ತಕ್ಷಣ ಮಧ್ಯಪ್ರವೇಶ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಸನಾತನ ಹಿಂದೂ ಧರ್ಮರಕ್ಷಣಾ ವೇದಿಕೆ ವತಿಯಿಂದ ಉಡುಪಿ ಜಿಲ್ಲಾಧಿಕಾರಿಗಳ ಮುಖೇನ ಮನವಿ ಸಲ್ಲಿಸಲಾಯಿತು.ಹಾಗೆಯೇ ಪೌರತ್ವ ಕಾಯ್ದೆಯಲ್ಲಿ ಮಾಡಿದ ತಿದ್ದುಪಡಿಯಂತೆ ಅಲ್ಪಸಂಖ್ಯಾತ ಹಾಗೂ ಅಸಹಾಯಕ ಬಾಂಗ್ಲಾ ದೇಶದ ಹಿಂದೂಗಳನ್ನು ಆದಷ್ಟು ಶೀಘ್ರವಾಗಿ ಭಾರತಕ್ಕೆ, ಕರೆತಂದು ಅವರಿಗೆ ಪುನರ್ವಸತಿಯನ್ನು ಕಲ್ಪಿಸಿ, ಈ ದೇಶದ ಪೌರತ್ವವನ್ನು ನೀಡಲು ತಕ್ಷಣ ಕ್ರಮ ಕೈಗೊಳ್ಳಬೇಕು, ಇದಕ್ಕೆ ಸಂಬಂಧಿಸಿದಂತೆ ಭಾರತ ದೇಶಕ್ಕೆ ನಿರಂತರ ಅಕ್ರಮವಾಗಿ ನುಸುಳುತ್ತಿರುವ ರೋಹಿಂಗ್ಯ ಮುಸ್ಲಿಮರು ಪ್ರಸಕ್ತ ಈಗಿನ ಪರಿಸ್ಥಿತಿಯಲ್ಲಿ ಭಾರತಕ್ಕೆ ಬಹಳ ಅಪಾಯಕಾರಿಯಾಗಬಹುದು. ವಿಶ್ವದಲ್ಲಿ ಭಾರತವು ಒಂದೇ ಹಿಂದೂ ರಾಷ್ಟ್ರವಾಗಿದ್ದು, ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿಯೇ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮತ್ತು ಮತಾಂಧ ಅನ್ಯಧರ್ಮೀಯರ ಅಟ್ಟಹಾಸಕ್ಕೆ ನಮ್ಮ ನಿರ್ದೋಷಿ ತಾಯಂದಿರು, ಅಕ್ಕತಂಗಿಯರು ಹಿಂದೂ ಸಮಾಜ ಬಾಂಧವರು ಬಲಿಯಾಗದಂತೆ ತಡೆಯುವ ಜವಾಬ್ದಾರಿಯು ಬಹುಸಂಖ್ಯಾತ ಹಿಂದೂಗಳು ಮತದಾನ ಮಾಡಿ ಚುನಾಯಿಸಿದಂತಹ ನಮ್ಮ ಕೇಂದ್ರ ಸರ್ಕಾರದ ಪ್ರಥಮ ಆದ್ಯತೆ ಆಗಿರಬೇಕು ಎಂದು ಸನಾತನ ಹಿಂದೂ ಧರ್ಮರಕ್ಷಣಾ ವೇದಿಕೆಯ ಮುಖಂಡರು ಆಗ್ರಹಿಸಿದರು.ಈ ಸಂದರ್ಭದಲ್ಲಿ ಸಂಘಟನೆಯ ಪ್ರಮುಖರಾದ ಮೋಹನ್ ಭಟ್, ಜಿತೇಶ್ ಉಡುಪಿ, ಶ್ರೀಧರ್ ಬಿಜೂರು, ಸಂದೀಪ್ ಮೂಡಬೆಟ್ಟು, ಚಿತ್ತನ್ ಮೂಳೂರು, ರವೀಂದ್ರ ಕಾಮತ್, ದಿನೇಶ್ ಪೂಜಾರಿ, ರಾಜ್ ಗೋಪಾಲ ಉಪ್ಪುಂದ, ನವೀನ್ ಕಾಂಚನ್ ಕುಂದಾಪುರ ಮೊದಲಾದವರು ಉಪಸ್ಥಿತರಿದ್ದರು.