ಕನ್ನಡಪ್ರಭ ವಾರ್ತೆ, ಚಿಕ್ಕಬಳ್ಳಾಪುರ:

ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯಗಳು ಸೇರಿ ಅನೇಕ ಸೌಲಭ್ಯಗಳು ಮಕ್ಕಳಿಗೆ ದೊರೆಯುವುದರಿಂದ ಪೋಷಕರು ತಪ್ಪದೆ ತಮ್ಮ ಮಕ್ಕಳನ್ನು ದಾಖಲಿಸಿ ಅವರ ಭವಿಷ್ಯ ಉತ್ತಮಪಡಿಸಿ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ವಿ. ರಮೇಶ್ ಮನವಿ ಮಾಡಿದರು.

ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಸರ್ಕಾರಿ ಶಾಲೆಗಳಿಗೆ ದಾಖಲಾಗುವ ಮಕ್ಕಳಿಗೆ ಆರಂಭದಲ್ಲಿಯೇ ಪಠ್ಯಪುಸ್ತಕ, ಸಮವಸ್ತ್ರ ವಿತರಣೆ ಮಾಡಲು ಸೂಚನೆ ನೀಡಲಾಗಿದೆ. ಇದರ ಜತೆಗೆ ಜಿಲ್ಲೆಯ ಸರ್ಕಾರಿ ಶಾಲೆಗಳ ಎಲ್ಲಾ ಅರ್ಹ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ವಿದ್ಯಾರ್ಥಿ ವೇತನವನ್ನು ನೇರವಾಗಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗುತ್ತಿದೆ. ಈ ಎಲ್ಲಾ ಸೌಲಭ್ಯ ಸರ್ಕಾರಿ ಶಾಲೆಯ ಮಕ್ಕಳು ಬಳಸಿಕೊಳ್ಳಿ ಎಂದರು.

ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ ಎಲ್ಲಾ ಸರ್ಕಾರಿ ಪ್ರಾಥಮಿಕ ಸರ್ಕಾರಿ ಶಾಲೆಗಳ ಬಲವರ್ಧನೆ ಮಾಡಲಾಗುತ್ತಿದೆ. ಮಕ್ಕಳಲ್ಲಿನ ಸುಪ್ತ ಪ್ರತಿಭೆಯ ಅನಾವರಣಕ್ಕಾಗಿ ಪ್ರತಿಭಾ ಕಾರಂಜಿ, ಕಲಿಕಾ ಹಬ್ಬ ಮತ್ತು ಕಲೋತ್ಸವ ಕಾರ್ಯಕ್ರಮಗಳು, ವಿಜ್ಞಾನ ಮಾದರಿ ತಯಾರಿಕಾ ಸ್ಪರ್ಧೆ ನಡೆಸುವ ಮೂಲಕ ಶಾಲಾ ಮಕ್ಕಳ ಪ್ರತಿಭಾ ಪ್ರದರ್ಶನಕ್ಕೆ ಅವಕಾಶ ಒದಗಿಸಲಾಗುತ್ತಿದೆ. ದಾಖಲಾತಿ ಉತ್ತಮಗೊಳಿಸುವ ಉದ್ದೇಶದಿಂದ ಆಸಕ್ತ ಹಳೆ ವಿದ್ಯಾರ್ಥಿಗಳು, ದಾನಿಗಳು ಹಾಗೂ ಎನ್.ಜಿ.ಓ ಗಳು ಶಾಲೆಗಳನ್ನು ದತ್ತು ಪಡೆದು ಶಾಲೆಗಳಿಗೆ ಅಗತ್ಯ ಮೂಲ ಸೌಲಭ್ಯಗಳನ್ನು ಒದಗಿಸಲು ಅವಕಾಶ ಕಲ್ಪಿಸಲಾಗಿದೆ. ಶಾಲೆಗಳಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘಗಳನ್ನು ರಚಿಸಿ ಸಕ್ರಿಯಗೊಳಿಸಲಾಗಿದೆ. ಜೂನ್ ೧ ರಂದು ಶಾಲೆಗಳಲ್ಲಿ ಸ್ಥಳೀಯ ಶಾಸಕರು/ಜನಪ್ರತಿನಿಧಿಗಳು, ಹಳೇ ವಿದ್ಯಾರ್ಥಿಗಳ ಸಂಘ, ಎನ್.ಜಿ.ಓ., ಪೋಷಕರು, ಎಸ್.ಡಿ.ಎಂ.ಸಿ., ಶಿಕ್ಷಣಾಸಕ್ತರನ್ನೊಳಗೊಂಡಂತೆ ಎಲ್ಲರೊಂದಿಗೆ ಪೋಷಕ ಶಿಕ್ಷಕರ ಮಹಾಸಭೆಯನ್ನು ಆಯೋಜಿಸಲಾಗುತ್ತಿದೆ. ನಮ್ಮ ಶಾಲೆ ಎಂಬ ಹೆಮ್ಮೆಯಿದ್ದರೆ ಬಲವರ್ಧನೆ ಸಾಧ್ಯ ಎಂದು ತಿಳಿಸಿದರು.

ಎಲ್ಲಾ ಅರ್ಹ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ವಿದ್ಯಾರ್ಥಿ ವೇತನವನ್ನು ನೇರವಾಗಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗುತ್ತಿದೆ. ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯ ಅಡಿ ಎಲ್ಲಾ ಸರ್ಕಾರಿ ಪ್ರಾಥಮಿಕ ಸರ್ಕಾರಿ ಶಾಲೆಗಳ ಬಲವರ್ಧನೆ ಮಾಡಲಾಗುತ್ತಿದೆ. ಮಕ್ಕಳಲ್ಲಿನ ಸುಪ್ತ ಪ್ರತಿಭೆಗಳ ಅನಾವರಣಕ್ಕಾಗಿ ಪ್ರತಿಭಾ ಕಾರಂಜಿ, ಕಲಿಕಾ ಹಬ್ಬ ಮತ್ತು ಕಲೋತ್ಸವ ಕಾರ್ಯಕ್ರಗಳು, ವಿಜ್ಞಾನ ಮಾದರಿ ತಯಾರಿಕಾ ಸ್ಪರ್ಧೆಗಳನ್ನು ನಡೆಸುವ ಮೂಲಕ ಸರ್ಕಾರಿ ಶಾಲಾ ಮಕ್ಕಳ ಪ್ರತಿಭಾ ಪ್ರದರ್ಶನಕ್ಕೆ ಅವಕಾಶ ಒದಗಿಸಲಾಗುತ್ತಿದೆ. ಪೊಷಕರು ಸರ್ಕಾರದಿಂದ ಸಿಗುವ ವಿಶೇಷ ಪ್ರಯೋಜನಗಳನ್ನು ಪಡೆಯುವ ಸಲುವಾಗಿ ತಮ್ಮ ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಿಸುವಂತೆ ಅವರು ಪೋಷಕರಲ್ಲಿ ಮನವಿ ಮಾಡಿದರು.


ಸಿಕೆಬಿ-2 ಡಿಡಿಪಿಐ ವಿ.ರಮೇಶ್