ಸಾರಾಂಶ
ಕನ್ನಡಪ್ರಭ ವಾರ್ತೆ ಮಳವಳ್ಳಿ
ಟಿ.ನರಸೀಪುರದಿಂದ ಮಳವಳ್ಳಿ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪಟ್ಟಣದ ಕುಪ್ಪಸ್ವಾಮಿ ಸರ್ಕಲ್ ಬಳಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಅಭಿನಂದಿಸಿದರು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಪಿ.ರಾಜು ಹಾಗೂ ದೊಡ್ಡಯ್ಯ ನೇತೃತ್ವದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದದ ಮುಖಂಡರು ಹಾಗೂ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಭಿನಂದಿಸಿ ಜೈಕಾರ ಹಾಕಿದ್ದರು.
ಈ ವೇಳೆ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರನ್ನು ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಮುಖಂಡರ ಹಾಗೂ ಕಾರ್ಯಕರ್ತರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಆಯಿತು ಮಾಡೋಣ ಎಂದು ನಗುತ್ತಾ ಕೈಬೀಸಿ ತೆರಳಿದ್ದರು.ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಚಿಕ್ಕಲಿಂಗಯ್ಯ, ಬ್ಲಾಕ್ ಅಧ್ಯಕ್ಷರಾದ ಸಿ.ಪಿ.ರಾಜು, ದೊಡ್ಡಯ್ಯ, ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಆರ್.ಎನ್.ವಿಶ್ವಾಸ್, ಕೆಪಿಸಿಸಿ ಸದಸ್ಯ ಪುಟ್ಟಸ್ವಾಮಿ, ಕರ್ನಾಟಕ ಪ್ರದೇಶ ಕುರುಬರ ಸಂಘದ ರಾಜ್ಯ ನಿರ್ದೇಶಕ ಬಿ.ಪುಟ್ಟಬಸವಯ್ಯ, ತಾಲೂಕು ಅಧ್ಯಕ್ಷ ನಾಗರಾಜು, ತಾಪಂ ಮಾಜಿ ಉಪಾಧ್ಯಕ್ಷ ಸಿ.ಮಾಧು, ಮಾಜಿ ಸದಸ್ಯ ಶಿವಲಿಂಗಯ್ಯ, ಪುರಸಭೆ ಮಾಜಿ ಸದಸ್ಯ ಕಿರಣ್ ಶಂಕರ್, ಮುಖಂಡರಾದ ಬಂಕ್ ಮಹದೇವು, ರೋಹಿತ್ ಗೌಡ, ವೆಂಕಟೇಶ್, ಶಿವಣ್ಣ, ಮಂಚನಹಳ್ಳಿ ಮಹದೇವು, ಶಿವಣ್ಣ ಸೇರಿದಂತೆ ನೂರಾರು ಮಂದಿ ಇದ್ದರು.
ಅನುದಾನಕ್ಕೆ ಮನವಿ:ಪುರಸಭೆ ಅಧ್ಯಕ್ಷ ಪುಟ್ಟಸ್ವಾಮಿ ನೇತೃತ್ವದಲ್ಲಿ ಪಟ್ಟಣದ ಅಭಿವೃದ್ಧಿಗೆ 50 ಕೋಟಿ ರು. ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಸುತ್ತ ಉದ್ಯಾನವನ ನಿರ್ಮಾಣಕ್ಕೆ 2 ಕೋಟಿ ರು. ವಿಶೇಷ ಅನುದಾನ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು.
ಈ ವೇಳೆ ಮುಖ್ಯಾಧಿಕಾರಿ ಎಂ.ಸಿ.ನಾಗರತ್ನ ಹಾಗೂ ಸದಸ್ಯರು ಇದ್ದರು.;Resize=(128,128))
;Resize=(128,128))
;Resize=(128,128))
;Resize=(128,128))