ಸಾರಾಂಶ
ಕನ್ನಡಪ್ರಭ ವಾರ್ತೆ ಹರಿಹರ ನಗರದಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ವತಿಯಿಂದ ಶುಕ್ರವಾರ ನಗರಸಭೆ ಪೌರಾಯುಕ್ತ ಸುಭ್ರಮಣ್ಯ ಶೆಟ್ಟಿ ಅವರಿಗೆ ಮನವಿ ಸಲ್ಲಿಸಲಾಯಿತು.
ಸಂಘಟನೆ ಪದಾಧಿಕಾರಿಗಳು ಮಾತನಾಡಿ, ನಗರದಲ್ಲಿ ಮೂಲ ಸೌಕರ್ಯಗಳು ಸಂಪೂರ್ಣ ಹದಗೆಟ್ಟಿವೆ. ನಗರದಲ್ಲಿ ನಗರಸಭೆ ಇದೆಯೋ, ಇಲ್ಲವೋ ಎನ್ನುವಂತೆ ದುಸ್ಥಿತಿಗೆ ಬಂದುತಲುಪಿದೆ ಎಂದು ಬೇಸರ ವ್ಯಕ್ತಪಡಿಸಿದರು.ರಸ್ತೆ, ಕುಡಿಯುವ ನೀರು, ಚರಂಡಿ, ಪಾರ್ಕ್‌ಗಳ ಅಭಿವೃದ್ಧಿ, ಸುಸಜ್ಜಿತ ಸಂತೆ ಮಾರುಕಟ್ಟೆ, ವ್ಯವಸ್ಥಿತ ಪುಟ್‍ಪಾತ್, ಶುದ್ಧ ಕುಡಿಯುವ ನೀರಿನ ಘಟಕಗಳ ಮರುಚಾಲನೆ, ಬೀದಿನಾಯಿಗಳ ಹಾವಳಿ ನಿಯಂತ್ರಣ, ಬೇಸಿಗೆ ಕುಡಿಯುವ ನೀರಿನ ವ್ಯವಸ್ಥೆ ಸುಧಾರಣೆಗಳಿಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ನಗರದ ಅಭಿವೃದ್ಧಿ ದೃಷ್ಟಿಯಿಂದ ಮುಂಬರುವ 2025- 2026ರ ಆಯವ್ಯಯದಲ್ಲಿ ಈ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಿ, ನಿಗದಿತ ಅನುದಾನ ಮೀಸಲಿಡಬೇಕು. ನಿರ್ಲಕ್ಷ್ಯ ಮಾಡಿದಲ್ಲಿ ಸಂಘದಿಂದ ನಗರಸಭೆ ಮುಂಭಾಗ ಧರಣಿ ನಡೆಸುವುದಾಗಿ ಎಚ್ಚರಿಕೆ ನೀಡಿದರು.ತಾಲೂಕು ಅಧ್ಯಕ್ಷ ವೈ.ರಮೇಶ್ ಮಾನೆ, ನಗರ ಘಟಕ ಅಧ್ಯಕ್ಷ ಪ್ರೀತಮ್ ಬಾಬು, ಗೌರವಾಧ್ಯಕ್ಷ ಸಿದ್ದಪ್ಪ, ಬಿ.ಮುಗ್ದಮ್, ವಕೀಲ ಹಾಲೇಶ್, ಪದಾಧಿಕಾರಿಗಳಾದ ಅಲಿ ಅಕ್ಟರ್, ರಾಮು, ರಾಜು ಬಾವಿಕಟ್ಟಿ, ಜಮೀರ್, ಚಂದ್ರಣ್ಣ ಮೇದಾರ್, ಗೋಪಿನಾಥ್, ಗಣೇಶ್, ಗಿರೀಶ್ ಉಪಸ್ಥಿತರಿದ್ದರು.
- - - -03ಎಚ್‍ಆರ್‍ಆರ್02:ಹರಿಹರ ನಗರಕ್ಕೆ ಮೂಲ ಸೌಕರ್ಯಗಳ ಒದಗಿಸುವಂತೆ ಒತ್ತಾಯಿಸಿ ನಗರಸಭೆ ಪೌರಾಯುಕ್ತರಿಗೆ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಮನವಿ ಸಲ್ಲಿಸಲಾಯಿತು.