ಸಾರಾಂಶ
ಗುಂಡ್ಲುಪೇಟೆ: ಬೆಂಗಳೂರಿನ ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್, ಪುರಸಭೆ ನೂತನ ಅಧ್ಯಕ್ಷ ಕಿರಣ್ ಗೌಡ, ಉಪಾಧ್ಯಕ್ಷೆ ಹೀನಾ ಕೌಸರ್ ಹೂಗುಚ್ಛ ನೀಡಿ ಅಭಿನಂದಿಸಿದರು.
ಗುಂಡ್ಲುಪೇಟೆ: ಬೆಂಗಳೂರಿನ ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್, ಪುರಸಭೆ ನೂತನ ಅಧ್ಯಕ್ಷ ಕಿರಣ್ ಗೌಡ, ಉಪಾಧ್ಯಕ್ಷೆ ಹೀನಾ ಕೌಸರ್ ಹೂಗುಚ್ಛ ನೀಡಿ ಅಭಿನಂದಿಸಿದರು.
ಪುರಸಭೆ ನೂತನ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರು ಪಟ್ಟಣದ ಅಭಿವೃದ್ಧಿಗೆ ವಿಶೇಷ ಅನುದಾನ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದರು.ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಶಾಸಕ ಎಚ್.ಎಂ.ಗಣೇಶ್ ಇದ್ದನಲ್ಲಯ್ಯ, ಬಿಡ್ರಪ್ಪ ಅನುದಾನ ಕೋಡೋಣ ಎಂದು ಹೇಳಿದರು ಎನ್ನಲಾಗಿದೆ.
ಸಚಿವ ವೆಂಕಟೇಶ್ ಗೆ ಅಭಿನಂದನೆ: ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅವರನ್ನು ವಿಧಾನಸೌಧದ ಕಚೇರಿಯಲ್ಲಿ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರು, ಸದಸ್ಯರು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.ಸದಸ್ಯರಾದ ರಮೇಶ್, ಅಣ್ಣಯ್ಯಸ್ವಾಮಿ, ಮೊಹಮದ್ ಇಲಿಯಾಸ್, ಎನ್.ಕುಮಾರ್, ಶ್ರೀನಿವಾಸ್, ಗೌಡ್ರ ಮಧು, ಪುರಸಭೆ ಮಾಜಿ ಉಪಾಧ್ಯಕ್ಷ ಕಾರ್ಗಳ್ಳಿ ಸುರೇಶ್, ಮಾಜಿ ಸದಸ್ಯ ಬಸವರಾಜು, ಮಹದೇವು, ಸಾಹುಲ್,ಆರ್.ಎಂ.ಮಹದೇವೇಗೌಡ, ಮಂಜುನಾಥ್, ನವೀದ್ ಖಾನ್ ಇದ್ದರು.